ಬೆಂಗಳೂರಲ್ಲಿ 10 ದಿನದಲ್ಲಿ 27 ಪೊಲೀಸರಿಗೆ ಸೋಂಕು

ಬೆಂಗಳೂರು, ಜುಲೈ 08 : ಕಳೆದ 10 ದಿನಗಳಲ್ಲಿ ಬೆಂಗಳೂರು ನಗರದಲ್ಲಿ 27 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ನಗರದಲ್ಲಿನ ಸೋಂಕಿತರ ಸಂಖ್ಯೆ 11,361ಕ್ಕೆ ಏರಿಕೆಯಾಗಿದೆ.

Recommended Video

      INDO-CHINA : We stand with India : Mark Meadows | USA | Oneindia Kannada

      ವೈಟ್ ಫೀಲ್ಡ್‌ ವಿಭಾಗದ ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಎಚ್‌ಎಎಲ್ ಪೊಲೀಸ್ ಠಾಣೆಯ 12 ಸಿಬ್ಬಂದಿಗಳಿಗೆ ಸೋಂಕು ತಗುಲಿದೆ. ಒಟ್ಟು 13 ಠಾಣೆಯ ಸಿಬ್ಬಂದಿಗಳಿಗೆ ಹೊಸದಾಗಿ ಸೋಂಕು ತಗುಲಿದೆ.

      ಆರೋಪಿಯೊಬ್ಬನಿಂದಾಗಿ ಎಚ್‌ಎಎಲ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬ ಆರೋಪವನ್ನು ವೈಟ್‌ ಫೀಲ್ಡ್ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ತಳ್ಳಿ ಹಾಕಿದ್ದಾರೆ.

      In 10 Days 27 Police Personnel Tested Posotive For COVID 19

      ವೈಟ್ ಫೀಲ್ಡ್ ವಿಭಾಗದಲ್ಲಿ ಇದುವರೆಗೂ 27 ಪೊಲೀಸ್ ಸಿಬ್ಭಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. 5 ಜನರು ಗುಣಮುಖರಾಗಿದ್ದಾರೆ. ಜೂನ್ 27ರಂದು ಈ ವಿಭಾಗದಲ್ಲಿ ಮೊದಲ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

      ಆರೋಪಿಯಿಂದ ಪೊಲೀಸ್ ಸಿಬ್ಬಂದಿಗೆ ಸೋಂಕು ಹರಡಿಲ್ಲ. ಈ ವಿಭಾಗದಲ್ಲಿ ಜೂನ್ 15ರಂದು ಆರೋಪಿಯೊಬ್ಬನನ್ನು ಬಂಧಿಸಲಾಗಿತ್ತು. ಆದರೆ, ಆತನಿಗೆ ಕೊರೊನಾ ವೈರಸ್ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+