ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾಗಿ ಮುದ್ದೆ ಭಾಗ್ಯ?

ಬೆಂಗಳೂರು, ನವೆಂಬರ್ 24 : ಇಂದಿರಾ ಕ್ಯಾಂಟೀನ್‌ಗಳಲ್ಲಿ ಶೀಘ್ರವೇ ರಾಗಿ ಮುದ್ದೆ ದೊರೆಯಲಿದೆ. ಜೆಡಿಎಸ್‌ ನಾಯಕ ಟಿ.ಎ.ಶರವಣ ಆರಂಭಿಸಿರುವ ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಈಗಾಗಲೇ ರಾಗಿ ಮುದ್ದೆ ನೀಡಲಾಗುತ್ತಿದೆ.

ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾಗಿ ಮುದ್ದೆ ನೀಡುವಂತೆ ಬಿಬಿಎಂಪಿ ಜೊತೆ ಮಾತುಕತೆ ನಡೆಸಲಾಗಿದೆ. ಪಾಲಿಕೆ ಈ ಕುರಿತು ಚಿಂತನೆ ನಡೆಸುತ್ತಿದೆ' ಎಂದು ಹೇಳಿದ್ದಾರೆ.

Indira Canteen to serve Ragi mudde soon

ಬೆಂಗಳೂರು ನಗರದಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ವಿಯಾಗಿದೆ. 5 ರೂ.ಗೆ ಉಪಹಾರ, 10 ರೂ.ಗೆ ಊಟವನ್ನು ನೀಡಲಾಗುತ್ತಿದೆ. ಜನವರಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ 247 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ.

ದಿನಕ್ಕೊಂದು ರೈಸ್ ಬಾತ್, ಅನ್ನ ಸಾಂಬಾರ್ ಗಳನ್ನು ಇಂದಿರಾ ಕ್ಯಾಂಟೀನ್‌ಗಳಲ್ಲಿ ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ 5 ರೂ.ಗೆ ಟೀ, ಕಾಫಿ ನೀಡುವ ಪ್ರಸ್ತಾವನೆಯೂ ಸಿದ್ಧವಾಗಿದೆ. ಈಗ ರಾಗಿ ಮುದ್ದೆಯನ್ನು ವಿತರಣೆ ಮಾಡುವ ಪ್ರಸ್ತಾಪ ಮಾಡಲಾಗಿದೆ.

ಅಪ್ಪಾಜಿ ಕ್ಯಾಂಟೀನ್ : ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಟಿ.ಎ.ಶರವಣ ಅವರು ಬೆಂಗಳೂರಿನ ಹನುಮಂತ ನಗರದಲ್ಲಿ ಆರಂಭಿಸಿರುವ 'ನಮ್ಮ ಅಪ್ಪಾಜಿ ಕ್ಯಾಂಟೀನ್‌'ನಲ್ಲಿ ರಾಗಿ ಮುದ್ದೆ ವಿತರಣೆ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+