ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ವಿವಿಧೆಡೆ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಮೇ 20: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕಳೆದ ಒಂದು ತಿಂಗಳಿಂದ ಆಗಾಗ ಮಳೆಯಾಗುತ್ತಿದೆ, ತೌಕ್ತೆ ಚಂಡಮಾರುತದಿಂದಾಗಿ ಒಂದೆರೆಡು ದಿನ ಹೆಚ್ಚಿನ ಮಳೆಯೇ ಸುರಿದಿದೆ.

ತೌಕ್ತೆ ದುರ್ಬಲ: ಮೇ 23ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ತೌಕ್ತೆ ದುರ್ಬಲ: ಮೇ 23ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

ಮಲೆನಾಡಿನಲ್ಲಿ ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ, ಸಂಜೆ ವೇಳೆಗೆ ಮಳೆಯಾಗಬಹುದೆಂಬ ನಿರೀಕ್ಷೆ ಇದೆ. ಬೆಂಗಳೂರಲ್ಲೂ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಯಾವ್ಯಾವ ಪ್ರದೇಶಗಳಲ್ಲಿ ಮಳೆಯಾಗಿದೆ, ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಕುರಿತು ಮಾಹಿತಿಗಾಗಿ ಮುಂದೆ ಓದಿ..

ರಾಜ್ಯದ ವಿವಿಧೆಡೆ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ? ರಾಜ್ಯದ ವಿವಿಧೆಡೆ ಮಳೆ: ಯಾವ ಜಿಲ್ಲೆಗಳಲ್ಲಿ ಎಷ್ಟಿದೆ ತಾಪಮಾನ?

 ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?

ಎಚ್‌ಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಉಷ್ಣಾಂಶ?

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಉಷ್ಣಾಂಶ?

ಮಡಿಕೇರಿಯಲ್ಲಿ24ಡಿಗ್ರಿ ಗರಿಷ್ಠ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಶಿವಮೊಗ್ಗದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮೈಸೂರಿನಲ್ಲಿ 30ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ಶಿರಾಲಿ, ಧರ್ಮಸ್ಥಳ, ಮಾಣಿ, ಹಳಿಯಾಳ, ಭಟ್ಕಳ, ಹೊಳಲ್ಕೆರೆ, ಪುತ್ತೂರು, ಕದ್ರ, ಬೈಲಹೊಂಗಲ, ಬೆಳಗಾವಿ, ಹಾಸನ, ಮಲವಳ್ಳಿ, ಸಿದ್ದಾಪುರ, ಮೂಡಬಿದಿರೆ, ಬೆಳ್ತಂಗಡಿ, ಕಾರ್ಕಳ, ದಾವಣಗೆರೆ, ಭಾಗಮಂಡಲ, ಕಳಸ, ಶೃಂಗೇರಿ, ಚನ್ನಗಿರಿ, ಮಹಾಲಿಂಗಪುರ, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

 ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

English summary
Next 24 hours Partly cloudy sky. Rain, thundershowers very likely. Maximum and Minimum temperatures very likely to be around 33 and 21 degree Celsius respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X