ಉಪ ಮೇಯರ್ ಹುದ್ದೆ ಮೇಲೆ ಪಕ್ಷೇತರರಿಗೆ ಆಸೆ: ಯಾರಿಗೆ ನಿರಾಸೆ
ಬೆಂಗಳೂರು, ಅಕ್ಟೋಬರ್ 13: ಉಪ ಮೇಯರ್ ಆಗಿದ್ದ ರಮೀಳಾ ಉಮಾಶಂಕರ್ ನಿಧನದ ನಂತರ ತೆರವಾದ ಬಿಬಿಎಂಪಿ ಉಪೇಯರ್ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದ್ದು, ಪಕ್ಷೇತರರು ಹೆಚ್ಚು ಒಲವು ತೋರಿಸುತ್ತಿದ್ದಾರೆ.
ಸೆಪ್ಟೆಂಬರ್ 28ರಂದು ನಡೆದಿದ್ದ ಚುನಾವಣೆ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ದೊರೆಯುವ ಭರವಸೆ ಇಟ್ಟುಕೊಂಡು ಮೈತ್ರಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದ ಪಕ್ಷೇತರರು ಇದೀಗ ಉಪ ಮೇಯರ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದೀಗ ಪಕ್ಷೇತರರು ಒಂದೆಡೆಯಾದರೆ ಇನ್ನೊಂದೆಡೆ ಜೆಡಿಎಸ್ ಸದಸ್ಯರು ಹಗ್ಗಜಗ್ಗಾಟ ಆರಂಭಿಸಿದ್ದಾರೆ. ಉಪ ಮೇಯರ್ ಸ್ಥಾನ ಯಾರ ಪಾಲಿಗೆ ಒಲಿಯುತ್ತದೆ ಎಂದು ಕಾದು ನೋಡಬೇಕಿದೆ.
ಕಾಂಗ್ರೆಸ್, ಜೆಡಿಎಸ್ ಮೈತ್ರಿಯನ್ನು ತರಲು ಪಕ್ಷೇತರರು ಸಹಕರಿಸಿದ್ದಾರೆ, ಅದರಂತೆ ಈ ಬಾರಿಯೂ ಕಾಂಗ್ರೆಸ್ ಜೆಡಿಎಸ್ ಗೆ ಬೆಂಬಲ ನೀಡಿದ್ದಾರೆ, ಸೆಪ್ಟೆಂಬರ್ 28ರಂದು ಚುನಾವಣೆಯಲ್ಲಿ ಉಪ ಮೇಯರ್ ಆಗಿ ಆಯ್ಕೆಯಾಗಿದ್ದ ರಮೀಳಾ ನಿಧನ ನಂತರ ಅವರ ಸ್ಥಾನ ಖಾಲಿ ಇದೆ.

ಉಪ ಮೇಯರ್ ಹುದ್ದೆಗೆ ಜೆಡಿಎಸ್‌ನಲ್ಲಿ ಲಾಬಿ
ಉಪ ಮೇಯರ್ ಹುದ್ದೆ ಗಿಟ್ಟಿಸಲು ಜೆಡಿಎಸ್‌ನಲ್ಲಿ ಭಾರಿ ಪೈಪೋಟಿ ಆರಂಭವಾಗಿದೆ. ರಾಜಶೇಖರ್, ನೇತ್ರಾ ನಾರಾಯಣ್, ಭದ್ರೇಗೌಡ ಬೇಡಿಕೆ ಸಲ್ಲಿಸಿದ್ದಾರೆ. ಆದರೆ ಪಕ್ಷದಲ್ಲಿ ಈ ಕುರಿತು ಇನ್ನೂ ಸ್ಪಷ್ಟ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿದುಬಂದಿದೆ.

ಪಕ್ಷೇತರರ ಬೇಡಿಕೆಗೆ ಜೆಡಿಎಸ್ ಆಕ್ಷೇಪ
ಪಕ್ಷೇತರರ ಬೇಡಿಕೆಗೆ ಜೆಡಿಎಸ್ ಸದಸ್ಯರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರ ಲಾಭ ಪಡೆಯಲು ಪಕ್ಷೇತರರು ಪ್ರಯತನ್ಇಸುತ್ತಿದ್ದಾರೆ. ಉಪ ಮೇಯರ್ ಸ್ಥಾನ ಜೆಡಿಎಸ್ ನೀಡುವ ಕುರಿತು ಕಾಂಗ್ರೆಸ್ ಜತೆ ಮಾತು ಕತೆ ನಡೆದಿದೆ. ಮೂರು ವರ್ಷದಗಳಿಂದ ಜೆಡಿಎಸ್ ಗೆ ಉಪ ಮೇಯರ್ ಸ್ಥಾನ ನೀಡಲಾಗುತ್ತಿದೆ ಎನ್ನುವುದು ಒಂದು ವಾದವಾಗಿದೆ.

ಸೆಪ್ಟೆಂಬರ್ 28ಕ್ಕೆ ನಡೆದಿತ್ತು, ಮೇಯರ್, ಉಪ ಮೇಯರ್ ಚುನಾವಣೆ
ಸೆಪ್ಟೆಂಬರ್ 28ರಂದು ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಮೇಯರ್ ಆಗಿ ಕಾಂಗ್ರೆಸ್ ನ ಗಂಗಾಂಬಿಕೆ ಮಲ್ಲಿಕಾರ್ಜುನ್ , ಉಪ ಮೇಯರ್ ಆಗಿ ರಮೀಳಾ ಉಮಾಶಂಕರ್ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು.

ಉಪಮೇಯರ್ ರಮೀಳಾ ನಿಧನ
ರಮೀಳಾ ಉಮಾಶಂಕರ್ ಅಕ್ಟೋಬರ್ 5ರಂದು ಬೆಳಗಿನ ಜಾವ ನಿಧನರಾದರು.ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೃತಪಟ್ಟಿದ್ದರು. ಅವರ ನಿಧನದಿಂದ ತೆರವಾದ ಉಪ ಮೇಯರ್ ಸ್ಥಾನಕ್ಕೆ ಇದೀಗ ಲಾಬಿ ಆರಂಭವಾಗಿದೆ. ಒಂದೆಡೆ ಜೆಡಿಎಸ್ ಇನ್ನೊಂದೆಡೆ ಪಕ್ಷೇತರರು ಹಗ್ಗಜಗ್ಗಾಟ ಆರಂಭಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications