ವಿಜಯಪುರದಲ್ಲಿ ದೇಶದ 2ನೇ ಅತಿ ದೊಡ್ಡ 'ಪವನ' ವಿದ್ಯುತ್ ಘಟಕ
ಬೆಂಗಳೂರು, ಮಾರ್ಚ್ 13: ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ಹೂಡಿಕೆಗೆ ಕಂಪನಿಗಳು ಆಸಕ್ತಿ ವಹಿಸಿವೆ. ಇದರಿಂದ ಜಿಲ್ಲೆಯಲ್ಲಿ ಭಾರತದ ದೇಶದ ಎರಡನೇ ಅತೀ ದೊಡ್ಡ ಪವನ ವಿದ್ಯುತ್ ಘಟಕ ಸ್ಥಾಪನೆ ಆಗಲಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ತವರು ಜಿಲ್ಲೆ ವಿಜಯಪುರದಲ್ಲಿ ಕೈಗಾರಿಕಾ ಸಂಸ್ಕೃತಿ ರೂಢಿಸಲು ಮಹತ್ವದ ಹೆಜ್ಜೆ ಇಟ್ಟಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು, ಮಂಗಳವಾರ ಬೆಂಗಳೂರಿನಲ್ಲಿ ಪವನ ವಿದ್ಯುತ್ ಮತ್ತು ಸೌರವಿದ್ಯುತ್ ಕ್ಷೇತ್ರಗಳ ದೈತ್ಯ ಕಂಪನಿಗಳ ಜತೆ ಹೂಡಿಕೆಯ ಮಾತುಕತೆ ನಡೆಸಿದರು.

ಈ ವೇಳೆ ಸುಜ್ಲಾನ್ ಮತ್ತು ರೆನೈಸಾನ್ಸ್ ಕಂಪನಿಗಳ ಉನ್ನತಾಧಿಕಾರಿಗಳು ಜಿಲ್ಲೆಯಲ್ಲಿ ಕ್ರಮವಾಗಿ ಸುಜ್ಲಾನ್ ನಿಂದ ₹30,000 ಕೋಟಿ, ರೆನೈಸಾನ್ಸ್ ನಿಂದ ₹6,000 ಕೋಟಿ ಹೂಡಿಕೆಗೆ ಆಸಕ್ತಿ ವ್ಯಕ್ತಪಡಿಸಿವೆ.
ಸಭೆ ಬಳಿಕೆ ಮಾತನಾಡಿದ ಸಚಿವ ಎಂಬಿ ಪಾಟೀಲ್ ಅವರು, ಅಧ್ಯಯನಗಳ ಪ್ರಕಾರ ಇಡೀ ದೇಶದಲ್ಲಿ ವಿಜಯಪುರ, ಆಂಧ್ರಪ್ರದೇಶದ ಅನಂತಪುರ ಮತ್ತು ರಾಜಾಸ್ಥಾನದ ಜೈಸಲ್ಮೇರ್ ಮಾತ್ರ ಪವನ ವಿದ್ಯುತ್ ಉತ್ಪಾದನೆಗೆ ಅತ್ಯಂತ ಪ್ರಶಸ್ತ ತಾಣಗಳೆಂದು ಗೊತ್ತಾಗಿದೆ.

3,000 MW ವಿದ್ಯುತ್ ಉತ್ಪಾದನಾ ಸಾಮರ್ಥ್ಯ
ಅನಂತಪುರ ಮತ್ತು ಜೈಸಲ್ಮೇರ್ ಗಳಲ್ಲಿ ಸುಜ್ಲಾನ್ ಕಂಪನಿಯು ಈಗಾಗಲೇ ಕ್ರಮವಾಗಿ 2,000 ಮತ್ತು 3,000 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯದ ಪವನ ವಿದ್ಯುತ್ ಘಟಕಗಳನ್ನು ಹೊಂದಿದೆ.
ವಿಜಯಪುರದಲ್ಲಿ ಕಂಪನಿಯು 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು ಪ್ರಾರಂಭಿಸಲಿದ್ದು, ಇದು ದೇಶದಲ್ಲೇ 2ನೇ ಅತೀ ದೊಡ್ಡ ಪವನ ವಿದ್ಯುತ್ ಘಟಕವಾಗಿರಲಿದೆ ಎಂದು ತಿಳಿಸಿದರು.
ಸುಜ್ಲಾನ್ ಕಂಪನಿಯು ಪವನ ವಿದ್ಯುತ್ ಕ್ಷೇತ್ರಕ್ಕೆ ಅಗತ್ಯವಿರುವ 160 ಮೀಟರ್ ಎತ್ತರದ ಕಂಬಗಳು ಮತ್ತು 70 ಮೀಟರ್ ಉದ್ದದ ಬೃಹತ್ ಬ್ಲೇಡುಗಳ ಉತ್ಪಾದನೆಗೆ ಹೆಸರಾಗಿದೆ. ವಿಜಯಪುರದಲ್ಲಿ ಹಂತಹಂತವಾಗಿ 30 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದೆ ಬಂದಿದೆ.
ಜಿಲ್ಲೆಯ ಮೊದಲ ಬೃಹತ್ ಹೂಡಿಕೆ
ಮೊದಲ ಹಂತದಲ್ಲಿ ಕಂಪನಿಯು ಬ್ಲೇಡುಗಳ ತಯಾರಿಕಾ ಘಟಕ ಆರಂಭಿಸಲು ತೀರ್ಮಾನಿಸಿದೆ. 100 ಎಕರೆ ಜಮೀನನ್ನು ಕೇಳಿದೆ. ಇದು ವಿಜಯಪುರ ಜಿಲ್ಲೆಗೆ ಹರಿದು ಬರಲಿರುವ ಬೃಹತ್ ಹೂಡಿಕೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ಸುಜ್ಲಾನ್ ಕಂಪನಿಯು ಇಲ್ಲಿ ತಯಾರಿಸಲಿರುವ ಕಂಬ ಮತ್ತು ಬ್ಲೇಡುಗಳನ್ನು ಸ್ಥಳೀಯವಾಗಿಯೇ ಬಳಸಲಿದೆ. ಕಂಪನಿಗೆ ಅಗತ್ಯವಿರುವ 100 ಎಕರೆ ಜಮೀನನ್ನು ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೊಡಲು ಏನೂ ಸಮಸ್ಯೆ ಇಲ್ಲ. ಅಕಸ್ಮಾತ್ ಕಂಪನಿಯು ಜಿಲ್ಲೆಯ ಬೇರೆಡೆಗಳಲ್ಲಿ ತನಗೆ ಅಗತ್ಯವಿರುವ ಸೂಕ್ತ ಭೂಮಿ ಲಭ್ಯವಿದೆ ಎಂದು ಭಾವಿಸಿದರೆ, ಅಷ್ಟು ಪ್ರಮಾಣದ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಒದಗಿಸಲಾಗುವುದು. ಶೀಘ್ರವೇ ಅಂತಿಮ ಮಾತುಕತೆ ನಡೆದಿ, ಒಪ್ಪಂದಕ್ಕೆ ಸಹಿ ಹಾಕಲಾಗುವುದು ಅವರು ಮಾಹಿತಿ ನೀಡಿದರು.
ರೆನೈಸಾನ್ಸ್ ನಿಂದ ಭಾರಿ ಹೂಡಿಕೆ
ಸೌರ ಫಲಕಗಳ (ಸೋಲಾರ್ ಪ್ಯಾನೆಲ್ಸ್) ತಯಾರಿಕೆಗೆ ಬೇಕಾಗುವ ಬಿಡಿ ಭಾಗಗಳ ಉತ್ಪಾದನೆಗೆ ಹೆಸರಾಗಿರುವ ರೆನೈಸಾನ್ಸ್ ಸೋಲಾರ್ ಮತ್ತು ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿ ಕೂಡ ವಿಜಯಪುರದಲ್ಲಿ ತನ್ನ ಘಟಕ ಆರಂಭಿಸಲು 6,000 ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಹೇಳಿದರು.
ಈ ಕಂಪನಿ ಕೂಡ ತನಗೆ 100 ಎಕರೆ ಜಮೀನು, 80 ಮೆಗಾವ್ಯಾಟ್ ವಿದ್ಯುತ್ ಮತ್ತು ಪ್ರತಿನಿತ್ಯ 10 ಎಂಎಲ್‌ಡಿ ನೀರಿನ ಅಗತ್ಯವಿದೆ ಎಂದು ತಿಳಿಸಿದೆ. ಜಮೀನು ಮತ್ತು ವಿದ್ಯುತ್ತಿಗೆ ಜಿಲ್ಲೆಯಲ್ಲಿ ಸಮಸ್ಯೆಯೇನೂ ಇಲ್ಲ. ಆಲಮಟ್ಟಿ ಅಣೆಕಟ್ಟೆಯಿಂದ ಕಂಪನಿಗೆ ಅಗತ್ಯವಿರುವಷ್ಟು ನೀರನ್ನೂ ಕೊಡಬಹುದು.
2025 ವರ್ಷಾಂತ್ಯಕ್ಕೆ ವಾಣಿಜ್ಯ ಚಟುವಟಿಕೆ
ಕಂಪನಿಯು ಆರಂಭದಲ್ಲಿ 2,500 ಕೋಟಿ ರೂ. ಹಣ ಹೂಡಲಿದ್ದು, 5,000 ಮೆಗಾವ್ಯಾಟ್ ಸಾಮರ್ಥ್ಯದ ಘಟಕವನ್ನು (ಕ್ರಿಸ್ಟಲ್ ಗ್ರೋತ್ & ವೇಫರಿಂಗ್ ಯೂನಿಟ್) ಆರಂಭಿಸಲಿದೆ. 2025ರ ಕೊನೆಯ ಹೊತ್ತಿಗೆ ತನ್ನ ವಾಣಿಜ್ಯ ಚಟುವಟಿಕೆ ಆರಂಭಿಸಲು ಉದ್ದೇಶಿಸಲಿದೆ. ಇದರಿಂದ 1,000 ಉದ್ಯೋಗ ಸೃಷ್ಟಿಯಾಗಲಿವೆ ಎಂದು ವಿವರಿಸಿದರು.
ರೆನೈಸಾನ್ಸ್ ಕಂಪನಿಯು 2030ರ ಹೊತ್ತಿಗೆ ತನ್ನ ಘಟಕವನ್ನು 20 ಸಾವಿರ ಮೆಗಾವ್ಯಾಟ್ ಮಟ್ಟಕ್ಕೆ ಕೊಂಡೊಯ್ಯುವ ನೀಲನಕಾಶೆಯನ್ನು ಹೊಂದಿದೆ. ಆಗ 3,000ಕ್ಕೂ ಹೆಚ್ಚು ಜನರಿಗೆ ಇಲ್ಲಿ ಉದ್ಯೋಗ ಸಿಗಲಿದೆ. ಕಂಪನಿಯು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಕೂಡ ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಸಿದ್ದು, ಕೊನೆಗೆ ವಿಜಯಪುರ ಅಂತಿಮವಾಗಿದೆ ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications