ಐಎಂಎ ವಂಚನೆ : 101 ಬ್ಯಾಂಕ್ ಖಾತೆಯಿಂದ 116 ಕೋಟಿ ರು ವಶ
ಬೆಂಗಳೂರು, ಜುಲೈ 01: ಐ.ಎಂ.ಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರ(ಕಾರ್ಪೋರೇಟರ್) ಬಂಧನವಾಗಿದೆ. ಜೊತೆಗೆ ಹಲವು ಮಹತ್ವದ ದಾಖಲಾತಿಗಳ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಇದುವರೆಗೆ ರೂ.1,16,94,307 ಹಣ ಇದ್ದ ಐ.ಎಂ.ಎ ಒಡೆತನದ ಕಂಪನಿಗಳ ಹೆಸರಿನ ಒಟ್ಟು 101 ಬ್ಯಾಂಕ್ ಖಾತೆಗಳ ಪತ್ತೆಯಾಗಿದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.
ಐ.ಎಂ.ಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ಪೊಲೀಸ್ ತನಿಖಾ ತಂಡವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ (ನಾಮಿನೇಟೆಡ್) ಸದಸ್ಯರಾದ ಸೈಯದ್ ಮುಜಾಹಿದ್ ರವರನ್ನು ಜೂನ್ 30ರಂದು ದಸ್ತಗಿರಿ ಮಾಡಿದೆ.
ಫ್ರೇಜರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆರೋಪಿ ಸೈಯದ್ ಮುಜಾಹಿದ್ ರವರ ವಾಸದ ಮನೆಯನ್ನು ಶೋಧನೆ ಮಾಡಲಾಗಿದ್ದು, ಶೋಧನಾ ಸಮಯದಲ್ಲಿ ಕೃತ್ಯಕ್ಕೆ ಸಂಬಂಧಿಸಿದ ಹಲವು ಮಹತ್ವದ ಕಾಗದ ಪತ್ರಗಳು, ಒಂದು ಫಾರ್ಚುನರ್ ಕಾರು ಹಾಗೂ ಎರಡು ಮೊಬೈಲ್ ಪೋನ್‍ಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಧೀಶರು ಆರೋಪಿಯನ್ನು 13 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿರುತ್ತಾರೆ. ಆರೋಪಿಯ ವಿಚಾರಣೆಯು ತೀವ್ರಗತಿಯಲ್ಲಿ ಇರುತ್ತದೆ.

ಇದಲ್ಲದೇ, ತನಿಖಾ ಕಾಲದಲ್ಲಿ ಐ.ಎಂ.ವಿ ಒಡೆತನದ ವಿವಿಧ ಕಂಪನಿಗಳ ಹೆಸರಿನಲ್ಲಿದ್ದ ಒಟ್ಟು 101 ವಿವಿಧ ಬ್ಯಾಂಕ್ ಖಾತೆಗಳನ್ನು ಪತ್ತೆ ಹಚ್ಚಿದ ಎಸ್.ಐ.ಟಿ ತಂಡವು ಈ ಖಾತೆಗಳಲ್ಲಿ ರೂ. 1,16,94,307 ಹಣ ಇರುವುದನ್ನು ತಿಳಿದು ಈ ಎಲ್ಲಾ ಖಾತೆಗಳ ಮುಂದಿನ ವ್ಯವಹಾರವನ್ನು ಸ್ಥಗಿತಗೊಳಿಸುವ ಕ್ರಮ ತೆಗೆದುಕೊಂಡಿರುತ್ತದೆ.
ಈ ಕಾರ್ಯಾಚರಣೆಯನ್ನು ಐ.ಎಂ.ಎ ಪ್ರಕರಣದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಬಿ.ಆರ್.ರವಿಕಾಂತೇಗೌಡ, ಐಪಿಎಸ್, ಡಿಐಜಿ & ಜಂಟಿ ಪೊಲೀಸ್ ಆಯುಕ್ತರು, ಅಪರಾಧ, ಬೆಂಗಳೂರು ನಗರ ರವರ ಮತ್ತು ಗಿರೀಶ್.ಎಸ್, ಐಪಿಎಸ್, ಡಿಸಿಪಿ, ಅಪರಾಧ, ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿಗಳಾದ ಕೆ.ರವಿಶಂಕರ್, ಅಬ್ದುಲ್ ಖಾದರ್, ಬದ್ರಿನಾಥ್ ಹಾಗೂ ಪೊಲೀಸ್ ಇನ್ಸ್‍ಪೆಕ್ಟರ್ ಕೆ.ಅಂಜನ್‍ಕುಮಾರ್ ರವರನ್ನೊಳಗೊಂಡ ವಿಶೇಷ ಪೊಲೀಸ್ ತನಿಖಾ ತಂಡವು ನಿರ್ವಹಿಸಿರುತ್ತವೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications