ಇಂದಿರಾ ಕ್ಯಾಂಟೀನ್ ಇನ್ನು ಮುಂದೆ ಕೆಂಪೇಗೌಡ ಕ್ಯಾಂಟಿನ್?

Recommended Video

      ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲು ಚಿಂತನೆ ನಡೆಸಿದ ಬಿಬಿಎಂಪಿ | Oneindia Kannada

      ಬೆಂಗಳೂರು, ನವೆಂಬರ್ 14 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ನಗರದಲ್ಲಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲು ಚಿಂತನೆ ನಡೆದಿದ್ದು, 'ಕೆಂಪೇಗೌಡ ಕ್ಯಾಂಟೀನ್' ಎಂದು ನಾಮಕರಣ ಮಾಡಲಾಗುತ್ತದೆ.

      ಬಿಬಿಎಂಪಿ ಉಪ ಮೇಯರ್ ಸಿ. ಆರ್. ರಾಮ್ ಮೋಹನ್ ರಾಜು ಈ ಕುರಿತು ಮಾಹಿತಿ ನೀಡಿದ್ದಾರೆ. "ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲು ಚಿಂತನೆ ನಡೆದಿದ್ದು, ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ" ಎಂದು ಹೇಳಿದ್ದಾರೆ.

      ಇಂದಿರಾ ಕ್ಯಾಂಟೀನ್ಗಳ ಹೆಸರನ್ನು ಕೆಂಪೇಗೌಡ ಕ್ಯಾಂಟೀನ್ ಎಂದು ಬದಲಾವಣೆ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ಅಕ್ಟೋಬರ್‌ನಲ್ಲಿ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಪಾಲಿಕೆಯಲ್ಲಿ ಅಧಿಕಾರ ಹಿಡಿದಿದೆ.

      Indira Canteen Name May Changed

      ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದ ಜನಪ್ರಿಯ ಯೋಜನೆ ಇಂದಿರಾ ಕ್ಯಾಂಟೀನ್. ಕಡಿಮೆ ದರದಲ್ಲಿ ಆಹಾರ ಒದಗಿಸುವ ಈ ಕ್ಯಾಂಟೀನ್‌ ಜನರ ಮೆಚ್ಚುಗೆಯನ್ನುಗಳಿಸಿದೆ. ಈಗ ಕ್ಯಾಂಟೀನ್ ಹೆಸರಿನಲ್ಲಿ ರಾಜಕೀಯ ಆರಂಭವಾಗಿದೆ.

      ಬೆಂಗಳೂರು ನಗರದಲ್ಲಿ 173 ಇಂದಿರಾ ಕ್ಯಾಂಟೀನ್, 18 ಮೊಬೈಲ್ ಕ್ಯಾಂಟೀನ್‌ಗಳಿವೆ. ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಸುದ್ದಿ ಹಲವು ದಿನಗಳಿಂದ ಹಬ್ಬಿತ್ತು. ಈಗ ಅಧಿಕೃತವಾಗಿ ಉಪ ಮೇಯರ್ ಈ ಕುರಿತು ಹೇಳಿಕೆ ನೀಡಿದ್ದಾರೆ.

      ಹಿಂದೆ ಕುರಿತು ಸುದ್ದಿಗಳು ಹಬ್ಬಿದ್ದಾಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, "ಇಂದಿರಾ ಕ್ಯಾಂಟೀನ್ ಮುಚ್ಚುವುದಿಲ್ಲ. ಹೆಸರನ್ನು ಸಹ ಬದಲಾವಣೆ ಮಾಡುವುದಿಲ್ಲ" ಎಂದು ಸ್ಪಷ್ಟನೆಯನ್ನು ನೀಡಿದ್ದರು.

      ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಕರ್ನಾಟಕ ಸರ್ಕಾರ ಅನುದಾನ ನೀಡುತ್ತಿಲ್ಲ ಎಂಬ ಆರೋಪಗಳು ಇವೆ. ಯೋಜನೆ ಆರಂಭಿಸಿದಾಗ ಪ್ರತಿವರ್ಷ 100 ಕೋಟಿ ಅನುದಾನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಕ್ಯಾಂಟೀನ್ ನಿರ್ವಹಣೆ ಮಾಡುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+