ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ-ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 9: ಬೆಳಗಾವಿ ಹಾಗೂ ಬೆಂಗಳೂರು ನಡುವೆ ವಿಮಾನ ಸೇವೆ ಆರಂಭಗೊಂಡಿದೆ.

ಬಹುದಿನಗಳಿಂದ ನಿರೀಕ್ಷೆಯಲ್ಲಿದ್ದ ಕನಸು ಕೊನೆಗೂ ಸಾಕಾರಗೊಂಡಿದೆ. ಇಂಡಿಗೋ ವಿಮಾನಯಾನ ಸಂಸ್ಥೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಆರಂಭಿಸಿದ್ದು, ಕೇಂದ್ರೆ ರೈಲ್ವೆ ಖಾತೆ ಸಚಿವ ಸುರೇಶ ಅಂಗಡಿ ವಿಮಾನಯಾನಕ್ಕೆ ಚಾಲನೆ ನೀಡಿದ್ದಾರೆ.

'ವಿಮಾನ ವಿಳಂಬ' ಪ್ರಕಟಣೆ ಕೇಳಿ ಪ್ರಯಾಣಿಕನೇ ವಿಮಾನ ಚಲಾಯಿಸಿದ ವಿಚಿತ್ರ ಕತೆ!'ವಿಮಾನ ವಿಳಂಬ' ಪ್ರಕಟಣೆ ಕೇಳಿ ಪ್ರಯಾಣಿಕನೇ ವಿಮಾನ ಚಲಾಯಿಸಿದ ವಿಚಿತ್ರ ಕತೆ!

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಸುರೇಶ ಅಂಗಡಿ, ಮುಂದಿನ ದಿನಗಳಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಭಾಗಗಳಿಗೆ ವಿಮಾನ ಸೇವೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

Indigo Started Bengaluru-Belagavi Flights From September 8

ಈ ಭಾಗದ ಜನರ ಬಹುದಿನಗಳ ಅಪೇಕ್ಷೆಯಂತೆ ಇಂಡಿಗೋ ವಿಮಾನಯಾನ ಸಂಸ್ಥೆ ತನ್ನ ಸೇವೆಯನ್ನು ಪ್ರಾರಂಭಿಸಿದೆ. ಇಂಡಿಗೊ ವಿಮಾನ ಬೆಂಗಳೂರು-ಬೆಳಗಾವಿ ಮಾರ್ಗದಲ್ಲಿ ಸಂಚರಿಸಲಿದ್ದು, ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಡಾ. ಪ್ರಭಾಕರ ಕೊರೆ, ಶಾಸಕಿ ಲಕ್ಷ್ಮೀ ಹೆಬ್ಳಾಕರ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

English summary
Low-cost carrier IndiGo Started Daily Flights from Bengaluru to Belagavi From September 8.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X