ಬೆಂಗಳೂರಲ್ಲಿ ಮಳೆ: ಸ್ವಾತಂತ್ರೋತ್ಸವದ ಮೇಲೆ ಕಾರ್ಮೋಡ?
ಬೆಂಗಳೂರು, ಆಗಸ್ಟ್ 15: ಇಲ್ಲಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಬೇಕಿರುವ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಮೇಲೆ ಕಾರ್ಮೋಡಗಳು ಕವಿದಿವೆ.
ಆಗಸ್ಟ್ 14ರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ, ಮಾಣಿಕ್ ಷಾ ಮೈದಾನ ಸಂಪೂರ್ಣವಾಗಿ ಒದ್ದೆಯಾಗಿದ್ದು, ಅಲ್ಲಲ್ಲಿ ಅಲ್ಪಸ್ವಲ್ಪ ಕೆಸರೂ ಆವರಿಸಿದೆ. ಇದರಿಂದಾಗಿ, ವಿದ್ಯಾರ್ಥಿಗಳ ಪಥ ಸಂಚಲನ ಮುಂತಾದ ಕಾರ್ಯಕ್ರಮಗಳಿಗೆ ತೊಂದರೆಯಾಗುವ ಆತಂಕ ಎದುರಾಗಿದೆ.

ಆಗಸ್ಟ್ 14ರ ಮಧ್ಯರಾತ್ರಿ ಆರಂಭವಾದ ಮಳೆ, ಆಗಸ್ಟ್ 15ರ ಬೆಳಗ್ಗೆ ಸುಮಾರು 8.30ಕ್ಕೆ ನಿಂತಿದೆ. ಆದರೂ, ಕೆಲವಾರು ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿದೇ ಇತ್ತು. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸದ್ಯಕ್ಕೆ ಮಳೆಯಿಲ್ಲವಾದರೂ, ಅಲ್ಲಿ ಸ್ವಾತಂತ್ರೋತ್ಸವ ನಡೆಯುವುದು ಬಹುತೇಕ ಅನುಮಾನ ಎಂಬಂತಾಗಿದೆ.
ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಸರ್ಕಾರ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದ್ದರಿಂದ ಈ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
More From
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications