ಐಎಂಎ ಹಗರಣ : ಮನ್ಸೂರ್ ಖಾನ್‌ಗೆ 14 ದಿನ ನ್ಯಾಯಾಂಗ ಬಂಧನ

Recommended Video

      ಐಎಂಎ ಹಗರಣದ ರೂವಾರಿ ಮನ್ಸೂರ್ ಖಾನ್ | Oneindia Kannada

      ಬೆಂಗಳೂರು, ಆಗಸ್ಟ್ 01 : ಬಹುಕೋಟಿ ರೂಪಾಯಿ ಐಎಂಎ ಹಗರಣದ ರೂವಾರಿ ಮನ್ಸೂರ್ ಖಾನ್ ಜೈಲು ಸೇರಿದ್ದಾನೆ. 14 ದಿನಗಳ ಕಾಲ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದೆ.

      ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಮನ್ಸೂರ್‌ ಖಾನ್‌ರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರಿನಲ್ಲಿರುವ ಇಡಿ ವಿಶೇಷ ಕೋರ್ಟ್ 14 ದಿನಗಳ ಕಾಲ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

      IMA scam : Mansoor Khan Sent To Judicial Custody

      ಜುಲೈ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಮನ್ಸೂರ್ ಖಾನ್‌ರನ್ನು ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಪಡೆದುಕೊಂಡಿತ್ತು. ನಿರಂತರ ವಿಚಾರಣೆ ಬಳಿಕ ಪುನಃ 5 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿತ್ತು.

      ಕರ್ನಾಟಕ ಸರ್ಕಾರ ಐಎಂಎ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಇಂದು ಎಸ್‌ಐಟಿ ಆರೋಪಿಯನ್ನು ತನ್ನ ವಶಕ್ಕೆ ಪಡೆಯಲು ಬಯಸಿತ್ತು. ಆದರೆ, ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

      ಆಗಸ್ಟ್ 14ರ ತನಕ ಮನ್ಸೂರ್ ಖಾನ್‌ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಕಾರಣ ಆತನನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+