Onam Special Trains: ಬೆಂಗಳೂರಿಂದ ವಿಶೇಷ ರೈಲು, ವೇಳಾಪಟ್ಟಿ
ಬೆಂಗಳೂರು, ಆಗಸ್ಟ್ 02; ಓಣಂ ಹಬ್ಬದ ಪ್ರಯುಕ್ತ ಸಂಚಾರ ನಡೆಸುವ ಜನರಿಗೆ ಭಾರತೀಯ ರೈಲ್ವೆ ಅನುಕೂಲ ಕಲ್ಪಿಸಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆ ಮಾಡಲು ಮತ್ತು ಓಣಂ ಹಬ್ಬದ ವಿಶೇಷ ರೈಲುಗಳ ಸಂಚಾರ ನಡೆಸುವುದಾಗಿ ಘೋಷಣೆ ಮಾಡಿದೆ.
ನೈಋತ್ಯ ರೈಲ್ವೆ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದೆ. ಓಣಂ ಹಬ್ಬದ ಪ್ರಯುಕ್ತ ಕೊಚುವೇಲಿ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ವಿಶೇಷ ವಿಶೇಷ ರೈಲು ಘೋಷಣೆ ಮಾಡಿದ್ದು, ವೇಳಾಪಟ್ಟಿ ಬಿಡುಗಡೆ ಮಾಡಿದೆ.

ರೈಲು ನಂಬರ್ 06083/ 06084 3 ಟ್ರಿಪ್‌ಗಳನ್ನು ಓಡಿಸಲಾಗುತ್ತದೆ. ಈ ವಿಶೇಷ ರೈಲುಗಳ ವೇಳಾಪಟ್ಟಿ, ನಿಲ್ದಾಣಗಳ ಮಾಹಿತಿ ಇಲ್ಲಿದೆ.
* ರೈಲು ಸಂಖ್ಯೆ 06083 ಕೊಚುವೇಲಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸಾಪ್ತಾಹಿಕ ಓಣಂ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 22, 29 ಮತ್ತು ಸೆಪ್ಟೆಂಬರ್ 5 ರಂದು ಪ್ರತಿ ಮಂಗಳವಾರ ಸಂಜೆ 6:05ಗಂಟೆಗೆ ಕೊಚುವೇಲಿಯಿಂದ ಹೊರಟು ಮರುದಿನ ಬೆಳಗ್ಗೆ 10:55ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣ ತಲುಪಲಿದೆ.
ಈ ರೈಲು ಮಾರ್ಗದಲ್ಲಿ ಕೊಲ್ಲಂ, ಕಾಯಂಕುಲಂ, ಮಾವೇಲಿಕರ, ಚೆಂಗನ್ನೂರ್, ತಿರುವಳ್ಳ, ಚೆಂಗನಸೇರಿ, ಕೊಟ್ಟಾಯಂ, ಎರ್ನಾಕುಲಂ ಟೌನ್, ಅಲುವಾ, ತ್ರಿಶೂರ್, ಪಾಲಕ್ಕಾಡ್, ಪೊದನೂರು, ತಿರುಪ್ಪೂರ್, ಈರೋಡ್, ಸೇಲಂ, ತಿರುಪತ್ತೂರ್, ಬಂಗಾರಪೇಟೆ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳಿಗೆ ಆಗಮಿಸಿ/ ನಿರ್ಗಮಿಸಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06084 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕೊಚುವೇಲಿ ಓಣಂ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಆಗಸ್ಟ್ 23, 30 ಮತ್ತು ಸೆಪ್ಟೆಂಬರ್ 6 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರರು ನಿಲ್ದಾಣದಿಂದ ಮಧ್ಯಾಹ್ನ 12:45ಕ್ಕೆ ಹೊರಟು, ಮರುದಿನ ಬೆಳಗ್ಗೆ 6 ಗಂಟೆಗೆ ಕೊಚುವೇಲಿ ನಿಲ್ದಾಣ ತಲುಪಲಿದೆ.
ಈ ರೈಲು ಮಾರ್ಗದಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರ್, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚೆಂಗನಸೇರಿ, ತಿರುವಳ್ಳ, ಚೆಂಗನ್ನೂರ, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಿಗೆ ಆಗಮಿಸಿ/ ನಿರ್ಗಮಿಸಲಿದೆ.
ಈ ವಿಶೇಷ ರೈಲುಗಳು 20 ಬೋಗಿಗಳನ್ನು ಹೊಂದಿರಲಿವೆ. 16 ಎಸಿ ತ್ರಿ ಟೈಯರ್ ಗರೀಬ್ ರಥ ಬೋಗಿಗಳು, 2 ದ್ವಿತೀಯ ದರ್ಜೆಯ ಸ್ಲೀಪರ್ ಬೋಗಿಗಳು ಮತ್ತು 2 ಜನರೇಟರ್ ಕಾರ್‌ನೊಂದಿಗೆ ಲಗೇಜ್ ಕಮ್ ಬ್ರೇಕ್-ವ್ಯಾನ್ ಇರಲಿವೆ. ಈ ವಿಶೇಷ ರೈಲಿನ ದರವು 1.3 ರಷ್ಟು ಇರಲಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ರೈಲಿನಲ್ಲಿ ಆಹಾರ ಗುಣಮಟ್ಟ, ಅಧಿಕೃತ ವೆಂಡರ್ ಮಾಹಿತಿ ತಿಳಿಯಲು QR ಕೋಡ್ ವ್ಯವಸ್ಥೆ, ಏನಿದು?











Click it and Unblock the Notifications