Bengaluru: 50 ವರ್ಷ ಹಳೆಯ ಕಟ್ಟಡದ ನಿವಾಸಿಗಳಿಗೆ ಬಿಬಿಎಂಪಿ ನೀಡಿದ ಹೊಸ ಭರವಸೆ ಇದು?
ಬೆಂಗಳೂರು, ಜುಲೈ 13: ಬೆಂಗಳೂರಿನಲ್ಲಿ ಸುಮಾರು 50 ವರ್ಷಗಳ ಹಿಂದೆ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ (ಸ್ಲಂ ಬೋರ್ಡ್) ವತಿಯಿಂದ ಬಿಬಿಎಂಪಿ ಜಾಗದಲ್ಲಿ ನಿರ್ಮಿಸಿದ್ದ MS ಕಟ್ಟಡ ಶಿಥಿಲಾವಸ್ಥೆಯಲ್ಲಿದೆ. ಅದರ ದುರಸ್ಥಿಗೆ ಸೂಚಿಸಿರುವ ಬಿಬಿಎಂಪಿ, ಅಲ್ಲಿನ ನಿವಾಸಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.
ಬೆಂಗಳೂರಿನ ದಕ್ಷಿಣ ವಲಯ ಜಯನಗರ ವಿಧಾನಸಭಾ ಕ್ಷೇತ್ರ ತಿಲಕನಗರ ವ್ಯಾಪ್ತಿಯ ಎಂ.ಎಸ್ ಕಟ್ಟಡ ಹಾಗೂ ರಾಗಿ ಗುಡ್ಡದ ಬಳಿ ಇರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಸ್ಥಳೀಯ ಶಾಸಕರಾ ಸಿ.ಕೆ ರಾಮಮೂರ್ತಿ ಹಾಗೂ ಬಿಬಿಎಂಪಿಯ ವಲಯ ಆಯುಕ್ತ ಜಯರಾಮ್ ರಾಯಪುರ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯ ಕುಂದು ಕೊರತೆ ಆಲಿಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.

ಸದ್ಯ ಈ ಐದು ದಶಕದ ಹಳೆಯ ಎಂ.ಎಸ್ ಕಟ್ಟಡವನ್ನು ತೆರವುಗೊಳಿಸಿ ಅದೇ ಸ್ಥಳದಲ್ಲಿ ಕಟ್ಟಡ ನಿರ್ಮಿಸಲು ಅನುದಾನ ಮೀಸಲಿಡಲಾಗಿತ್ತು. ಆದರೆ, ಕಟ್ಟಡದಲ್ಲಿ ವಾಸವಿರುವ ನಿವಾಸಿಗಳು ಕಟ್ಟಡ ತೆರವುಗೊಳಿಸಿ ನಿರ್ಮಾಣ ಮಾಡಲು ಸಾಕಷ್ಟು ಸಮಯಾವಕಾಶ ಬೇಕಾಗಿದೆ.
ಈ ಸಂಬಂಧ ಹಾಲಿ ಕಟ್ಟಡದಲ್ಲಿ ವಾಸವಿರುವ ಎಲ್ಲಾ ಕುಟುಂಬಗಳಿಗೆ ಖಾಲಿ ನಿವೇಶನ(ಸೈಟ್) ನೀಡಲು ಮನವಿ ಮಾಡಿದರು. ಇದಕ್ಕೆ ವಲಯ ಆಯುಕ್ತರು ಪ್ರತಿಕ್ರಿಯಿಸಿ, ಎಂ.ಎಸ್ ಕಟ್ಟಡದಲ್ಲಿ ವಾಸವಿರುವ ನಿವಾಸಿಗಳಿಗೆ ಸೈಟ್ ನೀಡುವ ವಿಚಾರವಾಗಿ ನಿಯಮಾನುಸಾರ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಹಳೆಯ ಎಂ.ಎಸ್ ಕಟ್ಟಡದಲ್ಲಿ ಒಟ್ಟು 64 ಮನೆಗಳಿವೆ. ಪಾಲಿಕೆ ವತಿಯಿಂದ 64 ಮನೆಗಳಲ್ಲಿ ವಾಸಿಸುವ ನಿವಾಸಿಗಳಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ. ಸದ್ಯಕ್ಕೆ ಕಟ್ಟಡ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ದುರಸ್ಥಿ ಕಾಮಗಾರಿಗಳನ್ನು ನಡೆಸಲು ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.
ಒಣ ತ್ಯಾಜ್ಯ ಸಂಗ್ರಹಣಾ ಘಟಕ ಪರಿಶೀಲನೆ
ರಾಗಿಗುಡ್ಡ ಸ್ಲಂ ಬಳಿಯಿರುವ ಒಣ ತ್ಯಾಜ್ಯ ಸಂಗ್ರಹಣಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಲಯ ಆಯುಕ್ತರು, ಒಣ ತ್ಯಾಜ್ಯ ಸಂಹ್ರಹಣಾ ಘಟಕವನ್ನು ಸರಿಯಾಗಿ ನಿರ್ವಹಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸ್ಥಳದಲ್ಲಿ ಸುಮಾರು 2 ಎಕರೆಯ ಪಾಲಿಕೆಯ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೆಡ್ ಗಳನ್ನು ನಿರ್ಮಾಣ ಮಾಡಿಕೊಂಡು ವಾಸವಿದ್ದಾರೆ. ಈ ಪೈಕಿ ಅನಧಿಕೃತ ಒತ್ತುವರಿಗಳನ್ನು ತೆರವುಗೊಳಿಸಿ ಉದ್ಯಾನವನ ಹಾಗೂ ಆಟದ ಮೈದಾನವನ್ನು ನಿರ್ಮಾಣ ಮಾಡಲು ಸೂಚನೆ ನೀಡಿದರು.
ಆಯುಕ್ತರ ಪರಿಶೀಲನೇ ಈ ವೇಳೆ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಮಹಂತೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಸಂಬಂಧಪಟ್ಟ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ರಸ್ತೆ ಬದಿ ಒಣಗಿದ ಮರ-ಕೊಂಬೆ ಮಾಹಿತಿ ನೀಡಿ: ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ. ಈ ಸಂಬಂಧ ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ವಲಯವಾರು ಅಧಿಕಾರಿಗಳಿಗಳ ದೂರವಾಣಿ ಸಂಖ್ಯೆಗೆ( ಪ್ರತಿ ಲಗತ್ತಿಸಿದೆ ) ವಾಟ್ಸ್ ಅಪ್ ಫೋಟೋ ಮೂಲಕ ಮಾಹಿತಿ ನೀಡಬೇಕು. ಈ ಕುರಿತು ಬೆಂಗಳೂರು ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.
ಮಾಹಿತಿ ನೀಡಲು ಸಂಪರ್ಕಿಸಿ
* ಪೂರ್ವ ವಲಯ- ತಿಮ್ಮಪ್ಪ, ವಲಯ ಅರಣ್ಯಾಧಿಕಾರಿ, ದೂರವಾಣಿ: 93800 90027
* ಪಶ್ಚಿಮ ವಲಯ -ಶಿವರಾಮು, ದೂರವಾಣಿ 94496 59252.
* ದಕ್ಷಿಣ ವಲಯ - ಚಿದಾನಂದ್ ಎಲ್.ಬಿ., ದೂರವಾಣಿ 97427 33666 / 94806 85399
* ದಾಸರಹಳ್ಳಿ ವಲಯ- ರಾಜಪ್ಪ ಕೆ.ಎನ್. ದೂರವಾಣಿ 94482 34928
* ಬೊಮ್ಮನಹಳ್ಳಿ ವಲಯ - ಹರೀಶ್.ಹೆಚ್.ಆರ್, ದೂರವಾಣಿ 76769 21529/94806 85039
* ಯಲಹಂಕ ವಲಯ - ಚಂದ್ರಪ್ಪ ವಿ, ದೂರವಾಣಿ 91640 42566.
* ಆರ್‌ಆರ್ ನಗರ ವಲಯ - ಮುತ್ತುರಾಜ್.ಕೆ.ಪಿ, ದೂರವಾಣಿ 98805 16322 /94831 39438
* ಮಹದೇವಪುರ ವಲಯ - ಸುದರ್ಶನ. ಎ. ದೂರವಾಣಿ 78995 55182.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Iran-US-Israel War: ಪಾಕಿಸ್ತಾನದ ಮಧ್ಯಪ್ರವೇಶದಿಂದಾಗಿ ಇರಾನ್ ಮೇಲೆ ವಿನಾಶಕಾರಿ ಬಾಂಬ್ ದಾಳಿ ಇಲ್ಲ: ಡೊನಾಲ್ಡ್ ಟ್ರಂಪ್












Click it and Unblock the Notifications