Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ: ಸಚಿವರಿಗೆ ಪತ್ರ

ಬೆಂಗಳೂರು, ಫೆಬ್ರವರಿ 04: ಬೆಂಗಳೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದಾಗಿ ವಾಯು ಮಾಲಿನ್ಯ ಉಂಟಾಗುತ್ತಿದೆ. ಭವಿಷ್ಯದಲ್ಲಿ ನಗರದ ವಾಯು ಮಾಲಿನ್ಯ ಕಡಿಮೆ ಮಾಡಲು ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡಬೇಕಿದೆ. ಅದಕ್ಕಾಗಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಅಧಿಕವಾಗಬೇಕಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಪತ್ರವನ್ನು ಬರೆಯಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ರಾಮಲಿಂಗಾ ರೆಡ್ಡಿ, ಸಾರಿಗೆ ಸಚಿವರು ಕರ್ನಾಟಕ ಸರ್ಕಾರ ಇವರಿಗೆ ಪತ್ರವನ್ನು ಬರೆದಿದ್ದಾರೆ. ಪತ್ರದಲ್ಲಿ ಹಲವು ವಿಚಾರಗಳನ್ನು ಸಚಿವರು ಪ್ರಸ್ತಾಪಿಸಿದ್ದಾರೆ.

In Future Consider All Electric Vehicle Dinesh Gundu Rao Letter

ಸಚಿವರ ಪತ್ರದ ವಿವರ: ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಸಾಂಪ್ರಾದಾಯಿಕ ಇಂಧನಗಳಿಂದ ಚಲಿಸುವ ವಾಹನಗಳ ಬಳಕೆಯಿಂದಾಗಿ ವಾಯು ಮಾಲಿನ್ಯ ಜಗತ್ತಿನಲ್ಲಿ ಸರ್ವೇ ಸಾಮಾನ್ಯವಾಗಿದ್ದು ಇದು ಸಾರ್ವಜನಿಕರ ಆರೋಗ್ಯದ ಮೇಲೆ ನೇರ ದುಷ್ಪರಿಣಾಮ ಬೀರುವುದು ಸರ್ವವೇದ್ಯವಾಗಿದೆ.

ವಿಶೇಷವಾಗಿ ಬೆಂಗಳೂರಿನಂತಹ ಮಹಾನಗರಗಳಲ್ಲಿ ಇರುವ ಹೆಚ್ಚಿನ ವಾಹನ ಸಂಖ್ಯೆಯಿಂದಾಗಿ ಮಾಲಿನ್ಯದ ಪ್ರಮಾಣವು ಅಗಾಧವಾಗಿದ್ದು ನಗರದ ಜನ ಸಾಂದ್ರತೆಯೂ ಹೆಚ್ಚಾಗಿರುವ ಕಾರಣ ಮಾಲಿನ್ಯ ಹೆಚ್ಚು ಜನರನ್ನು ಬಾಧಿಸುತ್ತದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರಿನ ಬೌಗೋಳಿಕ ಸ್ಥಿತಿ ಹಾಗೂ ಹವಾಮಾನಗಳು ವಾಯು ಮಾಲಿನ್ಯಯನ್ನು ಸಂಕೀರ್ಣಗೊಳಿಸುತ್ತವೆ. ದೆಹಲಿಯಂತೆ ವಾಯು ಮಾಲಿನ್ಯಕ್ಕಾಗಿ ಬೆಂಗಳೂರು ಸಹ ಕುಖ್ಯಾತಗೊಳ್ಳುವ ಪೂರ್ವದಲ್ಲಿಯೇ ನಾವು ಎಚ್ಚತ್ತುಕೊಳ್ಳುವ ಅಗತ್ಯ ಕಂಡುಬರುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಆದರೆ, ಇದರ ಜೊತೆಯಲ್ಲೇ ನಗರದಲ್ಲಿ ವಿದ್ಯುತ್‌ ಚಾಲಿತ ಇವಿ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಸಾರಿಗೆ ಮೂಲ ಸೌಕರ್ಯವನ್ನು ರೂಪಿಸುವಾಗ ಸಾಂಪ್ರಾದಾಯಿಕ ಇಂಧನಗಳಿಂದ ದೂರಸರಿಯುವುದು ಕೇವಲ ವಿಕಲ್ಪವಾಗಿರದೇ ತುರ್ತು ಅಗತ್ಯವಾಗಿದೆ.

ಈ ಹಿನ್ನಲೆಯಲ್ಲಿ ಭವಿಷ್ಯದಲ್ಲಿ ನಗರದಲ್ಲಿ ಕಾಯನಿರ್ವಹಿಸುವ ಎಲ್ಲಾ ಆಟೋಗಳು/ ಕ್ಯಾಬ್‌ಗಳು/ ಟ್ಯಾಕ್ಸಿಗಳು/ ಸರಕು ಆಟೋಗಳು/ ಘನತ್ಯಾಜ್ಯ ಸಂಗ್ರಹಣೆ ವಾಹನಗಳಿಗೆ ಅನುಮತಿ ನೀಡುವಾಗ ಅವುಗಳು ಇವಿ ವಾಹನಗಳಾಗಿದ್ದಲ್ಲಿ ಮಾತ್ರ ಅನುಮತಿ ನೀಡುವುದು ಸೂಕ್ತ ಎಂದು ಸಚಿವರು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಇನ್ನು ಮುಂದೆ ನಗರ ಸಾರಿಗೆ ಬಸ್‌ಗಳನ್ನು ಖರೀದಿಸುವಾಗಿ ಸಹ ಎಲೆಕ್ಟ್ರಿಕ್‌ ಇಂಧನ ಬಳಸುವ ಇವಿ ಬಸ್‌ಗಳನ್ನು ಮಾತ್ರ ಸಾರಿಗೆ ಸೇವೆಗೆ ಬಳಸಿಕೊಳ್ಳುವುದು ಸೂಕ್ತವೆಂದ ಆರೋಗ್ಯ ಇಲಾಖೆಯ ಅಭಿಪ್ರಾಯವಾಗಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕೆಂದು ತಮ್ಮನ್ನು ಕೋರುತ್ತೇನೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎಷ್ಟು ವಾಹನಗಳಿವೆ?; ಸದ್ಯದ ಮಾಹಿತಿ ಪ್ರಕಾರ ಬೆಂಗಳೂರು ನಗರದಲ್ಲಿ 3.4 ಲಕ್ಷ ಎಲೆಕ್ಟ್ರಿಕ್ ವಾಹನಗಳಿವೆ. ಇವುಗಳಲ್ಲಿ 2.98 ಲಕ್ಷ ಬೈಕ್‌ಗಳು. 23,516 ನಾಲ್ಕು ಚಕ್ರದ ವಾಹನಗಳು, 18,246 ಮೂರು ಚಕ್ರದ ವಾಹನಗಳು.

ಕರ್ನಾಟಕ ಸರ್ಕಾರ ಎಲೆಕ್ಟ್ರಿಕ್ ವಾಹನಗಳ ಬಳಕೆ ಉತ್ತೇಜನ ಮಾಡಲು ಅವುಗಳಿಗೆ ರಸ್ತೆ ತೆರಿಗೆ ವಿನಾಯಿತಿ ನೀಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ಇರುವುದು ಬೆಂಗಳೂರು ನಗರದಲ್ಲಿ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+