ಬೆಂಗಳೂರಲ್ಲಿ 13 ಪ್ಯಾಕೇಜ್‌ಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ: ಬಿಬಿಎಂಪಿ

ಬೆಂಗಳೂರು, ಜುಲೈ 02: ಬೆಂಗಳೂರು ವ್ಯಾಪ್ತಿಯಲ್ಲಿ ಮತ್ತೆ ವೈಟ್ ಟಾಪಿಂಗ್ ಕಾಮಗಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬೃಹತ್ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ ಭೂಮಿ ಪೂಜೆಗಾಗಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.

ಹೌದು, ನಗರದಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಅಂತರ್ ಇಲಾಖೆ ಸಮನ್ವಯ ಸಭೆಯನ್ನು ಉದ್ದೇಶಿಸಿ ಪಾಲಿಕೆ ಮುಖ್ಯ ಆಯುಕ್ತರಾದ ತುಷರ್ ಗಿರಿನಾಥ್ ಮಾತನಾಡಿದರು.

In Bengaluru Huge White Topping Project Work Begins Soon BBMP instructed to Officials

ವೈಟ್ ಟಾಪಿಂಗ್ ಅನ್ನು 15 ಪ್ಯಾಕೇಜ್‌ಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಪೈಕಿ 13 ಪ್ಯಾಕೇಜ್ ಗಳು ಈಗಾಗಲೇ ಅಂತಿಮಗೊಂಡಿದೆ. ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ. ಇನ್ನೆರಡು ಪ್ಯಾಕೇಜ್‌ಗಳು ಸರ್ಕಾರದ ಹಂತದಲ್ಲಿದ್ದು, ಶೀಘ್ರ ಭೂಮಿ ಪೂಜೆ ನೆರವೇರಿಸಲು ಸಿದ್ದತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಸಂಬಂಧ ಜಲಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆ.ಪಿ.ಟಿ.ಸಿ.ಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್ ಗಳ ಬದಲವಾಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಅವರು ಹೇಳಿದರು.

ಯಾವುದೇ ಇಲಾಖೆಯಾಗಲಿ ಈಗಲೇ ಸಮೀಕ್ಷೆ ನಡೆಸಿಕೊಂಡು ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ವೇಳೆ ಏನಾದರು ಬದಲಾವಣೆಗಳಿದ್ದಲ್ಲಿ ಮಾಡಿಕೊಳ್ಳಬೇಕು. ಜಲಮಂಡಳಿಯಿಂದ ರಸ್ತೆಯ ಮೂಲಕ ಕೊಳವೆ ಅಳವಡಿಸದೆ ಎರಡೂ ಬದಿ ಕೊಳವೆಗಳನ್ನು ಅಳವಡಿಸಿಕೊಳ್ಳಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕ ಯಾವುದೇ ಕಾರಣಕ್ಕೂ ರಸ್ತೆ ಕತ್ತರಿಸಲು ಅನುಮತಿ ನೀಡುವುದಿಲ್ಲೆ ಎಂದು ತಿಳಿಸಿದರು.

In Bengaluru Huge White Topping Project Work Begins Soon BBMP instructed to Officials

ನಗರದಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆಯೇ ಆ ಪಟ್ಟಿಯನ್ನು ಈಗಾಗಲೇ ಎಲ್ಲಾ ಇಲಾಖೆಗಳಿಗೆ ನೀಡಲಾಗಿದೆ. ಅದರ ಪ್ರಕಾರ ಈಗಾಗಲೇ ಜಂಟಿ ಪರಿಶೀಲನೆ ನಡೆಸಲಾಗಿದ್ದು, ಅಂತಿಮ ಹಂತದ ಸಿದ್ದತೆಗಳನ್ನು ಮಾಡಿಕೊಂಡು ಕಾಮಗಾರಿಯನ್ನು ಪ್ರಾರಂಭಿಸಬೇಕೆಂದರು.

ಯುಟಿಲಿಟಿಗೆ ಸಮಗ್ರ ವ್ಯವಸ್ಥೆ

ವೈಟ್ ಟಾಪಿಂಗ್ ಕಾಮಗಾರಿ ನಡೆಸುವ ರಸ್ತೆಗಳ ಎರಡೂ ಬದಿ ಪಾದಚಾರಿ ಮಾರ್ಗದಲ್ಲಿ ಯುಟಿಲಿಟಿಗಾಗಿ ಡಕ್ಟ್ಸ್ ಗಳ ಅಳವಡಿಕೆಗೆ ಸಮಗ್ರ ವ್ಯವಸ್ಥೆ ಮಾಡಿಕೊಳ್ಳಬೇಕು. ಈ ಸಂಬಂಧ ಆಯಾ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಾಧಿಸಿಕೊಂಡು ಕಾರ್ಯ ನಿರ್ವಹಿಸಬೇಕು.

ಸಂಚಾರ ಮಾರ್ಗ ಬದಲಾವಣೆ

ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುವ ಕಡೆ ಸಂಚಾರ ಪೊಲೀಸ್ ವಿಭಾಗದ ಜೊತೆ ಸಮನ್ವಯ ಸಾಧಿಸಿ ಮಾರ್ಗ ಬದಲಾವಣೆ ಮಾಡಿಕೊಂಡು ಕಾಲಮಿತಿಯೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಕಾಮಗಾರಿಯ ವೇಳೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಹಂತ-ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು.

ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ರವರು ಮಾತನಾಡಿ, ನಗರದಲ್ಲಿ ಸುಮಾರು 150 ಕಿ.ಮೀ ಉದ್ದದ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಸಂಚಾರಿ ಪೊಲೀಸ್ ಅಧಿಕಾರಿಗಳು ಕಾಮಗಾರಿ ನಡೆಯುವ ಪ್ರದೇಶದಲ್ಲಿ ಪರ್ಯಾಯ ರಸ್ತೆ ಗುರುರಿತಿಸಿ ಕೊಡಬೇಕೆಂದು ಮನವಿ ಮಾಡಿದರು. ಜೊತೆಗೆ ಕಾಮಗಾರಿಯನ್ನು ಹಗಲು-ರಾತ್ರಿ ನಡೆಸಿ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಯೋಜನಾ ವಿಭಾಗದ ಮುಖ್ಯ ಅಭಿಯಂತರರಾದ ಲೋಕೇಶ್, ಜಲಮಂಡಳಿ ಮುಖ್ಯ ಅಭಿಯಂತರರಾದ ಗಂಗಾಧರ್, ವೆಂಕಟೇಶ್, ದೇವರಾಜ್, ಸಂಚಾರ ಪೊಲೀಸ್ ವಿಭಾಗದ ಅಧಿಕಾರಿಗಳು, ಕೆಪಿಟಿಸಿಎಲ್, ಬೆಸ್ಕಾಂ, ಜಲಮಂಡಳಿ, ಗೇಲ್ ಗ್ಯಾಸ್ ಸೇರಿದಂಗೆ ಇನ್ನಿತರೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+