Independence day 2023: ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ ಎಂದ DCM ಡಿಕೆಶಿ
ಬೆಂಗಳೂರು, ಆಗಸ್ಟ್, 15: ಇಂದು ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅವಶ್ಯಕತೆಯಿದ ಎಂದರು. ಹಾಗಾದರೆ ಈ ಹೇಳಿಕೆಯ ಹಿಂದಿರುವ ಉದ್ದೇಶವೇನು ಎಂದು ಇಲ್ಲಿ ತಿಳಿಯಿರಿ.
ಇದೇ ವೇಳೆ ಅವರು, ಎಲ್ಲರಿಗೂ 77ನೇ ಸ್ವಾತಂತ್ರ ದಿನಾಚರಣೆಯ ಶುಭಾಶಯಗಳನ್ನು ತಿಳಿಸುತ್ತಾ, Freedom is never dear at any price. It is the breath of life. What would a man not pay for living? ಎನ್ನುವ ಮಹಾತ್ಮ ಗಾಂಧೀಜಿಯವರ ಸಾಲುಗಳನ್ನು ಹೇಳುವ ಮೂಲಕ ಭಾಷಣ ಆರಂಭ ಮಾಡಿದರು.

"ಸ್ವಾತಂತ್ರ್ಯ ಎಂದರೆ ಬೆಲೆ ಕಟ್ಟಿ ಪಡೆಯುವ ವಸ್ತುವಲ್ಲ. ಅದು ಬದುಕಿನ ಉಸಿರು. ಹೀಗಾಗಿ ಸ್ವಾತಂತ್ರ್ಯಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವೇ?" ಎಂದರ್ಥ. ಈ ಜಗತ್ತಿನಲ್ಲಿ ಯಾವುದಕ್ಕೆ ಬೇಕಾದರೂ ಬೆಲೆ ಕಟ್ಟಬಹುದು. ಆದರೆ ಸ್ವಾತಂತ್ರ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸ್ವಾತಂತ್ರ್ಯದ ಬೆಲೆ ಗೊತ್ತಾಗುವುದು ಅದಕ್ಕಾಗಿ ರಕ್ತ ಸುರಿಸಿ ಹೋರಾಡಿ ಪ್ರಾಣ ತೆತ್ತವರಿಗೆ ಮಾತ್ರ ಎಂದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಕಾಂಗ್ರೆಸ್ ಪಕ್ಷ
ಮಹಾತ್ಮಾ ಗಾಂಧಿ, ಜವಹರಲಾಲ್ ನೆಹರೂ, ಮೌಲಾನ ಅಜಾದ್, ಭಗತ್ ಸಿಂಗ್, ವಲ್ಲಭಬಾಯ್ ಪಟೇಲ್, ಡಾ ಬಿ ಆರ್ ಅಂಬೇಡ್ಕರ್, ಸರೋಜಿನಿ ನಾಯ್ಡು ಅವರ ಹೋರಾಟದ ಫಲವಾಗಿ ನಾವು ಸ್ವತಂತ್ರ ಭಾರತದ ಫಲಾನುಭವಿಗಳಾಗಿದ್ದೇವೆ. ಹೀಗೆ ಈ ದೇಶಕ್ಕೆ ಸ್ವಾತಂತ್ರ್ಯ ತಂದದ್ದು, ದೇಶ ಕಟ್ಟಿದ್ದು, ಅಭಿವೃದ್ಧಿಯ ಪಥದಲ್ಲಿ ದೇಶವನ್ನು ನಿಲ್ಲಿಸಿದ್ದು ಕಾಂಗ್ರೆಸ್ ಪಕ್ಷ ಎಂದರು.
"ಸ್ವಾತಂತ್ರ್ಯ ಎಂದರೆ ಅದು ಕೇವಲ ರಾಜಕೀಯ ನಿರ್ಧಾರವೂ ಅಲ್ಲ ಅಥವಾ ಹೊಸ ಸಂವಿಧಾನವಲ್ಲ, ಮನಸ್ಸು ಹಾಗೂ ಹೃದಯಕ್ಕೆ ಸಂಬಂಧಿಸಿದ್ದು. ಒಂದು ವೇಳೆ ಮನಸ್ಸು ಸಂಕುಚಿತವಾಗಿದ್ದರೆ ಅಥವಾ ಗೊಂದಲದಲ್ಲಿದ್ದರೆ, ಹೃದಯ ಅಸೂಯೆ ಅಥವಾ ದ್ವೇಷದಿಂದ ತುಂಬಿದ್ದರೆ ಅಲ್ಲಿ ಸ್ವಾತಂತ್ರ್ಯ ಎಂಬುದು ಅಸ್ಥಿತ್ವದಲ್ಲಿರುವುದಿಲ್ಲ," ಎಂದರ್ಥ ಎಂದರು.
ಸ್ವಾತಂತ್ರ್ಯ ದಿನ ಎಂದರೆ ನಮ್ಮ ಸಾಧನೆಯ ಇತಿಹಾಸ ನೆನಪಿಸಿಕೊಳ್ಳುವ ದಿನ, ವರ್ತಮಾನದಲ್ಲಿ ನಾವು ಹೇಗಿದ್ದೇವೆ ಎಂದು ಅವಲೋಕನ ಮಾಡಿಕೊಳ್ಳುವ ದಿನ. ಇಂದು ನಾವು ಬರೀ ಧ್ವಜ ಹಾರಿಸಿ ರಾಷ್ಟ್ರಗೀತೆ ಹಾಡಿದರೆ ಸಾಲದು. ದೇಶದ ಸ್ವಾತಂತ್ರ್ಯ ಏನಾಗಿದೆ ಎಂದು ಅರಿಯಬೇಕಿದೆ. ಹಾಗೆಯೇ ಮತ್ತೊಂದೆಡೆ ಮಣಿಪುರದಲ್ಲಿ ಮಾರಣ ಹೋಮ, ಹರಿಯಾಣದ ಗಲಭೆ, ಉತ್ತರ ಪ್ರದೇಶದ ಗನಘೋರ ದೃಶ್ಯಗಳನ್ನು ನೋಡಿದರೆ ನಮ್ಮ ದೇಶದ ಸ್ವಾತಂತ್ರ್ಯ ಏನಾಗಿದೆ? ಅದು ಯಾರ ಕೈಯಲ್ಲಿ ನಲುಗುತ್ತಿದೆ? ಎಂದು ತಿಳಿಯುತ್ತದೆ ಎಂದರು.
ಸ್ವಾತಂತ್ರ್ಯದ ಮೂಲ ಗುರಿಯಾದ ಐಕ್ಯತೆ, ಸಮಗ್ರತೆ, ಸಹಬಾಳ್ವೆ, ಕೋಮು ಸೌಹಾರ್ದತೆ ಇಂದು ದಿಕ್ಕಾಪಾಲಾಗಿದೆ. ಅವರಿಗೆ ಸ್ವಾತಂತ್ರ್ಯದ ಮಹತ್ವ ಗೊತ್ತಿಲ್ಲ. ಏಕೆಂದರೆ ಅದಕ್ಕಾಗಿ ಹೋರಾಡಿದ ಇತಿಹಾಸ "ಆ" ಪಕ್ಷಕ್ಕಿಲ್ಲ. ಹೀಗಾಗಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ನಮ್ಮ ಯುವ ಪೀಳಿಗೆಗೆ ಅರಿವು ಮೂಡಿಸಬೇಕು.
ಈ ವಿಚಾರದಲ್ಲಿ ನಾವು ಎಡವಿದ ಪರಿಣಾಮ ಬ್ರಿಟೀಷರಿಗೆ ಕ್ಷಮಾಪಣೆ ಪತ್ರ ಬರೆದು ಗುಲಾಮರಾದವರನ್ನು ದೇಶಭಕ್ತ ಎಂದು ಪೂಜಿಸಲಾಗುತ್ತಿದೆ ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದರು.
ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನ ಮುಡಿಪಿಟ್ಟ ಗಾಂಧೀಜಿಯನ್ನು ಪ್ರಶ್ನೆ ಮಾಡಲಾಗುತ್ತಿದೆ. ಕೋಮುವಾದಿ ಹಾಗೂ ಸರ್ವಾಧಿಕಾರಿ ಮನಸ್ಥಿತಿ ದೇಶದ ಅಧಿಕಾರದ ಗದ್ದುಗೆಯಲ್ಲಿದೆ. ಈ ದುಷ್ಟಶಕ್ತಿಗಳು ಕೇವಲ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿಲ್ಲ. ಅವರು ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದ್ದಾರೆ.
ಹೀಗೆ ಅಹಿಂಸೆ, ಶಾಂತಿ, ಸೌಹಾರ್ದತೆ, ಭ್ರಾತೃತ್ವದ ಭದ್ರ ಬುನಾದಿಯ ಮೇಲೆ ನಿರ್ಮಾಣವಾಗಿರುವ ಈ ದೇಶದಲ್ಲಿ ಧರ್ಮ, ಜಾತಿ, ವರ್ಣದ ವಿಷ ಬೀಜ ಬಿತ್ತಲಾಗುತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇಂತಹ ದ್ವೇಷ ಬಿತ್ತುವ ಪರಿಸ್ಥಿತಿಯಲ್ಲಿ ದೇಶದಲ್ಲಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮದ ಅಗತ್ಯವಿದೆ. ಅಂದಿನ ಸ್ವಾತಂತ್ರ್ಯ ಸಂಗ್ರಾಮ ಬ್ರಿಟೀಷರ ವಿರುದ್ಧ ನಡೆದಿತ್ತು, ಇಂದಿನ ಸಂಗ್ರಾಮ ಕೋಮುವಾದಿ ಶಕ್ತಿಗಳ ವಿರುದ್ಧ ನಡೆಯಬೇಕು. ಅಂದು ಕಾಂಗ್ರೆಸ್ ನೇತೃತ್ವದಲ್ಲಿ ದೇಶವೇ ಒಂದಾಗಿತ್ತು, ಇಂದು ಕಾಂಗ್ರೆಸ್ ನೇತೃತ್ವದಲ್ಲಿ "ಇಂಡಿಯಾ" ಒಂದಾಗಿದೆ ಎಂದರು.
ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ. 1837ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮವಾಗಿದೆ. ಈ ಸಮಯದಲ್ಲಿ 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದರು.
ಆದರೆ ದುರಾದೃಷ್ಟವಶಾತ್ ಅಕ್ಟೋಬರ್ 31, 1837ರಂದು ಈ ದಂಗೆಯ ಪ್ರಮುಖ ಹೋರಾಟಗಾರರನ್ನು ಗಲ್ಲಿಗೇರಿಸಲಾಯಿತು ಎಂದರು.
ಶಿವಮೊಗ್ಗ ಜಿಲ್ಲೆಯ ಈಸೂರು ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ ಗ್ರಾಮವಾಗಿದೆ. ಏಪ್ರಿಲ್ 25, 1938ರಂದು ವಿದುರಾಶ್ವಥದಲ್ಲಿ ನಡೆದ ಗೋಲಿಬಾರ್ ಅನ್ನು ದಕ್ಷಿಣ ಭಾರತದ ಜಲಿಯನ್ ವಾಲಾಭಾಗ್ ಹತ್ಯಾಕಾಂಡ ಎನ್ನಬಹುದು. ಕಾಂಗ್ರೆಸ್ ಮುಖಂಡ ಹನುಮಂತ ರಾವ್ ಅವರ ನೇತೃತ್ವದಲ್ಲಿ 1930ರಲ್ಲಿ ಅಂಕೋಲಾದಲ್ಲಿ ಉಪ್ಪಿನ ಸತ್ಯಾಗ್ರಹ ನಡೆಯುತ್ತದೆ. ಹೀಗೆ ಸ್ವಾತಂತ್ರ್ಯ ಹೋರಾಟಕ್ಕೆ ವೇದಿಕೆಯಾಗಿದ್ದ ಕರ್ನಾಟಕದಲ್ಲೇ ಈಗ ಹೊಸ "ಇಂಡಿಯಾ" ಕೂಡ ಉದಯವಾಗಿದೆ. ಈ ಇಂಡಿಯಾಗೆ ಶಕ್ತಿ ತುಂಬಿ ದೇಶವನ್ನು ರಕ್ಷಣೆ ಮಾಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications