• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೆಟ್ರೋ ನಿಗಮದೊಂದಿಗೆ ಒಡಂಬಡಿಕೆ ಮಾಡಿಕೊಂಡ ಇನ್ಫೋಸಿಸ್

By Nayana
|

ಬೆಂಗಳೂರು, ಜು.19: ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ನಿರ್ಮಿಸಲು ಇನ್ಫೋಸಿಸ್ಮುಂದಾಗಿದ್ದು ಅದಕ್ಕೆ 200 ಕೋಟಿ ರೂ. ದೇಣಿಗೆ ನೀಡಲಿದೆ. ಈ ಕುರಿತು ಬೆಂಗಳೂರು ಮೆಟ್ರೋ ನಿಗಮದೊಂದಿಗೆ ಗುರುವಾರ ಒಡಂಬಡಿಕೆ ಮಾಡಿಕೊಂಡಿದೆ.

ಈ ಕುರಿತು ಕುಮಾರಸ್ವಾಮಿ ಮಾತನಾಡಿ, ನಮ್ಮ ಮೆಟ್ರೋ ಬೆಂಗಳೂರಿಗೆ ಅತ್ಯಾವಶ್ಯಕವಾಗಿದೆ. ಮೊದಲ ಹಂತದಲ್ಲಿ 47 ಕಿ.ಮೀ ಕಾರ್ಯ ಪೂರೈಸಿದೆ. 2 ನೇ ಹಂತದ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಈ ಕಾರ್ಯದಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ಕೈಜೋಡಿಸಿರುವುದು ಶ್ಲಾಘನೀಯ ಎಂದರು.

ಮೆಟ್ರೋ ರೈಲು ಇನ್ನುಮುಂದೆ ಪ್ರತಿ 8 ನಿಮಿಷಕ್ಕೊಂದು ಸಂಚರಿಸಲಿದೆ

ಕೋನಪ್ಪ ಅಗ್ರಹಾರದ ಮೆಟ್ರೋ ನಿಲ್ದಾಣವನ್ನು ಅತ್ಯಾಧುನಿಕವಾಗಿ ನಿರ್ಮಿಸಿ, ಮುಂದಿನ 30 ವರ್ಷಗಳ ಕಾಲ ಅದರ ನಿರ್ವಹಣೆಯನ್ನೂ ಮಾಡಲು ತೀರ್ಮಾನಿಸಿರುವುದು ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷೆ ಡಾ: ಸುಧಾ ಮೂರ್ತಿಯವರ ಬದ್ಧತೆಯನ್ನು ತೋರುತ್ತದೆಯಲ್ಲದೆ ಈ ಬಗ್ಗೆ ಅವರಿಗಿರುವ ಅಭಿಮಾನವನ್ನೂ ಎತ್ತಿಹಿಡಿದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ಫೋಸಿಸ್ ಹಂತಹಂತವಾಗಿ ಬೆಳೆದು ರಾಜ್ಯದಿಂದ ವಿಶ್ವಮಟ್ಟದಲ್ಲಿ ಸಾಧನೆ ಮಾಡಿರುವ ಸಂಸ್ಥೆ. ಸಂಸ್ಥೆಯ ಲಾಭದ ಒಂದು ಭಾಗವನ್ನು ರಾಜ್ಯದ ಕ್ಯಾನ್ಸರ್ ಸಂಸ್ಥೆ, ಶಿಕ್ಷಣ ಕ್ಷೇತ್ರ ಮತ್ತು ಹಲವಾರು ಸಾಮಾಜಿಕ ಕಾರ್ಯಕ್ರಮಗಳಿಗೆ ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಕೈಗೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಯಲ್ಲಿ ಅವರ ಪಾಲು ದೊಡ್ಡದು. ಸರ್ಕಾರ ಇನ್ಫೋಸಿಸ್ ಪ್ರತಿಷ್ಠಾನದ ಕೊಡುಗೆಯ ಸದ್ಬಳಕೆ ಮಾಡಿಕೊಳ್ಳುತ್ತದೆ ಎಂದು ಭರವಸೆ ನೀಡಿದರು.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಕೈಜೋಡಿಸುವುದು ಉಪಕಾರವಲ್ಲ ಬದಲಿಗೆ ನಮ್ಮ ತಾಯಿಗೆ ಮಾಡುವ ಕರ್ತವ್ಯ. ಬೆಂಗಳೂರಿನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಮೆಟ್ರೋ ಮಹತ್ವದ ಪಾತ್ರ ವಹಿಸಿದೆ ಎಂದರು.

ಜನರಿಗಾಗಿ ಮಾಡುವ ಕೆಲಸದಲ್ಲಿ ದೊರಕುವ ಆನಂದ ಮತ್ಯಾವುದರಲ್ಲಿಯೂ ದೊರಕುವುದಿಲ್ಲ. ವಿಶ್ವದ ಬಹುತೇಕ ನಗರಗಳಲ್ಲಿ ಸುತ್ತಾಡಿ ಬಂದರೂ ಜನನಿ ಜನ್ಮ ಭೂಮಿಶ್ಚ, ಸ್ವರ್ಗಾದಪಿ ಗರೀಯಸಿ ಎಂಬಂತೆ ತಾಯಿ ನಾಡು ಕರ್ನಾಟಕ ನಮಗೆ ಅತ್ಯಂತ ಪ್ರಿಯವಾದದು ಎಂದರು. ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾವು ಮಾಡುತ್ತಿರುವುದು ಅಳಿಲು ಸೇವೆ ಎಂದರು.

ಬೆಂಗಳೂರು ಏಷ್ಯಾ ಖಂಡದಲ್ಲಿ ಮಾತ್ರವಲ್ಲ, ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಓಡಾಡುವುದು ಒಂದು ಸವಾಲಾಗಿರುವ ಇಂದಿನ ದಿನಗಳಲ್ಲಿ ನಮ್ಮ ಮೆಟ್ರೋ ವರದಾನವಾಗಿದೆ ಎಂದು ಜಿ ಪರಮೇಶ್ವರ್‌ ಹೇಳಿದರು. ಎಂದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Infosys Foundation on Thursday signed an MoU with the Bangalore Metro Rail Corporation Limited (BMRCL) to build a metro station at Electronic City and maintain it for a period of 30 years.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more