ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ವಿಚಾರ, ವಲಯವಾರು ಕ್ರಿಯಾ ಯೋಜನೆಗೆ ಹೈಕೋರ್ಟ್ ಆದೇಶ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಏ.5. ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಲಯವಾರು ಕ್ರಿಯಾ ಯೋಜನೆಯನ್ನು ರೂಪಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಬಿಬಿಎಂಪಿಗೆ ಆದೇಶಿಸಿದೆ.

ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿದ್ದ ಪಿಐಎಲ್ ಸಿಜೆ ರಿತುರಾತ್ ಅವಸ್ಥಿ ಮತ್ತು ನ್ಯಾ.ಎಸ್. ಆರ್ .ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು.

''ಪಾಲಿಕೆ ತನ್ನ ವ್ಯಾಪ್ತಿಯ 8 ವಲಯಗಳಲ್ಲಿ ರಸ್ತೆ ಅಗೆಯುವ ಏಜೆನ್ಸಿಗಳನ್ನು ಗುರುತಿಸಿ ಅವುಗಳೊಂದಿಗೆ ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸಬೇಕು. ರಸ್ತೆಗಳ ಜಂಟಿ ಸರ್ವೆ ನಡೆಸಿ ಯೋಜನೆ ರೂಪಿಸಬೇಕು''ಎಂದು ಆದೇಶಿಸಿದೆ.

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ದಿನ ಗಡುವು ನೀಡಿದ ಹೈಕೋರ್ಟ್ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿಗೆ 15 ದಿನ ಗಡುವು ನೀಡಿದ ಹೈಕೋರ್ಟ್

ಅಮೆರಿಕನ್ ರೋಡ್ ಟೆಕ್ನಾಲಜಿ ಸಲ್ಯುಷನ್ಸ್ ಸಂಸ್ಥೆ ರಸ್ತೆ ಗುಂಡಿ ಮುಚ್ಚಲು ಸಂಸ್ಥೆ ಆಸಕ್ತಿ ವ್ಯಕ್ತಪಡಿಸಿದೆ. ಹಾಗಾಗಿ ಆ ಸಂಸ್ಥೆಯೊಂದಿಗೂ ಅಧಿಕಾರಿಗಳು ಸೇರಿ ಯೋಜನೆ ರೂಪಿಸಬೇಕು ಎಂದ ನ್ಯಾಯಪೀಠ ಬಿಬಿಎಂಪಿ ಈವರೆಗೂ ಕೈಗೊಂಡ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.

ಬಿಬಿಎಂಪಿ ಪ್ರತಿದಿನ ಒಂದು ವಲಯದ ಸಭೆ ನಡೆಸಬೇಕು, ಏ.19 ರೊಳಗೆ 8 ವಲಯಗಳ ಕ್ರಿಯಾಯೋಜನೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

Implement action plan to repair potholes in Bengaluru: Karnataka High Court to BBMP


ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ ಕೇಂದ್ರ ಭಾಗ( ಸಿಬಿಡಿ) ಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು/ದುರಸ್ತಿ ಮಾಡಲು 15 ದಿನಗಳ ಗಡುವು ನೀಡಿತ್ತು. ಆಧುನಿಕ ತಂತ್ರಜ್ಞಾನ ಬಳಸಿ ಸಮರೋಪಾದಿಯಲ್ಲಿ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಆದೇಶಿಸಿದೆ.

ನ್ಯಾಯಾಲಯ ನೀಡಿದ್ದ ನಿರ್ದೇಶದನಂತೆ ರಸ್ತೆಗುಂಡಿ ಸಮಸ್ಯೆಗೆ ಪರಿಹಾರಕ್ಕೆ ಪೈಥಾನ್ ಯಂತ್ರ ಬಳಕೆ ಕುರಿತು ಬಿಬಿಎಂಪಿ ನ್ಯಾಯಾಲಯಕ್ಕೆ ಕ್ರಿಯಾ ಯೋಜನೆಯ ವರದಿ ಸಲ್ಲಿಸಿತ್ತು.

ಆ ವರದಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷವಾಗಿ ನಗರದ ಕೇಂದ್ರ ಭಾಗದಲ್ಲಿ(ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ )ನಲ್ಲಿ ಪೈಥಾನ್ ಸೇರಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆದಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು.

ಕರ್ನಾಟಕದಲ್ಲಿಯೇ ಬೆಂಗಳೂರಿನ ರಸ್ತೆಗಳು ಅತ್ಯಂತ ಅಪಾಯಕಾರಿ; ಸಿಎಜಿ ವರದಿಕರ್ನಾಟಕದಲ್ಲಿಯೇ ಬೆಂಗಳೂರಿನ ರಸ್ತೆಗಳು ಅತ್ಯಂತ ಅಪಾಯಕಾರಿ; ಸಿಎಜಿ ವರದಿ

ಅದನ್ನು ಪರಿಶೀಲಿಸಿದ ನ್ಯಾಯಪೀಠ ಮತ್ತೆ ಇಂಜಿನಿಯರ್‌ಗಳ ನಿರ್ಲಕ್ಷ್ಯವನ್ನು ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ಇನ್ನು ನ್ಯಾಯಾಲಯ ವಿಳಂಬವನ್ನು ಸಹಿಸುವುದಿಲ್ಲ, ಗುಂಡಿ ಮುಚ್ಚುವ ಕಾರ್ಯವನ್ನು ಸಮರೋಪಾದಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ಅಶ್ವಿನ್ ಸಾವು ವಿಚಾರ ಪ್ರಸ್ತಾಪ; ಈ ಮಧ್ಯೆ, ಬೆಂಗಳೂರು ನಗರದಲ್ಲಿ ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬಲಿಯಾದ ಅಶ್ವಿನ್ ವಿಚಾರವೂ ವಿಚಾರಣೆ ವೇಳೆ ಪ್ರಸ್ತಾಪಿಸಲ್ಪಟ್ಟಿತ್ತು.

ವಕೀಲರು ವಿಚಾರ ಪ್ರಸ್ತಾಪಿಸಿದ್ದಕ್ಕೆ ಸಿಜೆ ಬೇಸರ ವ್ಯಕ್ತಪಡಿಸಿದರು ಮತ್ತು ಬೆಂಗಳೂರು ನಗರದ ಕೆಟ್ಟ ರಸ್ತೆಗಳಿಂದಾಗಿ ಯಾರಾದರೂ ಸಾವನ್ನಪ್ಪಿದರು ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಓದಿದಾಗ ನಮಗೆ ನಿಜಕ್ಕೂ 'ತಪ್ಪಿತಸ್ಥ' ಭಾವನೆ ಮೂಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು.

Karnataka High Court

ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ; ''ನ್ಯಾಯಪೀಠ ರಸ್ತೆ ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಗುಂಡಿಗಳಿಂದಾಗಿ ಜನ ಸಾಯುತ್ತಿದ್ದಾರೆ, ಬಿಬಿಎಂಪಿ ಏಕೆ ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಿಲ್ಲ. ಉದ್ದೇಶಪೂರ್ವಕವಾಗಿ ಬಿಬಿಎಂಪಿ ಇಂಜಿನಿಯರ್ ಗಳು ಹೀಗೆ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ನೀಡಿದರೂ ರಸ್ತೆ ಸರಿಯಾಗುತ್ತಿಲ್ಲ‌. ಹಾಗಾಗಿ ಬಿಬಿಎಂಪಿ ಇಂಜಿನಿಯರ್ ಗಳನ್ನೇ ಬದಲಿಸಲು
ಸರ್ಕಾರಕ್ಕೆ ಆದೇಶ ನೀಡುತ್ತವೆ,'' ಎಂದು ಎಚ್ಚರಿಕೆ ನೀಡಿತ್ತು.

ಆಗ ನ್ಯಾಯಪೀಠ, ರಸ್ತೆ ಗುಂಡಿ ಮುಚ್ಚಲು ಉತ್ತಮ ತಂತ್ರಜ್ಞಾನ ಬಳಸಿ, ಬರೀ ಕಣ್ಣೊರೆಸುವ ತಂತ್ರ ಇಲ್ಲಿ‌ ನಡೆಯುವುದಿಲ್ಲ ಎಂದಿದ್ದ ನ್ಯಾಯಪೀಠ,ಸುದೀರ್ಘ ಬಾಳಿಕೆಯ ರಸ್ತೆಗಳನ್ನು ನಿರ್ಮಿಸದಿದ್ದರೆ ರಸ್ತೆ ನಿರ್ವಹಣೆ ಹೊಣೆಯನ್ನು ಮಿಲಿಟರಿಗೆ ವಹಿಸುವುದಾಗಿ ಎಚ್ಚರಿಕೆ ನೀಡಿತು.

Recommended Video

Kumaraswamy ಅವರು ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ಏಕೆ? ಎಂದಿದ್ದಾರೆ | Oneindia Kannada

ಇಂಜಿನಿಯರ್‌ಗೆ ಕ್ಲಾಸ್: ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿರುವುದು ಗೊತ್ತಿದೆಯೇ? ನಿಮ್ಮ ಇಂಜಿನಿಯರ್‌ಗಳು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ರಸ್ತೆ ಗುಂಡಿ ಸಮಸ್ಯೆ ಸರಿಪಡಿಸಲು ಏನು ಕ್ರಮ ಕೈಗೊಂಡಿದ್ದೀರಿ? ಜೈಲಿಗೆ ಕಳುಹಿಸದೇ ನಿಮಗೆ ಕರುಣೆ ತೋರಿದ್ದೇವೆ. ಗುಣಮಟ್ಟದ ಕಾಮಗಾರಿಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕ್ಲಾಸ್ ತೆಗೆದುಕೊಂಡಿತು.

English summary
The High Court directed the BBMP and American Road Technology And Solutions Pvt Ltd, the agency contracted to repair potholes, to conduct a joint survey and submit an action plan to repair the roads in the city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X