ಶುಕ್ರವಾರದಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ; ವಾಹನ ಪಾರ್ಕಿಂಗ್ ವಿವರ
ಬೆಂಗಳೂರು, ಆಗಸ್ಟ್ 05: ಲಾಲ್‌ಬಾಗ್‌ನಲ್ಲಿ ಆಗಸ್ಟ್ 5 ರಿಂದ ಆಗಸ್ಟ್ 15ರವರೆಗೂ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿ ಪ್ರದರ್ಶನವನ್ನು ವಿಶೇಷವಾಗಿ ದಿ. ಡಾ. ರಾಜ್ ಕುಮಾರ್ ಮತ್ತು ದಿ. ಪುನೀತ್ ರಾಜ್‌ಕುಮಾರ್‌ಗೆ ಸಮರ್ಪಣೆ ಮಾಡಲಾಗಿದೆ.
ಫಲಪುಷ್ಪ ಪ್ರದರ್ಶನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆಯಿದೆ. ಜನರ ವಾಹನ ನಿಲುಗಡೆಗೆ ಎಲ್ಲಿ ವ್ಯವಸ್ಥೆ ಮಾಡಲಾಗಿದೆ? ಎಂಬುದರ ಬಗ್ಗೆ ಒನ್ಇಂಡಿಯಾ ಕನ್ನಡದ ವಿಶೇಷ ವರದಿ ಇಲ್ಲಿದೆ.
ಲಾಲ್‌ಬಾಗ್ ನಲ್ಲಿ ಈವರೆಗೂ 211 ಫ್ಲವರ್ ಶೋ ನಡೆದಿದೆ. ಒಂದೂವರೆ ವರ್ಷದ ಬಳಿಕ ಈ ಬಾರಿ ಫ್ಲವರ್ ಶೋ ನಡೆಯುತ್ತಿದ್ದೂ ಸುಮಾರು 15 ಲಕ್ಷಕ್ಕೂ ಹೆಚ್ಚು ಜನ ಫ್ಲವರ್ ಶೋಗೆ ಆಗಮಿಸುವ ಸಾಧ್ಯತೆಗಳಿವೆ. ಆಗಸ್ಟ್ 5 ರಿಂದ 15 ರವರೆಗೆ ಫ್ಲವರ್ ಶೋ 11 ದಿನಗಳ ಕಾಲ ನಡೆಯಲಿದೆ.
ಮುಖ್ಯಮಂತ್ರಿ ಬಸವರಾj ಬೊಮ್ಮಾಯಿ ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ , ರಾಘವೇಂದ್ರ ರಾಜ್‌ಕುಮಾರ್ ಸೇರಿದಂತೆ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇಂದು ವರಮಹಾಲಕ್ಷ್ಮಿ ಹಬ್ಬ, ಶನಿವಾರ, ಭಾನುವಾರದ ರಜೆ ಇರುವುದರಿಂದ ಮೂರು ದಿನ ಹೆಚ್ಚಿನ ಜನರು ಆಗಮಿಸಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ. ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಇಲ್ಲಿ ವಾಹನ ನಿಲ್ಲಿಸಿದರೆ ಯಾವುದೇ ತೊಂದರೆಯಿಲ್ಲ
ಲಾಲ್‌ಬಾಗ್‌ಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಈ ರಸ್ತೆಗಳಲ್ಲಿ ವಾಹನ ನಿಲುಗಡೆ ಅವಕಾಶ ಕಲ್ಪಿಸಲಾಗಿದೆ.
*ಡಾ. ಮರೀಗೌಡ ರಸ್ತೆ, ಅಲ್ ಅಮೀನ್ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
*ಕೆಹೆಚ್ ರಸ್ತೆ , ಶಾಂತಿ ನಗರ , ಬಿಎಂಟಿಸಿ ಡಿಪೋ ಮೇಲೆ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದು.
*ಡಾ. ಮರೀಗೌಡ ರಸ್ತೆ, ಹಾಪ್ ಕಾಮ್ಸ್ ನಲ್ಲಿ ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
*ಜೆಸಿ ರಸ್ತೆ , ಬಿಬಿಎಂಪಿ ಪಾರ್ಕಿಂಗ್ ಸ್ಥಳಗಲ್ಲಿ ವಾಹನ ನಿಲುಗಡೆಯನ್ನು ಮಾಡಬಹುದು ಎಂದ ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಇಲ್ಲಿ ವಾಹನ ನಿಲ್ಲಿಸಬಾರದು
*ಡಾ. ಮರೀಗೌಡ ರಸ್ತೆ, ಲಾಲ್‌ಬಾಗ್ ಮುಖ್ಯದ್ವಾರದಿಂದ ನಿಮಾನ್ಸ್‌ವರೆಗೂ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಗೆ ನಿಷೇಧ
*ಕೆಹೆಚ್ ರಸ್ತೆ, ಕೆಹೆಚ್ ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಗೆ ನಿಷೇಧ
*ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ಬಾಗ್ ಮುಖ್ಯದ್ವಾರದವರೆಗೆ ವಾಹನ ನಿಲುಗಡೆಗೆ ನಿಷೇಧ.
*ಸಿದ್ದಯ್ಯ ರಸ್ತೆ , ಊರ್ವಶಿ ಜಂಕ್ಷನ್‌ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್‌ವರೆಗೆ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಗೆ ನಿಷೇಧ.
*ಬಿಟಿಎಸ್ ರಸ್ತೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂದು ವಿಲ್ಸನ್ ಗಾರ್ಡನ್ ಪೊಲೀಸರು ತಿಳಿಸಿದ್ದಾರೆ.

ವಾಹನ ನಿಲುಗಡೆ ಸಮಸ್ಯೆಗೆ ಪರಿಹಾರವೇನು?
ತೋಟಗಾರಿಕಾ ಇಲಾಖೆ ಮತ್ತು ಮೈಸೂರು ಕಲಾಸಂಘದ ಸಂಯುಕ್ತ ಸಹಯೋಗದಲ್ಲಿ ದಿನಾಂಕ 05.08.2022 ರಿಂದ 15.08.2022ರ ವರೆಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ 11 ದಿನಗಳ ಕಾಲ ಡಾ. ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ವಿಷಯಾಧರಿದ ಫಲ ಪುಷ್ಪ ಪ್ರದರ್‍ಶನ ಆಯೋಜಿಸಲಾಗಿದೆ.
ಈ ವೇಳೆ ಸಾರ್ವಜನಿಕರು , ಪ್ರವಾಸಿಗರು , ದೇಶ ವಿದೇಶಿಗರು ಹಾಗೂ ಶಾಲಾ ಮಕ್ಕಳನ್ನೊಳಗೊಂಡಂತೆ 7-8 ಲಕ್ಷ ಜನರು ಬರುವ ನಿರೀಕ್ಷೆಯಿದ್ದು. ವಾಹನ ಸಂಚಾರ ನಿಯಂತ್ರಣ , ನಿಲುಗಡೆಗೆ ಅವಕಾಶವನ್ನು ವಿಲ್ಸನ್ ಗಾರ್ಡನ್ ಪೊಲೀಸರು ಸೂಕ್ತ ವ್ಯವಸ್ಥೆಯನ್ನು ಮಾಡಿದ್ದಾರೆ.
ಸಂಚಾರ ನಿಯಂತ್ರಣ ತಗ್ಗಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಮೂಹ ಸಾರಿಗೆಯಾದ ಬಿಎಂಟಿಸಿ, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಸಂಚಾರಿ ಪೊಲೀಸರು ಕೋರಿಕೊಂಡಿದ್ದಾರೆ. ಅದಾಗ್ಯೂ ವಾಹನ ನಿಲುಗಡೆದೆ ಸೂಕ್ತ ವ್ಯವಸ್ಥೆ ಮಾಡಿರುವ ಸ್ಥಳದಲ್ಲೇ ನಿಲುಗಡೆ ಮಾಡಲು ಸೂಚಿಸಲಾಗಿದೆ.

ಟಿಕೆಟ್ ದರವನ್ನು ಇಳಿಕೆ
ಆಗಸ್ಟ್ 5 ರಿಂದ 15 ರವರೆಗೆ ಫ್ಲವರ್ ಶೋ 11 ದಿನಗಳ ಕಾಲ ನಡೆಯಲಿದೆ. ಬೆಳ್ಳಗ್ಗೆ 7 ರಿಂದ ಸಂಜೆ 7ರವರೆಗೆ ಫ್ಲವರ್ ಶೋ ವೀಕ್ಷಣೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಈ ಬಾರಿ ಟಿಕೆಟ್ ದರವನ್ನು ಇಳಿಕೆ ಮಾಡಲಾಗಿದ್ದೂ 75 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದ್ದೂ ಈ ಬಾರಿ ಹೊರ ರಾಜ್ಯ ಹಾಗೂ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸಾಧ್ಯತೆಯಿದೆ. ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸರು ಪಾರ್ಕಿಂಗ್ ಗಾಗಿಸೂಕ್ತ ಕ್ರಮವನ್ನು ಕೈಗೊಡಿದ್ದಾರೆ.












Click it and Unblock the Notifications