ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ

ಬೆಂಗಳೂರು, ಜುಲೈ 05 : ಬೆಂಗಳೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 8345ಕ್ಕೆ ಏರಿಕೆಯಾಗಿದೆ. ಶನಿವಾರ ಒಂದೇ ದಿನ 1172 ಪ್ರಕರಣಗಳು ದಾಖಲಾಗಿವೆ. ಸೋಂಕಿತರ ಆರೈಕೆಗಾಗಿ ದೇಶದಲ್ಲಿಯೇ ದೊಡ್ಡ ಕೇಂದ್ರವನ್ನು ಸಿದ್ಧಪಡಿಸಲಾಗಿದೆ.

ಬೆಂಗಳೂರು-ತುಮಕೂರು ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಸರ್ಕಾರ ಜಂಟಿಯಾಗಿ ಬೆಂಗಳೂರಿನಲ್ಲಿ 10,100 ಹಾಸಿಗೆಗಳ ಬೃಹತ್ ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಾಣ ಮಾಡಿವೆ. ರೋಗಿಗಳು ಚಿಕಿತ್ಸೆ ಪಡೆಯಲು ಇದು ಸಿದ್ಧವಾಗಿದೆ.

ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಸಜ್ಜಾಗಿದೆ. ಈ ಕೇಂದ್ರವು ಭಾರತದಲ್ಲೇ ಬೃಹತ್ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವಾಗಿದೆ. ದೆಹಲಿಯಲ್ಲಿ 10 ಸಾವಿರ ಹಾಸಿಗೆಯ ಕೇಂದ್ರ ನಿರ್ಮಾಣ ಮಾಡಲಾಗಿದೆ.

ಬಿಬಿಎಂಪಿ ಆಯುಕ್ತ ಬಿ. ಎಚ್. ಅನಿಲ್ ಕುಮಾರ್, ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್, ಆರೋಗ್ಯ ಇಲಾಖೆ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಮುಂತಾದವರು ಭಾನುವಾರ ಈ ಕೇಂದ್ರದಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು.

10,100 ಹಾಸಿಗೆಗಳ ವ್ಯವಸ್ಥೆ

10,100 ಹಾಸಿಗೆಗಳ ವ್ಯವಸ್ಥೆ

10,100 ಹಾಸಿಗೆಯ ವ್ಯವಸ್ಥೆ ಹೊಂದಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಲಕ್ಷಣ ರಹಿತ ರೋಗಿಗಳ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಕ್ಕಳು ಮತ್ತು ವಯಸ್ಕರ ಮನರಂಜನೆಗಾಗಿ ಎಲ್ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಪ್ರತ್ಯೇಕ ಹಾಸಿಗೆಗಳ ವಿಭಾಗ ಮಾಡಲಾಗಿದೆ.

150 ವೈದ್ಯರಿಂದ ಕೆಲಸ

150 ವೈದ್ಯರಿಂದ ಕೆಲಸ

ಬೆಂಗಳೂರಿನಲ್ಲಿರುವ ಈ ಬೃಹತ್ ಕೋವಿಡ್ ಆರೈಕೆ ಕೇಂದ್ರದಲ್ಲಿ 150 ನುರಿತ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಸೂಕ್ತ ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಹಾಸಿಗೆಯ ಕೊರತೆ

ಹಾಸಿಗೆಯ ಕೊರತೆ

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್ - 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಈ ವಾರ ಪ್ರತಿದಿನ 500ಕ್ಕೂ ಅಧಿಕ ಪ್ರಕರಣಗಳೂ ದಾಖಲಾಗುತ್ತಿವೆ. ಕೋವಿಡ್ ಸೋಂಕಿತರ ಆರೈಕೆಗೆ ಹಾಸಿಗೆಯ ಕೊರತೆ ಎದುರಾಗಬಾರದು ಎಂದು ಈ ಕೇಂದ್ರ ನಿರ್ಮಾಣ ಮಾಡಲಾಗಿದೆ.

ದೆಹಲಿಯಲ್ಲಿ ಇದೆ

ದೆಹಲಿಯಲ್ಲಿ ಇದೆ

ದೆಹಲಿ ಸರ್ಕಾರ ದಕ್ಷಿಣ ದೆಹಲಿಯ ರಾಧಾ ಸೋಮಿ ಸತ್ಸಂಗ್ ಬಿಯಾಸ್ ಕ್ಯಾಂಪಸ್‌ನಲ್ಲಿ 10 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆ ಮಾಡಿದೆ. ಬೆಂಗಳೂರಿನಲ್ಲಿ 10,100 ಹಾಸಿಗೆಯ ಕೇಂದ್ರ ಆರಂಭವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+