2 ದಿನ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 20: ಇನ್ನೆರೆಡು ದಿನ ಬೆಂಗಳೂರಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬುಧವಾರ ನಗರ ಕೇಂದ್ರ ಭಾಗದಲ್ಲಿ1.2 ಮಿ.ಮೀನಷ್ಟು ಮಳೆಯಾಗಿದೆ. ಕೆಂಗೇರಿ, ಉತ್ತರಹಳ್ಳಿ, ಜಯನಗರ ಸಮೀಪ ಸ್ವಲ್ಪ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದರ ಪರಿಣಾಮ ರಾಜ್ಯದ ಕೆಲವೆಡೆ ಮಳೆಯಾಗಲಿದೆ.
ಕೇರಳ ಭಾಗದಿಂದ ಮುಂಗಾರು ಮಳೆ ಬಲಿಷ್ಠವಾಗುವ ಸಾಧ್ಯತೆ ಕಡಿಮೆ ಇದೆ.ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತ ಬಲಗೊಂಡರೆ ಈ ಭಾಗದ ಮೋಡಗಳನ್ನು ತನ್ನತ್ತ ಸೆಳೆದುಕೊಳ್ಳಲಿದೆ ಆಗ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬುಧವಾರ ಆಗುಂಬೆಯಲ್ಲಿ 10 ಸೆಂ.ಮೀ, ಸಿದ್ದಾಪುರದಲ್ಲಿ 7 ಸೆಂ.ಮೀ, ಪಣಂಬೂರು, ಉಪ್ಪಿನಂಗಡಿ, ಮಾಣಿ, ಸುಬ್ರಹ್ಮಣ್ಯದಲ್ಲಿ ತಲಾ 5 ಸೆಂಮೀ, ಹೊನ್ನಾವರ, ಗೇರುಸೊಪ್ಪದಲ್ಲಿ 4 ಸೆಂಮೀ, ಮಂಗಳೂರು, ಕೋಟಾ, ಕಾರ್ಕಳ, ಉಡುಪಿ, ಭಾಗಮಂಡಲ, ಲೋಂಡಾದಲ್ಲಿ ತಲಾ 3 ಸೆಂ.ಮೀನಷ್ಟು ಮಳೆಯಾಗಿದೆ.
ಬೆಂಗಳೂರು ಕೇಂದ್ರ ಭಾಗದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಕನಿಷ್ಠ 22.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 32.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21.4 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ.












Click it and Unblock the Notifications