ರಸ್ತೆಗುಂಡಿ: ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಗೆ ಬೀಗ ಜಡಿಯಲು ಸಜ್ಜಾದ ಎಎಪಿ
ಬೆಂಗಳೂರು, ಅಕ್ಟೋಬರ್ 30: ಸಿಲಿಕಾನ್ ಸಿಟಿ, ಐಟಿ ನಗರಿ ಎಂಬ ಖ್ಯಾತಿಗೆ ಪಾತ್ರವಾಗಿರುವ ಬೆಂಗಳೂರಿನಲ್ಲಿ ರಸ್ತೆಗುಂಡಿ ಗೆ ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಗೆ ಬೀಗ ಜಡಿಯುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ.
ಸೋಮವಾರ ಬೆಳಗ್ಗೆ 11.30 ಗಂಟೆಗೆ ಆಮ್ ಆದ್ಮಿ ಪಕ್ಷ (ಎಎಪಿ)ದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಮುಖಂಡರು ನಿಯೋಗವು ನಗರದ ಸ್ವಾತಂತ್ರ್ಯ ಉದ್ಯಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಅಲ್ಲಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿ ತಲುಪಲಿದೆ.
ನಗರದಲ್ಲಿನ ರಸ್ತೆ ಗುಂಡಿಗಳ ಸಮಸ್ಯೆ ಯಿಂದಾಗಿ ನಿತ್ಯ ಒಂದಲ್ಲ ಒಂದು ಕಡೆ ಸಾವುನೋವುಗಳು ಸಂಭವಿಸುತ್ತಲೇ ಇವೆ. ಇದಕ್ಕೆ ರಸ್ತೆಗುಂಡಿಗಳ ಬಿಬಎಂಪಿಯ ಅಸಮರ್ಪಕ ನಿರ್ವಹಣೆಯೇ ಕಾರಣ ಎಂದು ಎಎಪಿ ಆರೋಪಿಸಿದೆ. ಶನಿವಾರ ಬೆಂಗಳೂರಿನ ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ರಸ್ತೆಗುಂಡಿಯಿಂದಾಗಿ ಮತ್ತೊಂದು ಜೀವ ಬಲಿಯಾಗಿದೆ.

ಬಿಬಿಎಂಪಿಯ ನಿರಂತರ ಭ್ರಷ್ಟಾಚಾರ ಹಾಗೂ ವೈಫಲ್ಯಗಳಿಂದ ಕೂಡಿದೆ. ಇಂತಹ ಸಂಸ್ಥೆ ನಮಗೇ ಬೇಕಾ? ಎಂಬ ಪ್ರಶ್ನೆ ಮೂಡಿದೆ. ಈ ಕಾರಣದಿಂದಲೇ ಬಿಬಿಎಂಪಿ ಕೇಂದ್ರ ಕಚೇರಿಗೆ ಬೀಗ ಜಡಿಯಲಿದ್ದೇವೆ ಎಂದು ಎಎಪಿ ಮುಖಂಡರು ತಿಳಿಸಿದ್ದಾರೆ.
ಒಂದು ವಾರದ ಹಿಂದಷ್ಟೇ ರಾಜಾಜಿನಗರದ ಸುಜಾತ ಥಿಯೇಟರ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮಹಿಳಾ ದ್ವಿಚಕ್ರ ವಾಹ ಸವಾರರೊಬ್ಬರು ಬಿದ್ದಿದ್ದರು. ಅವರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮರುದಿನ ಗಾಯಾಳು ಇಎಸ್‌ಐ ಆಸ್ಪತ್ರೆಯಲ್ಲೇ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಇದೀಗ ಯಲಹಂಕ ವ್ಯಾಪ್ತಿಯಲ್ಲಿ ಮತ್ತೊಂದು ಇಂತದ್ದೇ ಘಟನೆ ನಡೆದಿದೆ. ಬಿಬಿಎಂಪಿ ರಸ್ತೆ ನಿರ್ವಹಣೆ ಕುರಿತು ಸಾಕಷ್ಟು ಆಕ್ರೋಶ ವ್ಯಕ್ತಪವಾಗಿತ್ತು. ಈ ವೇಳೆ ಖಂಡಿಸಿದ್ದ ಎಎಪಿ ಇದೀಗಿ ಬಿಬಿಎಂಪಿ ಕೇಂದ್ರ ಕಚೇರಿಗೆ ಬೀಗ ಜಡಿಯಲು ಮುಂದಾಗಿದೆ.












Click it and Unblock the Notifications