ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ರಾತ್ರಿ ಧಾರಾಕಾರ ಮಳೆ, ಇಂದು ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20; ಬೆಂಗಳೂರು ನಗರದಲ್ಲಿ ಭಾನುವಾರ ರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಸೆಪ್ಟೆಂಬರ್ 21ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಬುಧವಾರದ ಬಳಿಕ ಮಳೆಯ ಅಬ್ಬರ ಕಡಿಮೆಯಾಗಿತ್ತು.

ಸೆ.18ರಿಂದ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆಸೆ.18ರಿಂದ ಈ ರಾಜ್ಯಗಳಲ್ಲಿ ಅಧಿಕ ಮಳೆ ಮುನ್ಸೂಚನೆ

ಶನಿವಾರ ಮತ್ತು ಭಾನುವಾರ ಬೆಂಗಳೂರು ನಗರದಲ್ಲಿ ಉಷ್ಣಾಂಶ ಹೆಚ್ಚಾಗಿತ್ತು. ಭಾನುವಾರ ರಾತ್ರಿ 11.30ರ ಬಳಿಕ ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಗುಡುಗು, ಸಿಡಿಲಿನ ಅಬ್ಬರದೊಂದಿಗೆ ಸುರಿದ ಮಳೆಯಿಂದಾಗಿ ಹಲವಾರು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು.

ಕರ್ನಾಟಕ; ಜಲಾಶಯಗಳ ನೀರಿನ ಮಟ್ಟ ಕರ್ನಾಟಕ; ಜಲಾಶಯಗಳ ನೀರಿನ ಮಟ್ಟ

IMD Predicted Heavy Rain In Karnataka Till September 21

ಭಾರತೀಯ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 21ರ ತನಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಸೋಮವಾರರಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ.

ರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲ, ಕೆಲವೆಡೆ ಸಾಧಾರಣ ಮಳೆರಾಜ್ಯಾದ್ಯಂತ ನೈಋತ್ಯ ಮುಂಗಾರು ದುರ್ಬಲ, ಕೆಲವೆಡೆ ಸಾಧಾರಣ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮದಿಂದಲೇ ಮಳೆಯಾಗುತ್ತಿದೆ. ಸೆಪ್ಟೆಂಬರ್ 21ರ ತನಕ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮಾತ್ರವಲ್ಲ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡು, ಗುಜರಾತ್, ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ, ಛತ್ತೀಸ್‌ಗಢ್, ನಾಗಾಲ್ಯಾಂಡ್, ಮಣಿಪುರ, ವಿಜೋರಾಂ, ತ್ರಿಪುರ ಮುಂತಾದ ರಾಜ್ಯಗಳಲ್ಲಿ ಮಳೆ ಜನರಿಗೆ ಸಂಕಷ್ಟ ತಂದಿದೆ.

ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ, ಲಕ್ಷದ್ವೀಪ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ ತಿಂಗಳಿನಲ್ಲಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಹೇಳಿತ್ತು.

ಜೂನ್‌ 1ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಭಾರತದಲ್ಲಿ ನೈಋತ್ಯ ಮುಂಗಾರು ಅವಧಿ ಎಂದು ಪರಿಗಣಿಸಲಾಗುತ್ತದೆ. ದೇಶದಲ್ಲಿ ಈ ಸಮಯದಲ್ಲಿ ಸುರಿಯುವ ಮಳೆಯನ್ನು ಅವಲಂಬಿಸಿ ವಿವಿಧ ಬೆಳೆಗಳನ್ನು ಬೆಳೆಯಲಾಗುತ್ತದೆ.

ಆದರೆ ಈಗ ಮುಂಗಾರು ದುರ್ಬಲಗೊಂಡಿದೆ. ಆದರೆ ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಮಳೆಯಾಗುತ್ತಿದೆ. ಇನ್ನು ಮೂರು ದಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮುಂಗಾರು ಮಾರುತಗಳು ಈಗ ಜೈಸ್ಮಲೇರ್, ಪೂರ್ವ ರಾಜಸ್ಥಾನ, ಮಧ್ಯ ಪ್ರದೇಶದ ಪಶ್ಚಿಮ ಭಾಗದ ಮೂಲಕ ಹಾದು ಹೋಗುತ್ತದೆ. ಇಂತಹ ಸಂದರ್ಭದಲ್ಲಿ ಕಡಿಮೆ ಒತ್ತಡ ಉಂಟಾಗುವುದರಿಂದ ಮಳೆಯಾಗುತ್ತದೆ.

ಕರ್ನಾಟಕದಲ್ಲಿ ಜುಲೈ ತಿಂಗಳಿನಲ್ಲಿ ಸುರಿದ ಮಳೆ ಅನಾಹುತವನ್ನು ಸೃಷ್ಟಿಸಿತ್ತು. ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುಮಾರು 31,360 ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿತ್ತು.

ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕೃಷ್ಣಾ ಸೇರಿದಂತೆ ವಿವಿಧ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದವು. ಇದರಿಂದಾಗಿ ಹಲವು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು.

Recommended Video

ಚೆನ್ನೈ ವಿರುದ್ಧ ಮುಂಬೈ ಸೋಲಲು ರೋಹಿತ್ ಕಾರಣ ಆಗಿದ್ದು ಹೇಗೆ? | Oneindia Kannada

ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕಾವೇರಿ ಕೊಳ್ಳದ ಪ್ರಮುಖ ಜಲಾಶಯ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್ ಇನ್ನೂ ಭರ್ತಿಯಾಗಿಲ್ಲ.

English summary
Heavy rains accompanied by thunder, lightning lashed Bengaluru for over an hour on Sunday night. The India Meteorological Department (IMD) has predicted heavy rain till September 21 in various districts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X