ಬೆಂಗಳೂರು ಸೇರಿ ರಾಜ್ಯಾದ್ಯಂತ ಮೇ 30ರವರೆಗೆ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 28: ಕಳೆದ ಒಂದೆರೆಡು ವಾರಗಳಿಂದ ಬೆಂಗಳೂರು ಸೇರಿದಂತೆ ಇಡೀ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ.

ಗಾಳಿ ಮಳೆಗೆ ನೂರಾರು ಮರಗಳಿಗೆ ಧರೆಗುರುಳಿವೆ, ಹಲವಾರು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆಯೂ ಕೂಡ ನಡೆದಿದೆ. ಮೇ 30ರವರೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 6ಕ್ಕೆ ಮುಂಗಾರು ಕೇರಳವನ್ನು ಪ್ರವೇಶಿಲಿದೆ ಅದಕ್ಕೂ ಮುನ್ನವೇ ಕರ್ನಾಟಕದಲ್ಲಿ ಮಳೆ ಆರಂಭವಾಗಿದೆ. ಕರ್ನಾಟಕಕ್ಕೆ ಜೂನ್ 8ರ ಬಳಿಕ ಮುಂಗಾರು ಬರಲಿದೆ. ಸೋಮವಾರವೂ ಕೂಡ ಮಳೆ ಮುಂದುವರೆದಿದೆ.

In 48 hours rain very likely to occur at few places over south interior Karnataka

ಚಿಕ್ಕಬಳ್ಳಾಪುರದ ತೊಂಡೆಬಾವಿಯಲ್ಲಿ 6ಸೆಂ.ಮೀ , ಬೆಂಗಳೂರು ಕೆಐಎಎಲ್‌ನಲ್ಲಿ 5 ಸೆಂ.ಮೀ, ನೆಲಮಂಗಲದಲ್ಲಿ 3 ಸೆಂ.ಮೀ, ಮೈಸೂರು, ತುಮಕೂರಿನಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ.

ಬೆಂಗಳೂರು ನಗರದಲ್ಲಿ ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 34.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.4 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 34.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 44.1 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+