ಐಎಂಎ ಹಗರಣ : ಸರ್ಕಾರಿ ನೌಕರನನ್ನು ಬಂಧಿಸಿದ ಎಸ್‌ಐಟಿ!

ಬೆಂಗಳೂರು, ಜುಲೈ 05 : ಬಹುಕೋಟಿ ರೂಪಾಯಿ ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಸರ್ಕಾರಿ ಅಧಿಕಾರಿಯೊಬ್ಬರನ್ನು ಬಂಧಿಸಿದೆ. ಐಎಂಎ ಗ್ರೂಪ್ ಮುಖ್ಯಸ್ಥ ಮನ್ಸೂರ್ ಅಲಿ ಖಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ.

ಶುಕ್ರವಾರ ಎಸ್‌ಐಟಿ ಅಧಿಕಾರಿಗಳು ಬೆಂಗಳೂರು ನಗರ ಉತ್ತರ ವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಅವರನ್ನು ಬಂಧಿಸಿದೆ. ನಾಗರಾಜ್ ಅವರು ಹಣ ಪಡೆದು ಐಎಂಎ ಗ್ರೂಪ್‌ ಪರವಾದ ವರದಿ ನೀಡಿದ್ದರು ಎಂಬುದು ಆರೋಪವಾಗಿದೆ.

ಐಎಂಎ ಸಂಸ್ಥೆಯ ನಿಯಮ ಬಾಹಿರ ಚಟುವಟಿಕೆ ಕುರಿತು ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಅವರಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿತ್ತು. 4.5 ಕೋಟಿ ರೂ. ಹಣ ಪಡೆದು ನಾಗರಾಜ್ ಐಎಂಎ ಪರವಾಗಿ ವರದಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

SIT

ಐಎಂಎ ಹಗರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಬಿಡಿಎ ಎಕ್ಸಿಕ್ಯುಟಿವ್ ಇಂಜಿನಿಯರ್ ಪಿ.ಡಿ.ಕುಮಾರ್ ಅವರನ್ನು ಬಂಧಿಸಿದೆ. ಪ್ರಸ್ತುತ ಅವರು ಪೊಲೀಸ್ ವಶದಲ್ಲಿದ್ದಾರೆ.

ಬೆಂಗಳೂರು ನಗರದಲ್ಲಿ ಐಎಂಎಗೆ ಸೇರಿದ ಆಸ್ತಿಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಹಣ, ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಜುಲೈ 3ರಂದು ನಡೆಸಿದ ದಾಳಿಯಲ್ಲಿ ಸುಮಾರು 40 ಲಕ್ಷ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+