ಆಗಸ್ಟ್ 15ರಿಂದ 125 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭ : ಸಿದ್ದರಾಮಯ್ಯ
ಬೆಂಗಳೂರು, ಜುಲೈ 25: "ಆಗಸ್ಟ್ 15ರಂದು ಬೆಂಗಳೂರಿನ 125 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭವಾಗಲಿದೆ. ಉಳಿದ ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಅಕ್ಟೋಬರ್ 2ರಂದು ಆರಂಭಿಸಲಾಗುವುದು," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ಇಂದು ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲಿಸಿದರು. ಮುಖ್ಯಮಂತ್ರಿಗಳ ಜತೆ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ಉಪಸ್ಥಿತರಿದ್ದರು.

'ಇಂದಿರಾ ಕ್ಯಾಂಟೀನ್' ಕಡಿಮೆ ದರದಲ್ಲಿ ಊಟ ಹಾಗೂ ಉಪಹಾರವನ್ನು ಒದಗಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.













Click it and Unblock the Notifications