ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೋಷನ್ ಬೇಗ್ ನಾಳೆ ಜೈಲಿನಿಂದ ಬಿಡುಗಡೆ ಆಗ್ತಾರಾ ?

|
Google Oneindia Kannada News

ಬೆಂಗಳೂರು, ಡಿಸೆಂಬರ್ 04: ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೆ ಒಳಗಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಜಾಮೀನು ಸಿಗುತ್ತಾ ? ಜೈಲಿನಿಂದ ಹೊರಗೆ ಬರುತ್ತಾರಾ ? ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಮುಂದುವರೆಯುತ್ತಾರೆ. ಎಲ್ಲವನ್ನು ತೀರ್ಮಾನಿಸುವುದು ಅವರ ಸಲ್ಲಿಸಿರುವ ಜಾಮಿನು ಅರ್ಜಿ ಏನಾಯ್ತು ಎಂಬುದರ ವಿವರ ಇಲ್ಲಿದೆ ನೋಡಿ.

ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೊಪಿ ಮನ್ಸೂರ್‌ ಖಾನ್ ನಿಂದ ಸುಮಾರು ನಾನೂರು ಕೋಟಿ ರೂಪಾಯಿ ಪಡೆದ ಆರೋಪ ರೋಷನ್ ಬೇಗ್ ಮೇಲಿದೆ. ಇದನ್ನು ಮನ್ಸೂರ್ ಖಾನ್‌ ಖುದ್ದು ಅಡಿಯೋ ಮಾಡಿ ನಗರ ಪೊಲೀಸ್ ಆಯುಕ್ತರಿಗೆ ಅಡಿಯೋ ರವಾನೆ ಮಾಡಿದ್ದರು. ಐಎಂಎ ವಂಚನೆ ಪ್ರಕರಣವನ್ನು ವಿಶೇಷ ತನಿಖಾ ತಂಡ ತನಿಖೆಗೆ ಕೈಗೆತ್ತಿಕೊಂಡಿತ್ತು. ಈ ವೇಳೆಯೇ ರೋಷನ್ ಬೇಗ್ ವಿಚಾರಣೆಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಾಗಿದ್ದರು. ರೋಷನ್ ಬೇಗ್ ಅಲ್ದಾಣದ ಬಳಿ ವಿಚಾರಣೆಗೆ ಬರಲು ನಿರಾಕರಿಸಿದ್ದರು. ಇದೇ ಹಂತದಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಐಎಂಎ ವಂಚನೆ ಪ್ರಕರಣದಲ್ಲಿ ಅನೇಕ ರಾಜಕಾರಣಿಗಳ ಹೆಸರು ಕೇಳಿ ಬಂದಿತ್ತು. ಅದರಲ್ಲಿ ರೋಷನ್ ಬೇಗ್ ಅವರ ಹೆಸರು ಅಗ್ರ ಸ್ಥಾನದಲ್ಲಿತ್ತು. ಸಿಬಿಐ ಅಧಿಕಾರಿಗಳು ಪ್ರಕರಣ ತನಿಖೆ ಮುಂದುವರೆಸಿದರೂ ರಾಜಕಾರಣಿಗಳ ಪಾತ್ರ ಇರುವ ಬಗ್ಗೆ ಎಲ್ಲೂ ಪ್ರಸ್ತಾಪ ಮಾಡಲೇ ಇಲ್ಲ. ಐಎಂಎ ವಂಚನೆ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಅಧಿಕಾರಿಗಳ ವಿಚಾರಣೆ ಮತ್ತು ಅವರ ವಿರುದ್ಧ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸುವ ಕಾರ್ಯದಲ್ಲಿ ತೊಡಗಿತ್ತು. ಇತ್ತೀಚೆಗೆ ಇದ್ದಕ್ಕಿದ್ದಂತೆ ರೋಷನ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬರಲು ಸೂಚಿಸಿತ್ತು. ವಿಚಾರಣೆಗೆ ಹಾಜರಾದ ಬೇಗ್ ವಾಪಸು ಮನೆಗೆ ಬರಲಿಲ್ಲ. ಬದಲಿಗೆ ಸಿಬಿಐ ನಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಜೈಲಿನಿಂದಲೂ ಪೊಲೀಸ್ ಕಸ್ಟಡಿಗೆ ಪಡೆದು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಅನಾರೋಗ್ಯದ ಕಾರಣ ನೀಡಿ ಚಿಕಿತ್ಸೆ ಕೂಡ ಪಡೆದಿದ್ದರು.

Ima Scam: Will Roshan Baig Released From Jail ?

ಜಾಮೀನು ಕೋರಿ ಅರ್ಜಿ : ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಜಾಮೀನು ಕೋರಿ ರೋಷನ್ ಬೇಗ್ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಅವರು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ನಡೆಯಿತು. 2018 ರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಪೊಲೀಸರು ಬಂಧಿಸಿದ್ದಾರೆ. ಸಿಬಿಐ ತನಿಖೆಗೆ ನಮ್ಮ ಕಕ್ಷಿದಾರರು ಸ್ಪಂದಿಸಿದ್ದಾರೆ. ಯಾವಾಗ ಬೇಕಾದರೂ ವಿಚಾರಣೆಗೆ ಕರೆದರೆ ಹೋಗಲು ಸಿದ್ಧರಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹುರುಳಿಲ್ಲ. ಈಗಾಗಲೇ 36 ಆರೋಪಿಗಳ ಪೈಕಿ 35 ಮಂದಿಗೆ ಜಾಮೀನು ಲಭ್ಯವಾಗಿದೆ. ರೋಷನ್ ಬೇಗ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಅವರು ನರಳುತ್ತಿದ್ದಾರೆ. ನ್ಯಾಯಾಲಯ ಯಾವುದೇ ಷರತ್ತು ವಿಧಿಸಿದರು ಅದನ್ನು ಪಾಲಿಸಲಿದ್ದು, ಜಾಮೀನು ನೀಡಬೇಕು ಎಂದು ಬೇಗ್ ಪರ ವಕೀಲರು ವಾದ ಮಂಡಿಸಿದರು.

Recommended Video

ಸ್ತಬ್ದವಾಗತ್ತಾ ಕರ್ನಾಟಕ | Oneindia Kannada

ಇದಕ್ಕೆ ಅಕ್ಷೇಫ ವ್ಯಕ್ತಪಡಿಸಿದ ಸಿಬಿಐ ವಿಶೇಷ ಅಭಿಯೋಜಕರು, ರೋಷನ್ ಬೇಗ್ ಪ್ರಭಾವಿ ವ್ಯಕ್ತಿ. ಅವರು ಹೊರಗೆ ಬಂದರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆಯಿದೆ. ನಾನೂರು ಕೋಟಿ ರೂಪಾಯಿ ವಂಚನೆ ಮಾಡಿರುವ ಗಂಭೀರ ಆರೋಪ ಇರುವುದರಿಂದ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ವಾದ ಮತ್ತು ಪ್ರತಿವಾದ ಆಲಿಸಿದ ಸಿಬಿಐ ವೀಶೇಷ ನ್ಯಾಯಾಲಯ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಜಾಮೀನು ಸಿಕ್ಕರೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ತಪ್ಪಿದರೆ ಹೈಕೋರ್ಟ್‌ ಮೊರೆ ಹೋಗಬೇಕಾಗುತ್ತದೆ.

English summary
Former minister Roshan Baig, who was arrested by CBI police in the IMA fraud case, has filed a bail petition in CBI special court. Advocate for Baig has argued for bail because of illness. The CBI has filed an objection not to grant bail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X