Road Accidents: ರಸ್ತೆ ಅಪಘಾತದಲ್ಲಿ ಕಳೆದ 24 ಗಂಟೆಗಳಲ್ಲಿ 51 ಜೀವಗಳು ಬಲಿ
ಬೆಂಗಳೂರು, ಮೇ. 27: ಹಾಸನದಲ್ಲಿ ಭಾನುವಾರ ಬೆಳಗ್ಗೆ ನಡೆದ ಭೀಕರ ರಸ್ತೆ ಅಫಘಾತ ಇಡೀ ರಾಜ್ಯವನ್ನೇ ಆತಂಕಕ್ಕೆ ನೂಕಿದೆ. ದುರಂತದಲ್ಲಿ ಆರು ಮಂದಿ ಸ್ಥಳದಲ್ಲೇ ಅಸುನೀಗಿದ್ದರು. ಇದರ ಬೆನ್ನಲ್ಲೇ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಬೆಚ್ಚಿಬೀಳಿಸುವ ಮಾಹಿತಿ ಹಂಚಿಕೊಂಡಿದ್ದಾರೆ.
ಹಾಸನ ಅಪಘಾತ ಸೇರಿ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಬರೋಬ್ಬರಿ 51 ಬಲಿಯಾಗಿದ್ದಾರೆ ಎಂಬ ಮಾಹಿತಿಯನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ಹಂಚಿಕೊಂಡಿದ್ದಾರೆ. ಜೊತೆಗೆ ಅಪಘಾತಗಳಲ್ಲಿನ ಸಾವಿನ ಪ್ರಮಾಣದ ಬಗ್ಗೆ ಆತಂಕ ಹೊರಹಾಕಿದ್ದಾರೆ.

ರಾಜ್ಯದಲ್ಲಿ 24 ಗಂಟೆಯಲ್ಲಿ 51 ಮಂದಿ ಬಲಿ!
ಹಾಸನದ ಅಪಘಾತದ ವರದಿ ಬೆನ್ನಲ್ಲೆ ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಶೇರ್ ಮಾಡಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್, "ಹಾಸನದಲ್ಲಿ ಕಾರು ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ರಸ್ತೆ ಅಪಘಾತಗಳಲ್ಲಿ 51 ಜೀವಗಳು ಬಲಿಯಾಗಿವೆ. ಇದು ಇತ್ತೀಚಿನ ಹಿಂದಿನ ಅತಿ ಹೆಚ್ಚು ದುರಂತಗಳಲ್ಲಿ ಒಂದಾಗಿದೆ. ಇವುಗಳಲ್ಲಿ ಹೆಚ್ಚಿನವು ಅತಿ ವೇಗ ಮತ್ತು ಅಜಾಗರೂಕ ಚಾಲನೆಯಿಂದ ಉಂಟಾಗುತ್ತವೆ. ರಸ್ತೆ ಸುರಕ್ಷತೆ ಬಗ್ಗೆ ಎಲ್ಲಾ ವಾಹನ ಚಾಲಕರು ಮತ್ತು ಪ್ರಯಾಣಿಕರು ಅರಿಯಬೇಕು. ಎಲ್ಲರ ಜವಾಬ್ದಾರಿಯುತ ನಡವಳಿಕೆಯ ಅಗತ್ಯವಿದೆ" ಎಂದಿದ್ದಾರೆ.
6 persons killed in Hassan car accident
— alok kumar (@alokkumar6994) May 26, 2024
In last 24 hrs 51 lives lost in road accidents , one of the highest toll in recent past
Many of these caused due to rash & reckless driving
“#Roadsafety needs responsible behaviour from all the stakeholders” pic.twitter.com/JHYy1vC3CJ
ಹಾಸನ: ಭೀಕರ ಅಫಘಾತಕ್ಕೆ ಆರು ಬಲಿ
ಭಾನುವಾರ ಬೆಳ್ಳಂಬೆಳಗ್ಗೆ ಬೆಂಗಳೂರು-ಮಂಗಳೂರು ಹೆದ್ದಾರಿ 75 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹಾಸನ ಜಿಲ್ಲೆಯ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ 75ನಲ್ಲಿ ದುರ್ಘಟನೆ ನಡೆದಿದೆ.
ದುರಂತದಲ್ಲಿ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರೆಲ್ಲರೂ ಚಿಕ್ಕಬಳ್ಳಾಪುರ ಮೂಲದವರು. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ ವಾಪಸ್ ಚಿಕ್ಕಬಳ್ಳಾಪುರಕ್ಕೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications