N.R. Narayana Murthy: ಚೀನಾದಂತೆ 9, 9, 6 = 72 ಕೆಲಸದ ಅವಧಿ ಇರಬೇಕು: ಇನ್ಫೋಸಿಸ್ ನಾರಾಯಣ ಮೂರ್ತಿ!
N.R. Narayana Murthy: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತೊಮ್ಮೆ ಕೆಲಸದ ಅವಧಿಯ ವಿಚಾರವಾಗಿ ಮಾತನಾಡಿದ್ದಾರೆ. ಕಳೆದ ಕೆಲವು ತಿಂಗಳುಗಳ ಹಿಂದೆ ಭಾರತೀಯರು ಸಹ ಉಳಿದ ದೇಶದ ಉದ್ಯೋಗಿಗಳಂತೆ 72 ಗಂಟೆ ಅವಧಿ ಕೆಲಸ ಮಾಡಬೇಕು ಎಂದು ಹೇಳುತ್ತಿದ್ದರು. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಹಾಗೂ ಸಾರ್ವಜನಿಕ ವಲಯದಿಂದಲೂ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಅವರು ಭಾರತ ಮತ್ತು ಚೀನಾದ ಕೆಲಸದ ಅವಧಿಯ ಬಗ್ಗೆ ಮಾತನಾಡಿದ್ದಾರೆ.
ನಾರಾಯಣ ಮೂರ್ತಿ ಅವರು ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸರಾಗಿದ್ದಾರೆ. ಈ ಬಾರಿ ಅವರು ಭಾರತ ಮತ್ತು ಚೀನಾದ ಕೆಲಸದ ಅವಧಿಯ ಬಗ್ಗೆ ಮಾತನಾಡಿದ್ದು. ಭಾರತಕ್ಕಿಂತಲೂ ಚೀನಾದ ಕೆಲಸದ ಅವಧಿ ಉತ್ತಮವಾಗಿದೆ ಎಂದಿದ್ದಾರೆ. ಭಾರತವು ವೇಗವಾಗಿ ಬೆಳೆಯಲು ಯಾವ ರೀತಿಯ ಕೆಲಸದ ನೀತಿ ಅವಶ್ಯವಿದೆ ಎನ್ನುವ ವಿಚಾರದ ಬಗ್ಗೆ ಮಾತನಾಡಿದ್ದಾರೆ. ರಿಪಬ್ಲಿಕ್ ವರ್ಲ್ಡ್ ಸಂದರ್ಶನದಲ್ಲಿ ಮಾತನಾಡಿರುವ ನಾರಾಯಣ ಮೂರ್ತಿ, ಅವರು ಮತ್ತು ಅವರ ತಂಡವು ಚೀನಾಕ್ಕೆ ಭೇಟಿ ನೀಡಿದಾಗ ಗಮನಿಸಿದ ಕೆಲಸದ ಅವಧಿಯ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ನಾರಾಯಣ ಮೂರ್ತಿ ಅವರ ಪ್ರಕಾರ ಚೀನಾದಲ್ಲಿ ಒಂದು ಮಾತಿದೆ 9, 9, 6. ಅದರ ಅರ್ಥ ನಿಮಗೆ ತಿಳಿದಿದೆಯೇ? ಬೆಳಿಗ್ಗೆ 9 ರಿಂದ ರಾತ್ರಿ 9, ವಾರದಲ್ಲಿ 6 ದಿನಗಳು. ಮತ್ತು ಅದು ವಾರಕ್ಕೆ 72 ಗಂಟೆಗಳು ಎನ್ನುವುದು ಈ ಮಾತಿನ ಅರ್ಥ. ಈ ದಿನಚರಿ ಅನೇಕ ನಗರಗಳಲ್ಲಿ ಸಾಮಾನ್ಯವಾಗಿದೆ ಮತ್ತು ಚೀನಾ ಇಷ್ಟು ವೇಗವಾಗಿ ಮುಂದುವರಿಯಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಇದೇ ಮಾದರಿ ಭಾರತಕ್ಕೂ ಅವಶ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ನಾರಾಯಣ ಮೂರ್ತಿ ಅವರ ಪ್ರಕಾರ, ಈ ರೀತಿಯ ದೀರ್ಘ ಸಮಯ ಕೆಲಸದಲ್ಲಿ ತೊಡಗಿಸಿಕೊಳ್ಳುವುದರ ಬಗ್ಗೆ ಮಾತ್ರವಲ್ಲ, ಶಿಸ್ತು ಮತ್ತು ದೇಶಾದ್ಯಂತ ಅನೇಕ ಜನರು ಹಂಚಿಕೊಂಡ ಸ್ಪಷ್ಟ ಗುರಿಯ ಬಗ್ಗೆಯೂ ಆಗಿದೆ ಎಂದಿದ್ದಾರೆ. ಈ ರೀತಿಯ ನಿರಂತರ ಹಾಗೂ ವಿಶೇಷ ಪ್ರಯತ್ನವು ವರ್ಷಗಳಲ್ಲಿ ಚೀನಾದ ಆರ್ಥಿಕ ಏರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದಿದ್ದಾರೆ. ಭಾರತವು ಬುದ್ಧಿವಂತ ಜನರು ಮತ್ತು ಅದ್ಭುತ ಐಡಿಯಾಗಳನ್ನು ಹೊಂದಿದೆ. ಆದರೆ, ಗಂಭೀರ ಕ್ರಮದೊಂದಿಗೆ ಆ ಆಲೋಚನೆಗಳನ್ನು ಬೆಂಬಲಿಸಬೇಕು. ಈ ಆಲೋಚನೆಗಳನ್ನು ಅನುಷ್ಠಾನ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ನಮ್ಮಲ್ಲಿ ಉತ್ತಮ ಆಲೋಚನೆಗಳಿದ್ದರೆ, ಪ್ರತಿಯೊಂದು ಅಂಶದಲ್ಲೂ ನಾವು ಅಸಾಧಾರಣ ಬದಲಾವಣೆಗೆ ಪ್ರಯತ್ನಿಸಬಹುದು. ನಾವು ಅದನ್ನು ಮಾಡಬಹುದು ಎಂದು ನಾನು ಭಾವಿಸುತ್ತೇನೆ ಸಮಾಜದ ಪ್ರತಿಯೊಂದು ಭಾಗದಿಂದ ವಿಭಿನ್ನ ಪ್ರಯತ್ನದ ಅಗತ್ಯತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಅವರ ಪ್ರಕಾರ ಕೆಲಸ ಸುಲಭವಲ್ಲ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ಸ್ವಂತ ಉನ್ನತ ಶಿಸ್ತಿನ ಮಾನದಂಡಗಳನ್ನು ಹೊಂದುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಸೋಷಿಯಲ್ ಮೀಡಿಯಾದಲ್ಲಿ ನಾರಾಯಣ ಮೂರ್ತಿ ಮತ್ತೆ ಟ್ರೋಲ್: ಇನ್ನು ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಕೆಲಸದ ಅವಧಿ ಹೆಚ್ಚಳ ಹಾಗೂ ಭಾರತ ಮತ್ತು ಚೀನಾದ ನಡುವಿನ ಕೆಲಸದ ಅವಧಿ ವಿಚಾರವು ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಜನ ಮತ್ತೆ ನಾರಾಯಣ ಮೂರ್ತಿ ಅವರು ವಾರಕ್ಕೆ 72 ಗಂಟೆ ಕೆಲಸ ಅವಧಿ ಎನ್ನುವ ವಿಚಾರದಿಂತ ಹೊರಬಂದಂತೆ ಇಲ್ಲ. ಜನ ಟ್ರಾಫಿಕ್ ಜಾಮ್ ಹಾಗೂ ಹದಗೆಟ್ಟ ರಸ್ತೆಗಳಲ್ಲಿ ಸಂಚರಿಸಿ ಹೈರಾಣಾಗುತ್ತಿದ್ದಾರೆ. ಪ್ರತಿಯೊಬ್ಬರಿಗೂ ವೈಯಕ್ತಿಕ ಬದುಕು ಎನ್ನುವುದು ಸಹ ಇರುತ್ತದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ನೆಟ್ಟಿಗರು ಟೀಕಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications