ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಜುಲೈ 19: ಬೆಂಗಳೂರಲ್ಲಿ ಭಾರಿ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮುಂದಿನ ಐದು ದಿನಗಳಲ್ಲಿ ಪ್ರತಿ ದಿನ 204.5 ಮಿ.ಮೀನಷ್ಟು ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಹಾಗೆಯೇ ಜುಲೈ 19 ರಿಂದ ಐದು ದಿನಗಳ ಕಾಲ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ. ಈಗಾಗಲೇ ಕೊಡಗು, ಕೇರಳದಲ್ಲಿ ಮಳೆ ಆರಂಭವಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮುಂದಿನ ಮೂರು ದಿನವೂ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆಮುಂದಿನ ಮೂರು ದಿನವೂ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಇಂದು ಮುಂಜಾನೆಯಿಂದ ಮಂಗಳೂರು ನಗರದಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಕರಾವಳಿಯಲ್ಲಿ ಮುಂಗಾರು ಮಳೆ ಅಷ್ಟಾಗಿ ಬಂದಿಲ್ಲ.

IMD issued Heavy rainfall red alert for Bengaluru

ಅಲ್ಲದೆ ಕಳೆದ ಕೆಲ ದಿನಗಳಿಂದ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದ ಮುಂಗಾರು ಮಳೆ ನಿನ್ನೆಯಿಂದ ಅಬ್ಬರಿಸುತ್ತಿದೆ. ಹವಾಮಾನ ಇಲಾಖೆ ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಜುಲೈ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರಲ್ಲಿ ಕಳೆದ ಎರಡು ದಿನ ರಾತ್ರಿ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಭಾರಿ ಮಳೆಯನ್ನು ಬೆಂಗಳೂರು ಕಾಣಲಿದೆ ಎಂದು ಎಚ್ಚರಿಕೆ ನೀಡಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 28.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.8 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 28.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಹಾಗೆಯೇ ನೈಸರ್ಗಿಕ ವಿಕೋಪ ನಿರ್ವಹಣಾ ಸಂಸ್ಥೆಯು ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಕಟಿಸಿದೆ. ತಗ್ಗುಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗದಂತೆ ಬ್ಯಾರಿಯರ್‌ಗಳ ನಿರ್ಮಾಣ, ನಿಮ್ಮ ಮನೆಗಳು ಪ್ರವಾಹಕ್ಕೆ ತುತ್ತಾಗುವ ಅಪಾಯವಿದ್ದರೆ ನಿತ್ಯವೂ ಎಫ್‌ಎಂ ಅಥವಾ ಟಿವಿಯನ್ನು ವೀಕ್ಷಿಸುತ್ತಿರಿ.

-ಸ್ವಲ್ಪ ದಿನಗಳ ಕಾಲ ಮನೆ ಬಿಟ್ಟು ಬೇರೆಡೆ ಹೋಗುವುದು ಒಳಿತು.
-ಮನೆಯಲ್ಲಿರುವ ಬೆಲೆ ಬಾಳುವ ವಸ್ತುಗಳನ್ನು ಮನೆಯ ಮೇಲ್ಭಾಗಕ್ಕೆ ಕೊನೆಯ ಮಹಡಿ, ಅಥವಾ ಮನೆಯಲ್ಲಿಯೇ ಮೇಲ್ಭಾಗಕ್ಕೆ ಶಿಫ್ಟ್ ಮಾಡಬೇಕು.
-6 ಇಂಚುಗಳಿಗಿಂತ ಹೆಚ್ಚು ನೀರು ಹರಿಯುತ್ತಿದ್ದರೆ ಆ ನೀರಿನಲ್ಲಿ ಸಂಚರಿಸಬೇಡಿ, ಮುಳುಗುವ ಸಾಧ್ಯತೆಗಳು ಹೆಚ್ಚಿವೆ.

English summary
Indian meteorological department issued Heavy rainfall red alert for Bengaluru next 5 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X