• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರ್ನಾಟಕ ಪೊಲೀಸ್ ಗೆ ಇನ್ಫೋಸಿಸ್ ನಿಂದ ಸೈಬರ್ ಲ್ಯಾಬ್ ನಿರ್ಮಾಣ

|

ಬೆಂಗಳೂರು, ಅ.3: ಸೈಬರ್ ಲ್ಯಾಬ್, ತರಬೇತಿ ಸಂಸ್ಥೆ ನಿರ್ಮಾಣ ಸಂಬಂಧ ಇನ್‌ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಒಪ್ಪಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪರಮೇಶ್ವರ್, ಇನ್‌ಫೋಸಿಸ್ ಹಿಂದಿನಿಂದಲೂ ಪೊಲೀಸ್ ಇಲಾಖೆಗೆ ಕಟ್ಟಡ ನಿರ್ಮಿಸಿಕೊಡುವ ಮೂಲಕ ಬೆಂಬಲ ನೀಡುತ್ತಾ ಬಂದಿದೆ. ಈಗ ಸೈಬರ್ ಲ್ಯಾಬ್, ತರಬೇತಿ ಕೇಂದ್ರ ನಿರ್ಮಿಸಲು ಮುಂದೆ ಬಂದಿರುವುದು ಇತರೆ ಕಾರ್ಪೋರೇಟ್ ಕಂಪನಿಗಳಿಗೆ ಮಾದರಿಯಾಗಿದೆ ಎಂದರು.

ವಸಂತಪುರದ 'ಕಲ್ಯಾಣಿ' ಚೆಂದ ಮಾಡಿ, ಸರ್ಕಾರಕ್ಕೆ ಕೊಟ್ಟ ಇನ್ಫೋಸಿಸ್

ಸರ್ಕಾರ ಎಲ್ಲವನ್ನೂ ಮಾಡಲು ಸಾಧ್ಯವಾಗುವುದಿಲ್ಲ.‌ಅನೇಕ ಕಡೆಯಿಂದ ಸಹಾಯ ಹಸ್ತ ಬೇಕಿದೆ. ಪೊಲೀಸ್ ಇಲಾಖೆಗೆ ಹೆಚ್ಚು ಸಹಾಯ ಸಿಗುತ್ತಿಲ್ಲ.‌ ಆಯವ್ಯಯದಲ್ಲೂ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದೆ. ಪೊಲೀಸರಿ ರಾಜ್ಯದಲ್ಲಿ ಕಾನೂನು‌ ಸುವ್ಯವಸ್ಥೆ ಕಾಪಾಡಲು ಇನ್ನೂ ಪ್ರೋತ್ಸಾಹ ಸಿಗಬೇಕು.

ಹೀಗಾಗಿ ಪೊಲೀಸ್ ಗೃಹ ಯೋಜನೆಯಡಿ ಮನೆ ಕಟ್ಟುವ ಕೆಲಸ ಶುರು ಮಾಡಿ ಮೂರನೇ ಹಂತಕ್ಕೆ ತಲುಪಿದ್ದೇವೆ. ಎಫ್ ಐಆರ್ ದಾಖಲಾತಿ ಸೇರಿದಂತೆ ಪೊಲೀಸ್ ಇಲಾಖೆ ಸಂಪೂರ್ಣ ಆನ್‌ಲೈನ್ ತರುವ ಕೆಲಸ ಮಾಡಲಾಗುತ್ತಿದೆ. ಕರ್ನಾಟಕ ಪೊಲೀಸ್ ಇಡೀ‌ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಮುಂದೆ ನುಗ್ಗುತ್ತಿದೆ ಎಂದರು.

ಇನ್ಫೋಸಿಸ್ ಮೈಸೂರು ಕ್ಯಾಂಪಸ್‍ಗೆ ಅಮೆರಿಕದ ಗ್ರೀನ್ ಪ್ರಶಸ್ತಿ

ಇನ್‌ಫೋಸಿಸ್ ನಿಂದ ತರಬೇತಿ ಕೇಂದ್ರ ನಿರ್ಮಿಸಿ ಕೊಡಲಾಗುತ್ತಿದೆ.‌ ಇದಕ್ಕೆ ತಾಂತ್ರಿಕ ಪರಿಣಿತರ ಅಗತ್ಯವಿದ್ದು, ಪರಿಣಿತರು ಮುಂದೆ ಬರಬೇಕು. ಸೈಬರ್ ಸಂಬಂಧ ಹೆಚ್ಚುವ ಕ್ರೈ ತಡೆಯಲು ತಾಂತ್ರಿಕ ತರಬೇತಿ ಅತಿ ಅವಶ್ಯಕ. ಹೀಗಾಗಿ ಬೇರೆ ದೇಶದಿಂದಲೂ ಪರಿಣಿತರನ್ನು ಕರೆಸಿ ತರಬೇತಿ ಕೊಡಿಸಲಾಗುವುದು ಎಂದರು.

ಇನ್‌ಫೋಸಿಸ್ ನಿರ್ಮಿಸುವ ತರಬೇತಿ ಕೇಂದ್ರ 22 ಕೋಟಿ ರೂ ವೆಚ್ಚ ತಗುಲಲಿದ್ದು, ಕೆಲವೇ ತಿಂಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದರು. ಸೈಬರ್ ಲ್ಯಾಬ್ ನಿರ್ಮಿಸುವ ಸಂಬಂಧ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಇನ್‌ಫೋಸಿಸ್ ಹಾಗೂ ಸಿಐಡಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಯಿತು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
State government had signed a memorandum of understanding with Infosys foundation on Wednesday to build a cyber lab for Karnataka police. Deputy chief minister Dr.G.Parameshwara and foundation chairperson Dr.Sudha Murthy were signed for the same.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more