ಇಂದಿರಾ ಕ್ಯಾಂಟೀನ್‌ನಲ್ಲಿ ಅನ್ನ, ಸಾಂಬಾರ್ ಸವಿದ ರಾಹುಲ್
ಬೆಂಗಳೂರು, ಅ.16 : ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು.
ಬುಧವಾರ ಜಯನಗರದ ಕನಕನಪಾಳ್ಯದಲ್ಲಿ ರಾಹುಲ್ ಗಾಂಧಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ರಾಹುಲ್ ಗಾಂಧಿ, 'ಕಡುಬಡವರಿಗೆ ಇಂದಿರಾ ಕ್ಯಾಂಟೀನ್ ನೆರವಾಗಲಿದೆ. ಇದು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ' ಎಂದು ಶ್ಲಾಘಿಸಿದರು.
ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಬಜೆಟ್‌ನಲ್ಲಿ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸಲು ಇಂದಿರಾ ಕ್ಯಾಂಟೀನ್ ಯೋಜನೆ ಘೋಷಣೆ ಮಾಡಲಾಗಿತ್ತು. ಬೆಂಗಳೂರು ನಗರದ ಎಲ್ಲಾ ವಾರ್ಡ್ ಗಳಲ್ಲಿ ಕ್ಯಾಂಟೀನ್ ಆರಂಭವಾಗಲಿದೆ' ಎಂದರು.
'ಸ್ಥಳವಕಾಶದ ಸಮಸ್ಯೆಯಿಂದಾಗಿ ಸಮಸ್ಯೆಯಿಂದಾಗಿ 97 ಕ್ಯಾಂಟೀನ್ ನಿರ್ಮಾಣ ವಿಳಂಬವಾಗಲಿದೆ. ಇಂದು 101 ಇಂದಿರಾ ಕ್ಯಾಂಟೀನ್ ಉದ್ಘಾಟನೆಗೊಳ್ಳುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು' ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ ಬಳಿಕ ರಾಹುಲ್ ಗಾಂಧಿ ಅನ್ನ ಸಾಂಬಾರ್, ವಾಂಗೀಬಾತ್ ಸವಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಅನ್ನ, ಸಾಂಬಾರ್ ಸವಿದರು.











Click it and Unblock the Notifications