ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ಪೋಸಿಸ್‌ ಫೌಂಡೇಶನ್‌ನಿಂದ ಜಿಗಣಿ ಗ್ರಾಮಸ್ಥರಿಗೆ ಅಗತ್ಯ ವಸ್ತು ವಿತರಣೆ

|
Google Oneindia Kannada News

ಬೆಂಗಳೂರು ಏಪ್ರಿಲ್‌ 24: ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಇಂದು ಬೆಂಗಳೂರು ಹೊರವಲಯದ ಜಿಗಣಿ ಗ್ರಾಮದ ಸಾವಿರಾರು ಕುಟುಂಬಗಳಿಗೆ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು.

ಕರೋನಾ ಕರ್ಪ್ಯೂನಿಂದ ತೊಂದರೆಗೀಡಾಗಿರುವ ಕಾರ್ಮಿಕರು, ನಿರ್ಗತಿಕರು ಹಾಗೂ ಕೊಳೆಗೇರಿ ನಿವಾಸಿಗಳು ಸೇರಿದಂತೆ ಸಂತ್ರಸ್ತರಿಗೆ ಇಂದು ಜಿಗಣೀ ಪೋಲೀಸ್‌ ಠಾಣೆಯ ಬಳಿ ಜೀವನಾವಶ್ಯಕ ವಸ್ತುಗಳನ್ನು ವಿತರಿಸಲಾಯಿತು. ಜಿಗಣಿ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ವಿಶ್ವನಾಥ್‌ ಹಾಗೂ ಇನ್ಪೋಸಿಸ್‌ ಫೌಂಡೇಶನ್‌ ನ ಮ್ಯಾನೇಜರ್‌ ಚಂದ್ರು ಹಾಗೂ ಅವರ ತಂಡ ಸಾವಿರಕ್ಕೂ ಹೆಚ್ಚು ಜನರಿಗೆ ಅವಶ್ಯಕ ವಸ್ತುಗಳನ್ನು ಒಳಗೊಂಡಿರುವಂತಹ ಬಾಕ್ಸನ್ನು ವಿತರಿಸಿದರು. ಈ ಕಾರ್ಯದಲ್ಲಿ ಜಿಗಣಿ ಪೋಲೀಸ್‌ ಠಾಣೆಯ ಸಿಬ್ಬಂದಿಗಳು ಕೈಜೋಡಿಸಿದ್ದು ವಿಶೇಷವಾಗಿತ್ತು.

 ಇನ್ಫೋಸಿಸ್ ಫೌಂಡೇಷನ್‍ನಿಂದ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯ ಇನ್ಫೋಸಿಸ್ ಫೌಂಡೇಷನ್‍ನಿಂದ 100 ಹಾಸಿಗೆಗಳ ಕ್ವಾರಂಟೈನ್ ಸೌಲಭ್ಯ

Infosys Foundation distributes essential items at Jigani village

ಅಲ್ಲದೆ, ಮನೆ ಮನೆಗೂ ತೆರಳಿ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ ಬಾಕ್ಸ್‌ಗಳನ್ನೂ ವಿತರಿಸಲಾಯಿತು. ಸಾವಿರಕ್ಕೂ ಹೆಚ್ಚು ಜನರು ಈ ವಸ್ತುಗಳನ್ನು ಪಡೆದುಕೊಂಡರು. ಕರೋನಾ ಲಾಕ್‌ ಡೌನ್‌ ಪ್ರಾರಂಭದಿಂದಲೂ ಇನ್ಪೋಸಿಸ್‌ ಫೌಂಡೇಶನ್‌ ರಾಜ್ಯಾದ್ಯಂತ ಅಗತ್ಯ ಸಾಮಗ್ರಿಗಳನ್ನು ವಿತರಿಸುತ್ತಿದೆ. ಕಳೆದ ವಾರ ಸಿನೆಮಾ ರಂಗದ ಕಾರ್ಮಿಕರುಗಳಿಗೆ ಕಿಟ್‌ಗಳನ್ನು ವಿತರಿಸಲಾಗಿತ್ತು.

ಕೋವಿಡ್ 19: ಸರ್ಕಾರಕ್ಕೆ 100 ಕೋಟಿ ನೀಡಿದ ಇನ್ಫೋಸಿಸ್ ಫೌಂಡೇಷನ್‌ಕೋವಿಡ್ 19: ಸರ್ಕಾರಕ್ಕೆ 100 ಕೋಟಿ ನೀಡಿದ ಇನ್ಫೋಸಿಸ್ ಫೌಂಡೇಷನ್‌

Infosys Foundation distributes essential items at Jigani village

ಬೆಂಗಳೂರಿನಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದೇ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆಗೆ ನೆರವನ್ನು ಇನ್ಫೋಸಿಸ್ ಫೌಂಡೇಷನ್ ಘೋಷಣೆ ಮಾಡಿತ್ತು. ಇದಲ್ಲದೇ, ದೇಶದ ಹಲವಾರು ಮಿಲಿಟರಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಮತ್ತು ಪಿಪಿಇ ಸಲಕರಣೆಗಳನ್ನು ಒದಗಿಸುವುದಾಗಿ ಪ್ರಕಟಿಸಿದೆ. ಇದಲ್ಲದೇ, ಫೌಂಡೇಷನ್ ಅಗತ್ಯವಿರುವ ಸಾವಿರಾರು ಜನರಿಗೆ ಆಹಾರ ಮತ್ತು ನೈರ್ಮಲ್ಯ ಕಿಟ್‌ಗಳನ್ನು ಪೂರೈಕೆ ಮಾಡಲು ಹಲವಾರು ಎನ್‌ಜಿಒಗಳಿಗೆ ನೆರವು ನೀಡುತ್ತಿದೆ.

English summary
Infosys Foundation today(April 24) distributed essential items at Jigani village, Anekal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X