ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಯಿಂದ ಗರ್ಭಿಣಿ, ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನ ವಿಸ್ತರಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 16: ನಗರದಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ.

ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ನಗರದ 20 ಹೆರಿಗೆ ಆಸ್ಪತ್ರೆಗಳಲ್ಲಿಯೇ ಪಾಲಿಕೆ ವತಿಯಿಂದ ವಾರದಲ್ಲಿ ಮೂರು ದಿನಗಳ ಕಾಲ (ಸೋಮವಾರ, ಬುಧವಾರ ಮತ್ತು ಶುಕ್ರವಾರ) ಲಸಿಕೆ ನೀಡಲು ಚಿಂತನೆ ನಡೆಸಲಾಗಿದೆ.

2 ದಿನಕ್ಕಿಂತ ಹೆಚ್ಚು ಕಾಲ ಕೊರೊನಾ ಸೋಂಕಿನ ಲಕ್ಷಣಗಳಿರುವ ಮಕ್ಕಳಿಗೆ ಪರೀಕ್ಷೆ ಮಾಡಿಸಿ2 ದಿನಕ್ಕಿಂತ ಹೆಚ್ಚು ಕಾಲ ಕೊರೊನಾ ಸೋಂಕಿನ ಲಕ್ಷಣಗಳಿರುವ ಮಕ್ಕಳಿಗೆ ಪರೀಕ್ಷೆ ಮಾಡಿಸಿ

ಜುಲೈ 27 ರಿಂದ ಅಭಿಯಾನ ಆರಂಭವಾಗಿದ್ದು, ಅಂದಿನಿಂದ 3,701 ಗರ್ಭಿಣಿಯರು ಹಾಗೂ 830 ಮಂದಿ ಬಾಣಂತಿ ಮಹಿಳೆಯರು ನಗರದಲ್ಲಿ ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

In Bengaluru Pregnant Women, New Moms Get Jabbed

ಮಹಿಳೆಯರಿಗೆ ಲಸಿಕೆ ನೀಡುವುದಕ್ಕೂ ಮುನ್ನ ಅವರೊಂದಿಗೆ ಸಮಾಲೋಜನೆ ಹಾಗೂ ತಪಾಸಣೆ ನಡೆಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಲಸಿಕೆ ಅಭಿಯಾನ ಸಾಕಷ್ಟು ಸಮಯವನ್ನು ತೆಗೆದುಕೊಳ್ಲುತ್ತಿದೆ. ಗರ್ಭಿಣಿ ಮಹಿಳೆಯರನ್ನು ಹೆಚ್ಚು ಅಪಾಯಕ್ಕೆ ಸಿಲುಕಿರುವವರೆಂದು ಪರಿಶೀಲಿಸಲಾಗುತ್ತಿದ್ದು, ಹೀಗಾಗಿ ಪರಿಶೀಲನೆ ನಡೆಸಿದ ಬಳಿಕವೇ ಲಸಿಕೆ ನೀಡಲಾಗುತ್ತಿದೆ.

ಗರ್ಭಣಿಯರು ಹಾಗೂ ಹಾಲುಣಿಸುವ ತಾಯಿಯಂದಿರಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ಇತರೆ ರೋಗಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಒಂದು ವೇಳೆ ಅವರಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದೇ ಆದರೆ, ಲಸಿಕೆಯನ್ನು ತಡವಾಗಿ ನೀಡಲಾಗುತ್ತಿದೆ.

ಸಮಾಲೋಚನೆ ನಡೆಸುವ ಸಂದರ್ಭದಲ್ಲಿ ಲಸಿಕಾ ಅಭಿಯಾನ ಬಳಿಕ ಎದುರಾಗುವ ಪರಿಣಾಮಗಳ ಕುರಿತು ಮಾಹಿತಿ, ಸಲಹೆಗಳನ್ನು ನೀಡಲಾಗುತ್ತದೆ.

12 ಸಾರ್ವಜನಿಕ ಆರೋಗ್ಯ ಕೇಂದ್ರಗಳು, 6 ರೆಫರಲ್ ಆಸ್ಪತ್ರೆಗಳು, 3 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಯುಪಿಎಚ್‌ಸಿ) ), ಒಂದು ಸಮುದಾಯ ಆರೋಗ್ಯ ಕೇಂದ್ರ, ವಾಣಿ ವಿಲಾಸ ಆಸ್ಪತ್ರೆ ಮತ್ತು ಗೋಶಾ ಆಸ್ಪತ್ರೆಗಳಲ್ಲಿ ಮಹಿಳೆಯರಿಗೆ ಕೋವಾಕ್ಸಿನ್ ಅಥವಾ ಕೋವಿಶೀಲ್ಡ್‌ ಲಸಿಕೆ ನೀಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಅಭಿಯಾನ ಆರಂಭವಾದ ಮೊದಲ ವಾರದಲ್ಲಿ ಪ್ರತಿಕ್ರಿಯೆ ಅತ್ಯಂತ ಕಡಿಮೆ ಇತ್ತು. ಇದೀಗ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಲಸಿಕೆ ನೀಡಲೂ ಕೂಡ ಕೆಲವು ನಿಯಮಗಳನ್ನು ಅನುಸರಿಸಲಾಗುತ್ತಿದೆ. ಅರ್ಹ ಫಲಾನುಭವಿಗಳಿಗಷ್ಟೇ ಲಸಿಕೆ ನೀಡಲಾಗುತ್ತಿದೆ.

ಕೌಂಟರ್ ತೆರೆದು ಮಾಡಿ ಮಹಿಳೆಯರು ಕಾದು ನಿಲ್ಲುವಂತೆ ಮಾಡುತ್ತಿಲ್ಲ. ಫಲಾನುಭವಿಗಳಿರುವ ಸ್ಥಳಕ್ಕೆ ತೆರಳಿ, ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗಳಿಗೆ ಕರೆ ತಂದು ಲಸಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ. ಹಿಂಜರಿಯುತ್ತಿದ್ದ ಬೆಳವಣಿಗೆಗಳು ಕಡಿಮೆಯಾಗಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಿ.ರಣದೀಪ್ ಅವರು ಹೇಳಿದ್ದಾರೆ.

ವಾಣಿ ವಿಲಾಸ ಆಸ್ಪತ್ರೆಯಲ್ಲಿ 511 ಗರ್ಭಿಣಿಯರು ಮತ್ತು 124 ಹಾಲುಣಿಸುವ ತಾಯಂದಿರು ಲಸಿಕೆ ಪಡೆದುಕೊಂಡಿದ್ದಾರೆ. ಇದೀಗ ಹೆಚ್ಚಿನ ಮಹಿಳೆಯರು ಕೋವಿಡ್ ಲಸಿಕೆ ತೆಗೆದುಕೊಳ್ಳಲು ಮುಂದೆ ಬರುತ್ತಿದ್ದಾರೆ ಎಂದು ವೈದ್ಯಕೀಯ ಅಧಿಕಾರಿ ಡಾ.ಸಂತೋಷ್ ಡಿ ಪ್ರಭಾ ತಿಳಿಸಿದ್ದಾರೆ.

ಬಳಿಕ ಸ್ತ್ರೀರೋಗ ತಪಾಸಣೆ ನಡೆಸಲಾಗುತ್ತಿದೆ. ನಂತರ ಲಸಿಕೆ ನೀಡಲಾಗುತ್ತದೆ ಎಂದು ಬಿಬಿಎಂಪಿ ಆರೋಗ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Recommended Video

ತಂಗಿಯನ್ನು ಮದುವೆಯಾಗಿದ್ದಲ್ದೆ ಈಗ ಇನ್ನೊಂದು ಕೆಲ್ಸ ಮಾಡಿದ್ದಕ್ಕೆ ನೆಟ್ಟಿಗರು ಹೇಳಿದ್ದೇನು? | Oneindia Kannada

ಲಸಿಕೆ ನೀಡಿದ ಕೂಡಲೇ ಪ್ರಕ್ರಿಯೆ ಇಲ್ಲಿಗೆ ಮುಗಿಯುವುದಿಲ್ಲ. ಮುಂದಿನ 10 ದಿನಗಳ ಕಾಲ ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಲಸಿಕೆ ಪಡೆದ ಕೇಂದ್ರವು ನಂತರ ಅಧಿಕಾರಿಗಳಿಗೆ ಮಾಹಿತಿ ನೀಡಲಿದೆ. ಬಳಿಕ ಮಹಿಳೆಯರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಲಾಗುತ್ತದೆ.

English summary
With reducing hesitancy among pregnant and lactating women in getting the Covid-19 vaccine, the inoculation drive in Bengaluru is going slow but steady.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X