Get Updates
Get notified of breaking news, exclusive insights, and must-see stories!

ಜನರ ಶೈಕ್ಷಣಿಕ, ಆರ್ಥಿಕ ಸ್ಥಿತಿ ಸುಧಾರಿಸುತ್ತಿದ್ದರೂ ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಳ- ಗೃಹ ಸಚಿವ ಆರಗ ಜ್ಞಾನೇಂದ್ರ

ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ದಾಖಲಾಗಿರುವ ಅಪರಾಧಗಳ ಸಂಖ್ಯೆಯು ಕಳೆದ ಮೂರು ವರ್ಷಗಳಲ್ಲಿ ಪ್ರತಿ ವರ್ಷ 14,000 ದಷ್ಟು ಏರಿಕೆಯಾಗಿದೆ.

ಬೆಂಗಳೂರು, ಫೆಬ್ರವರಿ. 24: ಸಾಮಾನ್ಯವಾಗಿ ಜನರ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತೆ ಅಪರಾಧಗಳು ಕಡಿಮೆಯಾಗುತ್ತವೆ ಎಂಬ ನಂಬಿ ಎಲ್ಲರಲ್ಲೂ ಇರುತ್ತದೆ. ಆದರೆ, ಜನರ ಶಿಕ್ಷಣ ಮತ್ತು ಆರ್ಥಿಕ ಸ್ಥಿತಿಗತಿಗಳು ಸುಧಾರಿಸುತ್ತಿದ್ದರೂ ರಾಜ್ಯದಲ್ಲಿ ಅಪರಾಧ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ರಾಜ್ಯ ವಿಧಾನಸಭೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

"ಜನರು ಉತ್ತಮ ಶಿಕ್ಷಣ ಪಡೆಯುತ್ತಿರುವಾಗ ಮತ್ತು ಅವರ ಆರ್ಥಿಕ ಸ್ಥಿತಿಗತಿ ಸುಧಾರಿಸುತ್ತಿರುವ ಜೊತೆಗೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ದುರದೃಷ್ಟಕರ" ಎಂದು ಆರಗ ಜ್ಞಾನೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವರ ಮಾತಿಗೆ ಸಹಮತ ವ್ಯಕ್ತಪಡಿಸಿದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿಕ್ಷಣದಲ್ಲಿ ಸುಧಾರಣೆಯಾಗುತ್ತಿದ್ದಂತೆ ಅಪರಾಧ ಪ್ರಕರಣಗಳ ಅಂಕಿ ಸಂಖೆಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.

 Increase in Crime Rate Even Education, Economic Growth Says Araga Jnanendra

ರಾಜ್ಯ ಗೃಹ ಇಲಾಖೆಯ ಅಂಕಿ ಅಂಶಗಳು, ವಿಶೇಷವಾಗಿ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ದಾಖಲಾಗಿರುವ ಅಪರಾಧಗಳ ಸಂಖ್ಯೆಯು ಕಳೆದ ಮೂರು ವರ್ಷಗಳಲ್ಲಿ ಪ್ರತಿ ವರ್ಷ 14,000 ದಷ್ಟು ಏರಿಕೆಯಾಗಿದೆ. ಆದರೆ ವಿಶೇಷ ಸ್ಥಳೀಯ ಕಾನೂನುಗಳು (SLL) ಮತ್ತು ಸೈಬರ್ ಅಪರಾಧಗಳ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಸುಮಾರು 4,000 ಹೆಚ್ಚಳವಾಗಿದೆ ಎಂಬಮಾಹಿತಿಯನ್ನು ಹೊರಹಾಕಿದೆ.

ಹನೂರಿನ ಕಾಂಗ್ರೆಸ್ ಶಾಸಕ ಆರ್ ನರೇಂದ್ರ ಅವರ ಅಭಿಪ್ರಾಯಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಒಪ್ಪಿಗೆ ಸೂಚಿಸಿದ್ದಾರೆ. ಶಾಸಕ ಆರ್ ನರೇಂದ್ರ ಅವರು ವಿಧಾನಸಭೆಯಲ್ಲಿ ಆರಂಭಿಸಿದ ಚರ್ಚೆಗೆ ಪ್ರತಿಕ್ರಿಯಿಸಿದ ಸಚಿವ ಆರಗ ಜ್ಞಾನೇಂದ್ರ, ಅಪರಾಧ ಪ್ರಕರಣಗಲ ಬಗ್ಗೆ ಉತ್ತಮ ತನಿಖೆ ಮತ್ತು ಶಿಕ್ಷೆಯ ಪ್ರಮಾಣವನ್ನು ಸುಧಾರಿಸಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.

 Increase in Crime Rate Even Education, Economic Growth Says Araga Jnanendra

ಈ ಹಿಂದೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಳನ್ನು ಪಡೆಯುವಲ್ಲಿ ವಿಳಂಬ ಸೇರಿದಂತೆ ವಿವಿಧ ಕಾರಣಗಳಿಂದ ಮೂರು ವರ್ಷಗಳ ನಂತರ ಪ್ರಕರಣಗಳು ವಿಚಾರಣೆಗೆ ಬರುತ್ತಿವೆ. ಇಂತಹ ವಿಳಂಬದ ಸಮಸ್ಯೆಯನ್ನು ಪರಿಹರಿಸಲು, ರಾಜ್ಯ ಸರ್ಕಾರವು ವಿಧಿವಿಜ್ಞಾನ ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಇದಲ್ಲದೆ, ಅಪರಾಧದ ಸ್ಥಳದಿಂದ ಸಾಕ್ಷ್ಯವನ್ನು ಸಂಗ್ರಹಿಸಲು ತಜ್ಞರು ರಾಜ್ಯ ಸರ್ಕಾರವು ಅಪರಾಧ ಅಧಿಕಾರಿಗಳನ್ನು (ಎಸ್‌ಒಸಿಒ) ನೇಮಿಸಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

"ಅತ್ಯಾಚಾರ ಅಥವಾ ಕೊಲೆ ಪ್ರಕರಣಗಳು ವರದಿಯಾದಾಗ, ಸಬ್ ಇನ್ಸ್‌ಪೆಕ್ಟರ್ ಸ್ಥಳಕ್ಕೆ ಹೋಗಿ ಸಾಕ್ಷ್ಯ ಸಂಗ್ರಹಿಸುತ್ತಾರೆ. ಆದರೆ, ಈಗ ನಾವು ತಜ್ಞರ ಮೂಲಕ ಸಾಕ್ಷ್ಯ ಸಂಗ್ರಹಿಸುವ ಪ್ರಯತ್ನ ಮಾಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಗುಜರಾತ್ ಎಫ್‌ಎಸ್‌ಎಲ್ ವಿಶ್ವವಿದ್ಯಾಲಯದಿಂದ ವಿಶೇಷ ತರಬೇತಿ ಪಡೆದ 206 ಎಸ್‌ಒಸಿಒ ಅವರನ್ನು ನೇಮಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರ ಪ್ರತಿ ತಾಲೂಕಿನಲ್ಲಿ ಒಬ್ಬ ಎಸ್‌ಒಸಿಒ ನಿಯೋಜಿಸಲಿದೆ. ಇಲಾಖೆಯು ಸೈಬರ್ ಅಪರಾಧಗಳ ತನಿಖೆಯ ತಂಡಗಳನ್ನು ಬಲಪಡಿಸಿದೆ" ಎಂದು ಮಾಹಿತಿ ನೀಡಿದ್ದಾರೆ.

"ನಮ್ಮ ಅಧಿಕಾರಿಗಳು ಎಫ್‌ಐಆರ್ ದಾಖಲಿಸುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸುತ್ತಾರೆ, ಆದರೆ ಯಾವುದೇ ಶಿಕ್ಷೆಯಾಗದಿದ್ದರೆ, ಪೊಲೀಸರು ನಿರಾಶೆಗೊಳ್ಳುತ್ತಾರೆ. ಇದು ಅಪರಾಧಿಗಳಿಗೂ ಉತ್ತೇಜನ ನೀಡುತ್ತಿದೆ. ಈ ವರ್ಷವೇ ಸರ್ಕಾರ ವಿವಿಧೆಡೆ 200 ಕೋಟಿ ರೂಪಾಯಿ ವೆಚ್ಚದಲ್ಲಿ ಪೊಲೀಸ್ ಠಾಣೆಗಳನ್ನು ನಿರ್ಮಿಸುತ್ತಿದೆ. ಎಲ್ಲಾ ಕೇಂದ್ರ ಕಾರಾಗೃಹಗಳಲ್ಲಿ ಹೆಚ್ಚುವರಿ ಬ್ಯಾರಕ್ ಜೊತೆಗೆ ಶಿವಮೊಗ್ಗದಲ್ಲಿ ಹೊಸ ಜೈಲು ನಿರ್ಮಿಸಲಾಗುತ್ತಿದೆ" ಎಂದು ಗೃಹ ಸಚಿವರು ಹೇಳಿದ್ದಾರೆ. ಇದಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಅಪರಾಧ ತಡೆಗೆ ರಾಜ್ಯ ಸರ್ಕಾರ ಈ ಕ್ರಮಗಳನ್ನು ಕೈಗೊಂಡರೆ ರಾಜ್ಯದ ಜೈಲುಗಳು ಭರ್ತಿಯಾಗಲಿವೆ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+