ಬೆಂಗಳೂರಲ್ಲಿ ರಸ್ತೆ ಅಪಘಾತ : ಇನ್ಫೋಸಿಸ್ ಟೆಕ್ಕಿ ಸಾವು
ಬೆಂಗಳೂರು, ಮಾರ್ಚ್ 23 : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇನ್ಫೋಸಿಸ್ ಟೆಕ್ಕಿ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಶರತ್ ಕುಮಾರ್ ರೆಡ್ಡಿ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಈ ಅಪಘಾತ ನಡೆದಿದೆ. ಎಂಎಚ್ 12 ಜಿವೈ 5576 ಬೈಕ್‌ನಲ್ಲಿ ಶರತ್ ಕುಮಾರ್ ಮನೆಗೆ ಮರಳುತ್ತಿದ್ದರು.
ಆಂಧ್ರಪ್ರದೇಶ ಶರತ್ ಕುಮಾರ್ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಫ್ಲೈ ಓವರ್ ಮೇಲೆ ಸಾಗುವಾಗ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದಿದೆ. ಸುಮಾರು 30 ಅಡಿ ಎತ್ತರದಿಂದ ಕೆಳಗೆ ಬಿದ್ದ ಶರತ್ ಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಶರತ್ ಕುಮಾರ್ ತಲೆಗೆ ಗಂಭೀರವಾದ ಗಾಯಗಳಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಆಂಧ್ರಪ್ರದೇಶ ಮೂಲದ ಶರತ್ ಕುಮಾರ್ ಶುಕ್ರವಾರ ಸಂಜೆ ಕೆಲಸ ಮುಗಿಸಿ ಮರಳುತ್ತಿದ್ದರು.
ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಬಂಧಿಕರಿಗೆ ಮತ್ತು ಪೋಷಕರಿಗೆ ಮಾಹಿತಿ ರವಾನಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.












Click it and Unblock the Notifications