ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ವಂಚನೆ ಹಗರಣ: ಮತ್ತೊಬ್ಬ ಆರೋಪಿ ಉಮರ್ ಷರೀಫ್ ಬಂಧನ

|
Google Oneindia Kannada News

ಬೆಂಗಳೂರು, ಜುಲೈ 18: ಕೋಟ್ಯಂತರ ರೂಪಾಯಿ ವಂಚನೆ ಎಸಗಿರುವ ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಜತೆ ನಿಕಟ ಸಂಪರ್ಕ ಹೊಂದಿದ್ದ ಉಮರ್ ಷರೀಫ್ (42) ಎಂಬಾತನನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಪೊಲೀಸರು ಬಂಧಿಸಿದ್ದಾರೆ. ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ವಶಕ್ಕೆ ಪಡೆದುಕೊಳ್ಳಲಾಗಿದೆ.

ಎಸ್ಐಟಿ ವಿಚಾರಣೆ ಬಳಿಕ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದೇನು? ಎಸ್ಐಟಿ ವಿಚಾರಣೆ ಬಳಿಕ ರೋಷನ್ ಬೇಗ್ ಪ್ರತಿಕ್ರಿಯೆ ನೀಡಿದ್ದೇನು?

ಉಮರ್ ಷರೀಫ್, ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ 'ಅಲ್ ಬಶೀರ್' ಎಂಬ ಶಾಲೆ ನಡೆಸುತ್ತಿದ್ದಾನೆ. ಆತ ಐದು ವರ್ಷಗಳಿಂದ ಮನ್ಸೂರ್ ಖಾನ್ ಜತೆ ಇದ್ದು, ಐಎಂಎ ಪರ ಚಟುವಟಿಕೆಗಳನ್ನು ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ.

IMA scam SIT arrested Umar Shariff propagating for mansoor khan

ಅಲ್ಲದೆ, ಮನ್ಸೂರ್‌ನಿಂದ 60 ಲಕ್ಷ ರೂಪಾಯಿ ಹಣ ಮತ್ತು 15 ಲಕ್ಷ ರೂ. ಮೌಲ್ಯದ ವಾಹನವನ್ನು ಪಡೆದುಕೊಂಡಿದ್ದ ಎಂದು ಪೊಲೀಸ್ ಉಪ ಆಯುಕ್ತ (ಅಪರಾಧ) ಗಿರೀಶ್ ಎಸ್. ತಿಳಿಸಿದ್ದಾರೆ.

ಮುಂದಿನ 24 ಗಂಟೆಗಳಲ್ಲಿ ಭಾರತಕ್ಕೆ ಬರುತ್ತೇನೆ: ಮನ್ಸೂರ್ ಖಾನ್ಮುಂದಿನ 24 ಗಂಟೆಗಳಲ್ಲಿ ಭಾರತಕ್ಕೆ ಬರುತ್ತೇನೆ: ಮನ್ಸೂರ್ ಖಾನ್

ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 16ರಂದು ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದ ಎಸ್‌ಐಟಿ ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.

English summary
Special Investigation Team has arrested Umar Shariff, related to IMA scam. Shariff is running a school 'Al Basheer' in Bannerughatta road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X