Independence Day 2024: ಬೆಂಗಳೂರಿನಲ್ಲಿ ಸಂಚಾರ ಮಾರ್ಗ ಬದಲು
ಬೆಂಗಳೂರು, ಆಗಸ್ಟ್ 13: ಉದ್ಯಾನ ನಗರಿ ಬೆಂಗಳೂರಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ತಯಾರಿ ನಡೆಯುತ್ತಿದೆ. ಸರ್ಕಾರದಿಂದ ನಡೆಯುವ ಕಾರ್ಯಕ್ರಮ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜನೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ. ಈ ಕಾರ್ಯಕ್ರಮದ ಹಿನ್ನಲೆಯಲ್ಲಿ ನಗರದಲ್ಲಿ ಕೆಲವು ಮಾರ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರಿ ಪೊಲೀಸರು ಆದೇಶವನ್ನು ಹೊರಡಿಸಿದ್ದಾರೆ.
ಬೆಂಗಳೂರು ನಗರ ಸಂಚಾರಿ ಪೊಲೀಸರು ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಸರ್ವರಿಗೂ ಸ್ವಾತಂತ್ರೋತ್ಸವ-2024ರ ಸಂಭ್ರಮಾಚರಣೆಯ ಶುಭಾಶಯಗಳನ್ನು ಪೊಲೀಸರು ತಿಳಿಸಿದ್ದಾರೆ. ದಿನಾಂಕ15/08/2024ರಂದು ಬೆಳಗ್ಗೆ 9ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ-2024ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳು ಧ್ವಜಾರೋಹಣ ಮಾಡಿ ಗೌರವವಂದನೆ ಸ್ವೀಕರಿಸಲಿದ್ದಾರೆ ಎಂದು ಹೇಳಿದ್ದಾರೆ.

ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
* ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದು ಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.
* ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
* ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
ವಾಹನ ನಿಲುಗಡೆ ನಿಷೇಧ ರಸ್ತೆಗಳು
* ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
* ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್‌ರಸ್ತೆ ಜಂಕ್ಷನ್‌ವರೆಗೆ
* ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ.
ಬೆಂಗಳೂರು ಸಂಚಾರ ಪೊಲೀಸರಿಂದ ಸಾರ್ವಜನಿಕ ಬಂಧುಗಳಲ್ಲಿ ವಿಶೇಷ ಮನವಿ. ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.
ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112ಗೆ ಕರೆ ಮಾಡಿ, ಸ್ವಾತಂತ್ರೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ ಎಂದು ಪೊಲೀಸರು ಮನವಿ ಮಾಡಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications