ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಶಾ ಮೈದಾನಕ್ಕೆ ತೆರಳುವವರಿಗೆ ಮಾರ್ಗಸೂಚಿ

ಬೆಂಗಳೂರು, ಆಗಸ್ಟ್ 14: 71 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಶಲ್ ಮಾಣಿಕ್ ಶಾ ಕವಾಯತು ಮೈದಾನದಲ್ಲಿ ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ವಿಶೇಷ ಕವಾಯತು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಶಲ್ ಮಾಣಿಕ್ ಶಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲೂ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

Independence day: Some guidlines to go to Bengaluru's manekshaw parade ground

* ಬಿಳಿ ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಗಣ್ಯರು, ಮಿಲಿಟರಿ ಅಧಿಕಾರಿಗಳು, ಕಬ್ಬನ್ ರಸ್ತೆಯಲ್ಲಿ ಸಂಚರಿಸಿ, ಪ್ರವೇಶ ದ್ವಾರ-2ರ ಮುಖಾಂತರ ಒಳ ಪ್ರವೇಶಿಸಿ ಬಲ ತಿರುವ ಪಡೆದು ನಂತರ ಪೆರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನಗಳ ನಿಲುಗಡೆ ಪ್ರದೇಶದಲ್ಲಿ ನಿಲುಗಡೆ ಮಾಡುವಂತೆ ಕೋರಲಾಗಿದೆ ಹಾಗೂ ಹಿರಿಯ ಮಿಲಿಟರಿ ಅಧಿಕಾರಿಗಳು ಪರೇಡ್ ಮೈದಾನದ ಉತ್ತರ ದಿಕ್ಕಿನಲ್ಲಿ ಅವರಿಗೆ ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವಂತೆ ಕೋರಲಾಗಿದೆ.

* ಹಳದಿ ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಮಾಣಿಕ್ ಶಾ ಪೆರೇಡ್ ಮೈದಾನಕ್ಕೆ ಉತ್ತರಾಭಿಮುಖವಾಗಿರುವ ಪ್ರವೇಶ ದ್ವಾರ-1 ರ ಮುಖಾಂತರ ಒಳ ಪ್ರವೇಶಿಸಿ ತಮ್ಮ ವಾಹನಗಳನ್ನು ಪೆರೇಡ್ ಮೈದಾನದ ಉತ್ತರ-ಪಶ್ಚಿಮ ಭಾಗದಲ್ಲಿ ನಿಲುಗಡೆ ಮಾಡುವಂತೆ ಕೋರಲಾಗಿದೆ.

* ಕಾರ್ಯಕ್ರಮಕ್ಕೆ ಬರುವ ಎಲ್ಲಾ ಗಣ್ಯರು, ಮಾನ್ಯ ಸಚಿವರುಗಳು, ಮಾನ್ಯ ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮಾಧ್ಯಮದವರ ವಾಹನಗಳು, ಓ.ಬಿ. ವಾಹನಗಳು ಗೇಟ್ ನಂ. 3 ಮೂಲಕ ಒಳಪ್ರವೇಶಿಸಿ ಎಲ್ಲಾ ಗಣ್ಯರು, ಮಾನ್ಯ ಸಚಿವರುಗಳು, ಮಾನ್ಯ ಸರ್ಕಾರದ ಕಾರ್ಯದರ್ಶಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಬಲ ತಿರುವು ಪಡೆದು ಪರೇಡ್ ಮೈದಾನದ ಉತ್ತರ ದಿಕ್ಕಿನಲ್ಲಿ ಅವರಿಗೆ ನಿಗದಿ ಪಡಿಸಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆ ಮಾಡುವಂತೆ ಕೋರಲಾಗಿದೆ ಮಾಧ್ಯಮದವರ ವಾಹನಗಳು, ಓ.ಬಿ. ವಾಹನಗಳು ಎಡ ತಿರುವು ಪಡೆದು ಪರೇಡ್ ಮೈದಾನದ ಪೂರ್ವ ಭಾಗದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

* ಪಿಂಕ್ ಪಾಸ್ ಮತ್ತು ಹಸಿರು ಪಾಸ್ ಹೊಂದಿರುವ ಆಹ್ವಾನಿತರು ತಮ್ಮ ವಾಹನಗಳನ್ನು ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ನಿಂದ ಕೆ.ಆರ್.ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ, ಕಾಮರಾಜ ರಸ್ತೆ ಆರ್ಮಿ ಶಾಲೆ ಮುಂಭಾಗ, ಮೈನ್ ಗಾರ್ಡ್ ಕ್ರಾಸ್ ರಸ್ತೆ, ಸಫೀನ ಪ್ಲಾಜಾ ಬಳಿ ನಿಲುಗಡೆ ಮಾಡಬಹುದಾಗಿದೆ. ಪಿಂಕ್ ಪಾಸ್ ಹೊಂದಿರುವವರು ಗೇಟ್ ನಂ. 3 ರ ಮೂಲಕ ಹಾಗೂ ಹಸಿರು ಪಾಸ್ ಹೊಂದಿರುವವರು ಗೇಟ್ ನಂ. 4 ರ ಮುಖಾಂತರ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸುವಂತೆ ಕೋರಲಾಗಿದೆ.

* ಕವಾಯತಿನಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾರ್ವಜನಿಕರುಗಳನ್ನು-ವಿಧ್ಯಾರ್ಥಿಗಳನ್ನು ಕರೆತರುವ ಎಲ್ಲಾ ವಾಹನಗಳು ಪ್ರವೇಶ ದ್ವಾರ-1 (ಒಂದು) ರ ಬಳಿ ನಿಲ್ಲಿಸಿ, ಮಕ್ಕಳನ್ನು ಇಳಿಸಿ ನಂತರ ತಮ್ಮ ವಾಹನಗಳನ್ನು ಎಂ.ಜಿ.ರಸ್ತೆಯಲ್ಲಿ, ಅನಿಲ್ ಕುಂಬ್ಳೆ ವೃತ್ತದಿಂದ ಮೆಟ್ರೋ ನಿಲ್ದಾಣದ ವರೆಗೆ ರಸ್ತೆಯ ಉತ್ತರ ಭಾಗದಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದ್ದು.

* ಪಿ.ಡಬ್ಬ್ಯೂ.ಡಿ, ಬಿ.ಬಿ.ಎಂ.ಪಿ ಮತ್ತಿತರ ಸರ್ಕಾರಿ ವಾಹನಗಳು ಪ್ರವೇಶ ದ್ವಾರ-1 (ಒಂದು)ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

* ಎಲ್ಲಾ ದ್ವಿಚಕ್ರ/ನಾಲ್ಕು ಚಕ್ರದ ವಾಹನಗಳ ಸವಾರರು ವಾಹನಗಳನ್ನು ಕಾಮರಾಜ ರಸ್ತೆಯ ಪೂರ್ವ ಭಾಗದಲ್ಲಿ ನಿಲುಗಡೆ ಮಾಡಿ, ನಂತರ ಕಾಮರಾಜ ರಸ್ತೆಯಲ್ಲಿರುವ ಪ್ರವೇಶ ದ್ವಾರ 4-5ರ ಮುಖಾಂತರ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸಬಹುದಾಗಿದೆ.

* ಕಾರ್ ಪಾಸುಗಳಿಲ್ಲದೆ ಇರುವವರು, ತಮ್ಮ ವಾಹನಗಳನ್ನು ಕಾಮರಾಜ ರಸ್ತೆ ವಾಹನಗಳ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿ, ಕಾಮರಾಜ ರಸ್ತೆಯಲ್ಲಿರುವ ಪ್ರವೇಶ ದ್ವಾರ 4-5 ರ ಮುಖಾಂತರ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸಬಹುದಾಗಿದೆ.

* ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ಕಾರ್ಯಕ್ರಮಕ್ಕೆ ಬರುವವರು ತಮ್ಮ ವಾಹನಗಳನ್ನು ಸಫೀನಾ ಪ್ಲಾಜಾ ಮುಂಭಾಗ, ಶಿವಾಜಿನಗರ ಬಿ.ಎಂ.ಟಿ.ಸಿ ಸಂಕೀರ್ಣದ 2 ನೇ ಮಹಡಿಯಲ್ಲಿ ಹಾಗೂ ಕಂಠೀರವ ಕ್ರೀಡಾಂಗಣದಲ್ಲಿ ನಿಲುಗಡೆ ಮಾಡಿ ಕಾಮರಾಜ ರಸ್ತೆಯಲ್ಲಿರುವ ಪ್ರವೇಶ ದ್ವಾರ 4-5 ರ ಮುಖಾಂತರ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸಬಹುದಾಗಿದೆ.

* ಎಂ.ಜಿ ರಸ್ತೆ ಅನಿಲ್ ಕುಂಬ್ಳೆ ವೃತ್ತದಿಂದ ಮೆಟ್ರೋ ನಿಲ್ದಾಣದ ವರೆಗೆ ರಸ್ತೆಯ ಉತ್ತರ ಭಾಗದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳನ್ನು ಕರೆತರುವ ಬಿ.ಎಂ.ಟಿ.ಸಿ ಬಸ್ಸುಗಳ ನಿಲುಗಡೆ ಅವಕಾಶ ನೀಡಲಾಗಿದೆ.

* 8:30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

* ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿ ರಸ್ತೆ - ಸಫೀನಾ ಪ್ಲಾಜಾ- ಎಡ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

* ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳು, ಕಾಮರಾಜ ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್‌ನಲ್ಲಿ ಕಾಮರಾಜ ರಸ್ತೆಗೆ ಎಡತಿರುವು ಪಡೆದು, ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು, ಎಂ.ಜಿ.ರಸ್ತೆಯ ಮುಖಾಂತರ ಬಂದು, ಅನಿಲ್‌ಕುಂಬ್ಳೆ ವೃತ್ತದಲ್ಲಿ ಮೂಲಕ ಮುಂದೆ ಸಾಗಬಹುದು.

* ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್ ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ರಸ್ತೆಯಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾ- ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

* ಕಾಫಿ ಬೋರ್ಡ್ ಕಡೆಯಿಂದ ಬಂದು ಬಿ.ಆರ್.ವಿ. ಜಂಕ್ಷನ್ ಕಡೆ ಹೋಗುವ ವಾಹನಗಳು ಟ್ರಾಫಿಕ್ ಹೆಡ್‌ಕ್ವಾರ್ಟರ್ ಬಳಿ ನೇರವಾಗಿ ಇನ್‌ಫೆಂಟ್ರಿ ರಸ್ತೆಯಲ್ಲಿ ಸಾಗಿ ಸಫೀನಾ ಪ್ಲಾಜಾ ಬಳಿ ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ - ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

* ಎಂ.ಜಿ.ರಸ್ತೆಯಲ್ಲಿ ಕಾವೇರಿ ಆರ್ಟ್ಸ್ ಮತ್ತು ಕ್ರಾಫ್ಟ್ ವೃತ್ತದಿಂದ ಬಂದು, ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ಗೆ ಹೋಗುವ ವಾಹನಗಳು ನೇರವಾಗಿ ಎಂ.ಜಿ.ರಸ್ತೆಯಲ್ಲಿ ಸಾಗಿ ಅನಿಲ್‌ಕುಂಬ್ಳೆ ವೃತ್ತದ ಬಳಿಗೆ ಬಂದು, ಬಲ ತಿರುವು ಪಡೆದು- ಬಿ.ಆರ್.ವಿ ಜಂಕ್ಷನ್‌ನಲ್ಲಿ ನೇರವಾಗಿ ಸಂಚರಿಸಿ, ಸೆಂಟ್ರಲ ಸ್ಟ್ರೀಟ್ ರಸ್ತೆಯಲ್ಲಿ ಮುಂದೆ ಸಾಗಬಹುದಾಗಿದೆ.

* ಭದ್ರತಾ ದೃಷ್ಟಿಯಿಂದ ಪೆರೇಡ್ ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿರಕರುಗಳು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ಕೊಂಡೊಯ್ಯದಂತೆ ಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08:30 ಕ್ಕೆ ಗಂಟೆಗಿಂತ ಮುಂಚಿತವಾಗಿ ಆಸೀನರಾಗುವಂತೆ ಕೋರಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+