ಬೆಂಗಳೂರು ರಸ್ತೆಗುಂಡಿಯಲ್ಲಿ ಗಿಡ ನೆಟ್ಟ ಬಿಜೆಪಿ ನಾಯಕರು!
ಬೆಂಗಳೂರು, ಅಕ್ಟೋಬರ್ 12 : ಕರ್ನಾಟಕ ಬಿಜೆಪಿ ನಾಯಕರು ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಿದ್ದಾರೆ. ಮಳೆಯಿಂದ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ವೀಕ್ಷಣೆಗೆ ನಗರ ಪ್ರದಕ್ಷಿಣೆ ನಡೆಸಲಾಗುತ್ತಿದೆ.
ಗುರುವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿವಿಧ ನಾಯಕರು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸುತ್ತಿದ್ದಾರೆ. ಬೆಂಗಳೂರು ನಗರದ ಶಾಸಕರು, ಬಿಬಿಎಂಪಿ ಸದಸ್ಯರು ಯಡಿಯೂರಪ್ಪ ಜೊತೆಗಿದ್ದಾರೆ.
ಬಿ.ಎಸ್.ಯಡಿಯೂರಪ್ಪ, ಆರ್.ಅಶೋಕ್, ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ವಿವಿಧ ನಾಯಕರು ಬೆಂಗಳೂರು ನಗರದ ಪ್ರದಕ್ಷಿಣೆಯಲ್ಲಿ ಪಾಲ್ಗೊಂಡಿದ್ದಾರೆ. ಮಳೆಯಿಂದ ಹಾನಿಗೊಳಗಾದ ರಸ್ತೆಗಳು, ವಿವಿಧ ಬಡಾವಣೆಗಳಲ್ಲಿನ ರಸ್ತೆಗುಂಡಿಗಳನ್ನು ನಾಯಕರು ವೀಕ್ಷಿಸಲಿದ್ದಾರೆ.
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಿಂದ ನಗರ ಪ್ರದಕ್ಷಿಣೆ ಆರಂಭವಾಗಿದೆ. ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು, ಬಣ್ಣ ಬಳಿದು ನಾಯಕರು ಬಿಬಿಎಂಪಿ ಗಮನ ಸೆಳೆಯುತ್ತಿದ್ದಾರೆ. ರಸ್ತೆ ದುರಸ್ಥಿ ಕಾರ್ಯವನ್ನು ಕೈಗೊಳ್ಳದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ...

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, 'ಇದುವರೆಗೂ ನಗರದ ರಸ್ತೆಗಳಿಗೆ 400 ಕೋಟಿ ಹಣ ಖರ್ಚು ಮಾಡಲಾಗಿದೆ. 100 ಕೋಟಿ ಸಾಲ ಪಡೆಯಲಾಗಿದೆ. ಆದರೂ ನಗರದ ರಸ್ತೆಗಳ ಸ್ಥಿತಿ ಹೀಗಿದೆ. ಇದು ಸಿದ್ದರಾಮಯ್ಯ ಸರ್ಕಾರದ ಆಡಳಿತದ ಫಲ' ಎಂದು ಆರೋಪಿಸಿದರು.

ಗಿಡ ನೆಟ್ಟ ಬಿಜೆಪಿ ನಾಯಕರು
ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯ ಅಂಡರ್ ಪಾಸ್ ಬಳಿ ರಸ್ತೆಯ ಸ್ಥಿತಿಯನ್ನು ನಾಯಕರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಗಮನ ಸೆಳೆಯಲು ರಸ್ತೆಗುಂಡಿಯಲ್ಲಿ ಗಿಡ ನೆಟ್ಟು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಯಿತು.

ರಸ್ತೆ ಗುಂಡಿಗೆ ಬಣ್ಣ ಬಳಿದರು
ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮುಂದಿನ ರಸ್ತೆ ಗುಂಡಿಗೆ ಬಿಜೆಪಿ ನಾಯಕರು ಬಣ್ಣ ಬಳಿದರು. ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀರು ನಿಲ್ಲುವ ಸ್ಥಳ ಪರಿಶೀಲನೆ
ಅಂಡರ್ ಪಾಸ್‌ಗಳ ನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದ ನಾಯಕರು, ಮಳೆ ಬಂದರೆ ನೀರು ನಿಲ್ಲುವುದನ್ನು ವೀಕ್ಷಿಸಿದರು.











Click it and Unblock the Notifications