ಬೆಂಗಳೂರಿನ ಈ ಭಾಗದಲ್ಲಿ ನಾಯಿಗಳ ಹಾವಳಿ ಹೆಚ್ಚಳ, ವಾರ್ಡ್ ಸ್ವಚ್ಛ ಸರ್ವೇಕ್ಷಣ ರ‍್ಯಾಂಕಿಂಗ್!
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದೆ ಎನ್ನುವ ಗಂಭೀರವಾದ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಇದೀಗ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಿ ಎಂದು ಅಧಿಕಾರಿಗಳಿಗೆ ಬೆಂಗಳೂರಿನ ಪ್ರಮುಖ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ದೇಶನ ನೀಡಲಾಗಿದೆ. ಅದರ ವಿವರ ಇಲ್ಲಿದೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಪ್ರಗತಿ ಹೆಚ್ಚಿಸಲು ಆಯುಕ್ತರಾದ ಡಾ. ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಶುಪಾಲನಾ ವಿಭಾಗದ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಸುಪ್ರೀಂ ಕೋರ್ಟ್ ಬೀದಿ ನಾಯಿ ಹಾವಳಿ ಮೇಲಿನ ಮೊಕದ್ದಮೆಯ ಆದೇಶದ ಅನುಪಾಲನೆಗೆ ಸಂಬಂಧಿಸಿದಂತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ.

ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 63,340 ಸಮುದಾಯ ಶ್ವಾನಗಳಿವೆ. ವಲಯಕ್ಕೆ ಒಂದರಂತೆ ಎರಡು ಎಬಿಸಿ -ಎ.ಆರ್.ವಿ ಕೇಂದ್ರಗಳಲ್ಲಿ ಒಟ್ಟಾರೆ 171 ಶ್ವಾನ ಸಾಮರ್ಥ್ಯದ ಕೊಠಡಿಗಳಿವೆ. 2 ಸೇವಾದಾರರ ಮುಖಾಂತರ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಒಟ್ಟಾರೆ 4,068 ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ, 27,581 ನಾಯಿಗಳಿಗೆ ಎ.ಆರ್.ವಿ ಹಾಗೂ ಸಿ.ವಿ ಲಸಿಕೆಯನ್ನು ನೀಡಲಾಗಿದೆ ಎಂದು ಮುಖ್ಯ ಪಶುವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಇಲಾಖೆಯು ಇರುವ ವ್ಯವಸ್ಥೆಯಲ್ಲಿ ಗಮನಾರ್ಹವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾರ್ಯನಿರ್ವಣೆಯ ಕ್ಷಮತ ಹೆಚ್ಚಿಸಿ ಕಾರ್ಯ ಸಾಧನೆಯನ್ನು ಉತ್ತಮಗೊಳಿಸಲು ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಲು ಹಾಗೂ ಎ.ಡಬ್ಲ್ಯೂ.ಬಿ.ಐ ಮಾನದಂಡದಂತೆ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಕೈಗೊಳ್ಳಬೇಕಾದ ಸೂಕ್ತ ಕ್ರಮಗಳು:
1. ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕಾರ್ಯಕ್ರಮದ ಪ್ರಗತಿಯನ್ನು ಹೆಚ್ಚಿಸಲು ಕ್ರಮ
2. ಎಬಿಸಿ - ಎ. ಆರ್.ವಿ ಟೆಂಡರ್ ಪ್ರಕ್ರಿಯೆಯಲ್ಲಿ ಹೆಚ್ಚಿನ ಸೇವಾದಾರರು ಪಾಲ್ಗೊಳ್ಳುವಂತೆ ಅವಕಾಶ ನೀಡಲು ನಿಯಮಗಳ ಅವಶ್ಯಕ ಸರಳೀಕರಣ ಗೊಳಿಸುವಂತೆ ಎ.ಡಬ್ಲ್ಯೂ.ಬಿ.ಐ ರವರಿಗೆ ಮನವಿ ಸಲ್ಲಿಸಲು ಸೂಚನೆ
3. ದೀರ್ಘಕಾಲದ ನಿಗಾ ಘಟಕದಲ್ಲಿ ಇರಿಸಿರುವ ಶ್ವಾನಗಳನ್ನು ಸಾಧ್ಯವಾದಷ್ಟು ದತ್ತು ಕಾರ್ಯಕ್ರಮದಲ್ಲಿ ಸೇರಿಸುವಂತೆ ಪ್ರೋತ್ಸಾಹಿಸಲು ಸೂಚನೆ
4. ಶ್ವಾನಗಳಿಗೆ ಆಹಾರ ನೀಡುವ ಸ್ಥಳಗಳನ್ನು ಗುರುತಿಸಲು ಸೂಚನೆ
5. ಎಲ್ಲಾ ಇಲಾಖೆ ಕಾರ್ಯಕ್ರಮಗಳನ್ನು ಸಾರ್ವಜನಿಕರಿಗೆ ತಲುಪಿಸುವಂತೆ ತಿಳುವಳಿಕೆ ಕಾರ್ಯಕ್ರಮಗಳನ್ನು ಕೈಗೊಳ್ಳಲು ಎ.ಬಿ.ಸಿ - ಎ.ಆರ್.ವಿ ಕಾರ್ಯಕ್ರಮದ ಉಳಿಕೆ ಬಿಲ್ಲುಗಳನ್ನು ಕೂಡಲೇ ಪಾವತಿಸಲು ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ಅವಶ್ಯಕತೆ ಇರುವ ಎ.ಆರ್.ವಿ ಲಸಿಕೆಯ ದಾಸ್ತಾನನ್ನು ಪಾಲಿಕೆಯಲ್ಲಿ ಈಗಾಗಲೇ ಲಭ್ಯವಿರುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ: ಇನ್ನು ಪಶ್ಚಿಮ ನಗರ ಪಾಲಿಕೆಯ ಪ್ರಮುಖ ರಸ್ತೆಗಳು, ಮಾರುಕಟ್ಟೆಗಳು ಹಾಗೂ ವಸತಿ ಪ್ರದೇಶಗಳಲ್ಲಿ ತೀವ್ರ ಸ್ವಚ್ಛತೆ ಮತ್ತು ಬೀದಿ ಗುಡಿಸುಚ ಕಾರ್ಯ ಕೈಗೊಂಡು, ಕಸದ ರಾಶಿ ಮತ್ತು 'ಬ್ಲ್ಯಾಕ್‌ಸ್ಪಾಟ್ (ಕಸ ಸುರಿಯುವ ಸ್ಥಳ)' ಪ್ರದೇಶಗಳನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಇಂದಿರಾ ಕ್ಯಾಂಟೀನ್‌ಗಳ ಸುತ್ತಮುತ್ತಲಿನ ಸ್ವಚ್ಛತೆ ಮತ್ತು ಹೈಜಿನ್ ಕಾಪಾಡುವತ್ತ ವಿಶೇಷ ಗಮನ ಹರಿಸಬೇಕು. ಪೌರಕಾರ್ಮಿಕರು ಹಾಗೂ ಜೆ.ಹೆಚ್.ಐಗಳು ಸಕ್ರಿಯವಾಗಿ ಪಾಲ್ಗೊಂಡು ವಿಭಾಗ ಮಟ್ಟದಲ್ಲಿ ಪರಿಣಾಮಕಾರಿಯಾದ ಮೇಲ್ವಿಚಾರಣೆ ನಡೆಸಲು ಸೂಚನೆ ನೀಡಿದರು. ಒಂದು ವಾರದೊಳಗೆ ಎಲ್ಲಾ ಹೂಳನ್ನು ಹಾಗೂ ಟ್ರಾಕ್ಟರ್‌ಗಳಲ್ಲಿ ಸಂಗ್ರಹವಾದ ಕಸವನ್ನು ತೆರವುಗೊಳಿಸಲು ಮತ್ತು ವಾರ್ಡ್‌ವಾರು ಪೂರ್ಣಗೊಂಡ ಕೆಲಸದ ಪಟ್ಟಿಯನ್ನು ಆಯುಕ್ತರ ಕಚೇರಿಗೆ ಸಲ್ಲಿಸಲು ನಿರ್ದೇಶನ ನೀಡಿದ್ದಾರೆ.
ವಾರ್ಡ್ ಸ್ವಚ್ಛ ಸರ್ವೇಕ್ಷಣ ರ‍್ಯಾಂಕಿಂಗ್: ನಗರದಲ್ಲಿ ನಿರಂತರ ಸ್ವಚ್ಛತೆ ಕಾಪಾಡಲು "ವಾರ್ಡ್ ಸ್ವಚ್ಛ ಸರ್ವೇಕ್ಷಣ ರ‍್ಯಾಂಕಿಂಗ್" ಯೋಜನೆಯನ್ನು ಪ್ರತಿ ತಿಂಗಳು ಜಾರಿಗೊಳಿಸಲಾಗುತ್ತದೆ. ವಾರ್ಡ್‌ಗಳ ಸ್ವಚ್ಛತೆ ಪ್ರಮಾಣ ಮತ್ತು ಕಾರ್ಯದಕ್ಷತೆಯ ಆಧಾರದ ಮೇಲೆ ಸ್ಟಾರ್ ರೇಟಿಂಗ್‌ಗಳು ನೀಡಲಾಗುತ್ತವೆ ಎಂದು ಹೇಳಲಾಗಿದೆ.
-
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ












Click it and Unblock the Notifications