ಬೆಂಗಳೂರು : ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ದಾಳಿ
ಬೆಂಗಳೂರು, ಡಿಸೆಂಬರ್ 15 : ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ಪಿ.ರಮೇಶ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಮೇಶ್ 213ರ ಚುನಾವಣೆಗೆ ಸಿ.ವಿ.ರಾಮನ್ ನಗರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಮಂಗಳವಾರ ಮಧ್ಯಾಹ್ನದ ವೇಳೆಗೆ ಜೋಗುಪಾಳ್ಯದಲ್ಲಿರುವ ಪಿ.ರಮೇಶ್ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ. ಪಿ.ರಮೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಅವರ ಆಪ್ತರು ಎಂದು ತಿಳಿದುಬಂದಿದೆ. [ಕೇಜ್ರಿವಾಲ್ ಕಚೇರಿ ಮೇಲೆ ಸಿಬಿಐ ದಾಳಿ]

2013ರ ವಿಧಾನಸಭೆ ಚುನಾವಣೆಗೆ ಪಿ.ರಮೇಶ್ ಅವರು ಸಿ.ವಿ.ರಾಮನ್ ನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 44,982 ಮತಗಳನ್ನು ಪಡೆದು ಸೋಲು ಅನಿಭವಿಸಿದ್ದರು. ಸಿದ್ದರಾಮಯ್ಯ, ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ ಮುಂತಾದ ನಾಯಕರು ರಮೇಶ್ ಪರವಾಗಿ ಪ್ರಚಾರ ನಡೆಸಿದ್ದರು. [ಮಾಹಿತಿ : ಇಂಡಿಯಾ ವೋಟ್ಸ್]
ದೆಹಲಿ ಮತ್ತು ಕೋಲ್ಕತ್ತಾದಿಂದ ಬಂದ ಐಟಿ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ವೇಳೆ ನಿವಾಸದಲ್ಲಿದ್ದ 3 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಜಪ್ತಿ ಮಾಡಿದ್ದಾರೆ ಎಂದು ವರದಿಯಾಗಿದೆ. 45 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.












Click it and Unblock the Notifications