Bengaluru Rain: ಬೆಂಗಳೂರಿಗೆ ಗುಡ್ ನ್ಯೂಸ್ ಕೊಟ್ಟ ಐಎಂಡಿ: ಮುಂದಿನ 3 ದಿನ ಮತ್ತೆ ಜೋರು ಮಳೆ!

ಬೆಂಗಳೂರು ಮೇ 9: ಸಿಲಿಕಾನ್ ಸಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸಂಜೆ ಧಾರಾಕಾರ ಮಳೆಯಾಗುತ್ತಿದ್ದು ಬೆಂಗಳೂರಿಗರು ಸಂತೋಷಗೊಂಡಿದ್ದಾರೆ. ಇನ್ನೆರೆಡು ದಿನ ಇದೇ ರೀತಿ ರಾಜ್ಯ ರಾಜಧಾನಿಯಲ್ಲಿ ಮಳೆಯಾದರೆ ಬೆಂಗಳೂರು ಮತ್ತೆ ಸಹಜ ಸ್ಥಿತಿಯತ್ತ ಮರಳಿ ಕೂಲ್ ಕೂಲ್ ಆಗಲಿದೆ. ಕಳೆದ ತಿಂದಗಳು ಮಳೆಯನ್ನೇ ಕಾಣದೆ ಕಂಗಾಲಾಗಿದ್ದ ಜನಕ್ಕೆ ಮೇ ತಿಂಗಳಲ್ಲಿ ವರುಣ ಸಿಹಿಯನ್ನು ಹಂಚಿದ್ದಾನೆ. ಅಲ್ಲದೆ ಭಾನುವಾರದವರೆಗೂ (ಮೇ 12) ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಇದರಿಂದಾಗಿ ಹಗಲಿನಲ್ಲಿ ಸೂರ್ಯನ ಬಿಸಿ ಶಾಖದಿಂದ ಕೊಂಚ ರಿಲೀಫ್ ಸಿಕ್ಕಂತಾಗಿದೆ. ನಿತ್ಯ ಬೇಸರಿಂದ ಮನೆಯಿಂದ ಹೊರಬರುತ್ತಿದ್ದ ಜನ ಸದ್ಯ ಖುಷಿ ಖುಷಿಯಿಂದ ಹೊರಬರುತ್ತಿರುವುದು ಕಂಡು ಬರುತ್ತಿದೆ. ಇನ್ನೂ ಮೂರು ದಿನಗಳ ಕಾಲ ಬೆಂಗಲೂರಿನಲ್ಲಿ ಮಧ್ಯಾಹ್ನ ಅಥವಾ ಸಂಝೆ ಮಳೆಯಾಗಲಿದ್ದು, ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಕೂಡ ಇದೆ. ಹೀಗಾಗಿ ಜನ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

IMD has predicted heavy rains in Bengaluru for the next three days

ಕಳೆದ ದಿನ ಬುಧವಾರ (ಮೇ 8) ಸಂಜೆ ಬೆಂಗಳೂರಿನಲ್ಲಿ ಅಧಿಕ ಮಳೆಯಾಗಿದ್ದು ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಸಾಲು ಸಾಲು ಮರಗಳು ಧರೆಗೆ ಉರುಳಿವೆ. ಇದರಿಂದ ವಾಹನ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ವಿಧಾನಸೌಧ, ಕೆಆರ್ ಸರ್ಕಲ್, ಮಾಗಡಿ ರಸ್ತೆ ಸೇರಿದಂತೆ ಹಲವೆಡೆ ಕಳೆದ ದಿನ ಮಳೆಯಾಗಿದೆ. ಇನ್ನೂ ಮುಂದಿನ ಮೂರು ದಿನವೂ ವಾತಾವರಣ ಹೀಗೆ ಇರಲಿದ್ದು ಸಾಧಾರಣದಿಂದ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರಿಂದಾಗಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

ವಾಯು ಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾತಾವರಣ ಬದಲಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ಎಲ್ಲೆಲ್ಲಿ ಮಳೆ?

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

IMD has predicted heavy rains in Bengaluru for the next three days

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಇಲ್ಲೆಲ್ಲ ಸಾಧಾರಣದಿಂದ ಅಧಿಕ ಮಳೆಯಾಗಲಿದೆ. ಮಳೆಯ ಜೊತೆಗೆ ಗಾಳಿ, ಗುಡುಗು ಕೂಡಾ ಆರ್ಭಟ ತೋರಲಿದೆ. ಉಳಿದಂತೆ ಮೇ 12 ರಿಂದ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೊತೆಗೆ ಕಲಬುರಗಿ, ರಾಯಚೂರು, ತುಮಕೂರು, ಬೀದರ್‌, ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಸಾಧಾರಣ ಮಳೆ ಬೀಳುವ ಸಂಭವವಿದೆ. ಆದರೆ ಕರಾವಳಿಯಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪಮಾನ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+