Independence Day 2023: ಪಂಚ ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪಿಸಿ ಸಿಎಂ ಹೇಳಿದ್ದೇನು?

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಳಗ್ಗೆ ಒಂಬತ್ತು ಗಂಟೆಗೆ ಧ್ವಜಾರೋಹಣ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು.

ಭಾರತೀಯ‌ ರಕ್ಷಣಾ ಸೇವೆಯ ಮೂವರು ಹಿರಿಯ ಅಧಿಕಾರಿಗಳನ್ನು ಸಿಎಂಗೆ ಪರಿಚಯಿಸಲಾಯಿತು. ಇದಾದ ನಂತರ ನಾಡಿನ ಜನತೆಗೆ ಸ್ವಾತಂತ್ರೋತ್ಸವದ ಸಂದೇಶ ನೀಡಿದ ಸಿಎಂ ಪಂಚ ಗ್ಯಾರಂಟಿಗಳ ಬಗ್ಗೆ ಪ್ರಸ್ತಾಪ ಮಾಡಿದರು.

Independence Day 2023: What did CM Siddaramaiah say about Congress guarantees?

ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ, ಬೆಲೆ ಏರಿಕೆ, ನಿರುದ್ಯೋಗ, ಜಾತಿ-ಧರ್ಮಗಳ ಕಾರಣಕ್ಕಾಗಿ ತಾರತಮ್ಯ, ಭ್ರಷ್ಟಾಟಚಾರ ಮುಂತಾದ ಕಾರಣಗಳಿಗಾಗಿ ನಾಡಿನ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದ ಅನೇಕ ಜಿಲ್ಲೆಗಳ ಜನರ ತಲಾದಾಯ ಹಿಂದೆ ಆಡಳಿತ ನಡೆಸಿದ್ದ ನಮ್ಮ ಹಿಂದಿನ ಸರ್ಕಾರದ ಅವಧಿಗೆ ಹೋಲಿಸಿದರೆ ಆ ನಂತರದ ಅವಧಿಯಲ್ಲಿ ಏರಿಕೆಯಾಗದೆ ಬಡತನ ಇನ್ನಷ್ಟು ಹೆಚ್ಚುತ್ತಿರುವುದು ನಮ್ಮ ಗಮನಕ್ಕೆ ಬಂದಿತ್ತು ಎಂದಿದ್ದಾರೆ.

ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿದ ನಮ್ಮ ಸರ್ಕಾರ ಜನರ ಆರ್ಥಿಕ, ಸಾಮಾಜಿಕ ಚೈತನ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯ [Universal Basic income] ಎಂಬ ಹೊಸ ಆರ್ಥಿಕ ಪ್ರಮೇಯವನ್ನು ಅಳವಡಿಸಿಕೊಂಡು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ ಎಂದು ಸಿಎಂ ಹೇಳಿದರು.

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ನಡೆದ ಸಚಿವ ಸಂಪುಟ ಸಭೆಯಲ್ಲಿ ಚುನಾವಣೆಗೂ ಮೊದಲು ನಾವು ಆಶ್ವಾಸನೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಿದ್ದಲ್ಲದೆ, ಸರ್ಕಾರ ಅಧಿಕಾರಕ್ಕೆ ಬಂದ ಮೂರು ವಾರಗಳಲ್ಲಿಯೇ ಗ್ಯಾರಂಟಿ ಯೋಜನೆಗಳ ಜಾರಿ ಪ್ರಾರಂಭಿಸಿ ಎಲ್ಲ ಸವಲತ್ತುಗಳನ್ನು ಜನರಿಗೆ ನೇರವಾಗಿ ತಲುಪಿಸುತ್ತಿದ್ದೇವೆ ಎಂದರು.

Independence Day 2023: What did CM Siddaramaiah say about Congress guarantees?

ಉಚಿತ ಬಸ್ ಪ್ರಯಾಣ ಸೌಲಭ್ಯ

ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ 'ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ ಪ್ರಶಂಸೆ ಮಾಡಿ ಬರೆದಿವೆ. ಶಕ್ತಿ ಯೋಜನೆ ನಮ್ಮ ಆರ್ಥಿಕ ಶಕ್ತಿಗೆ ನವ ಚೈತನ್ಯವನ್ನೇ ಉಂಟು ಮಾಡಿದೆ. ಇದುವರೆಗೆ 38.54 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಸಿಎಂ ಹೇಳಿದರು.

ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ

ಎರಡನೇ ಗ್ಯಾರಂಟಿ ಯೋಜನೆ, 200 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ. ಈ ಯೋಜನೆ ಜುಲೈ 1 ರಿಂದ ಜಾರಿಗೆ ಬಂದಿದ್ದು, ಆಗಸ್ಟ್ 1 ರ ಬಿಲ್‍ನಿಂದ ಗ್ರಾಹಕರಿಗೆ ಸೌಲಭ್ಯ ದೊರೆಯುತ್ತಿದೆ. ಸುಮಾರು 2 ಕೋಟಿ ಗ್ರಾಹಕರಿಗೆ ಈ ಯೋಜನೆಯಿಂದ ಅನುಕೂಲವಾಗಲಿದ್ದು, ಇದುವರೆಗೆ 1.49 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದಾರೆ. ಬಾಡಿಗೆದಾರರಿಗೂ ಈ ಸೌಲಭ್ಯ ವಿಸ್ತರಿಸಲಾಗಿದೆ. ಇದಕ್ಕಾಗಿ ನಾವು ವಾರ್ಷಿಕವಾಗಿ 13,910 ಕೋಟಿ ರೂ.ಗಳಷ್ಟು ವಿನಿಯೋಗಿಸುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳಿಕೊಂಡರು.

ಮತ್ತೊಂದು ಗ್ಯಾರಂಟಿ ಯೋಜನೆ 'ಅನ್ನ ಭಾಗ್ಯ'

ಹಸಿವು ಮುಕ್ತ ಕರ್ನಾಟಕದ ಕಲ್ಪನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಗ್ಯಾರಂಟಿ ಯೋಜನೆ 'ಅನ್ನ ಭಾಗ್ಯʼ. ಕೇಂದ್ರ ಸರ್ಕಾರದ ಉದ್ದೇಶಪೂರ್ವಕ ಅಸಹಕಾರದ ನಡುವೆಯೂ ನಮ್ಮ ಸರ್ಕಾರವು ಪ್ರತಿ ಫಲಾನುಭವಿಗೆ ಕೇಂದ್ರವು ನೀಡುವ 5 ಕೆಜಿ ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 5 ಕೆಜಿ ಆಹಾರ ಧಾನ್ಯ ನೀಡಲು ಕ್ರಮ ತೆಗೆದುಕೊಳ್ಳುತ್ತಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ನಗದು ವರ್ಗಾಯಿಸಲು ನಿರ್ಧರಿಸಿದ್ದು, ಈ ವರೆಗೆ 1.04 ಕೋಟಿ ಕುಟುಂಬಗಳು ನಗದು ಸೌಲಭ್ಯ ಪಡೆಯುತ್ತಿವೆ. ಉಳಿದ ಕುಟುಂಬಗಳಿಗೆ ಸದ್ಯದಲ್ಲಿಯೇ ಹಣ ವರ್ಗಾಯಿಸಲು ಕ್ರಮ ಕೈಗೊಳ್ಳಲಿದ್ದೇವೆ ಎಂದರು.

'ಗೃಹಲಕ್ಷ್ಮಿ' ಯೋಜನೆ

ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಲ್ಲವು. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 'ಗೃಹಲಕ್ಷ್ಮಿ' ಯೋಜನೆಯನ್ನು ಜಾರಿಗೆ ತರುತ್ತಿದೆ. ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ದಿನಾಂಕ ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಮಾಸಿಕ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೆ 1.08 ಕೋಟಿ ಕುಟುಂಬಗಳ ಯಜಮಾನಿಯರು ನೋಂದಾಯಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+