ಇನ್ಸ್ಟಾಗ್ರಾಮ್ ಲವ್‌ಸ್ಟೋರಿ: ಬೆಂಗಳೂರಲ್ಲಿ ರಸ್ತೆಯಲ್ಲೇ ಯುವತಿಗೆ ಟಾರ್ಚರ್, ವೈರಲ್ ವಿಡಿಯೋ
ಬೆಂಗಳೂರು: ಬೆಂಗಳೂರಿನಲ್ಲಿ ಇನ್ಸ್ಟಾಗ್ರಾಮ್‌ನ ಮೂಲಕ ಪರಿಚಯವಾದ ವ್ಯಕ್ತಿಯು, 21 ವರ್ಷದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಬುಧವಾರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಏನಿದು ಇನ್ಸ್ಟಾಗ್ರಾಮ್ ಪರಿಚಯ ಹಾಗೂ ಹಲ್ಲೆ ಪ್ರಕರಣ ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಅಲ್ಲದೇ ದೇಶದಾದ್ಯಂತ ಈ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಆರೋಪಿಯು ಮಹಿಳೆಯೊಂದಿಗೆ ಇನ್ಸ್ಟಾಗ್ರಾಮ್‌ನ ಮೂಲಕ ಪರಿಚಿತರಾಗಿದ್ದು, ಪ್ರೀತಿಸುವಂತೆ ಯುವಕ ಒತ್ತಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪ್ರೀತಿಸುವುದಕ್ಕೆ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಡು ರಸ್ತೆಯಲ್ಲಿ ಆಕೆಯ ಬಟ್ಟೆ ಹರಿದು ಹಾಕುವುದಕ್ಕೆ ಯುವಕ ಪ್ರಯತ್ನಿಸಿದ್ದಾನೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಬೆಂಗಳೂರಿನಲ್ಲಿ ಡಿಸೆಂಬರ್ 22ರ ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ಆರೋಪಿ ಮಾಡಿರುವ ದುರ್ವರ್ತನೆ ರೆಕಾರ್ಡ್ ಆಗಿದೆ. ಈ ಪ್ರಕರಣವು ದೇಶದಾದ್ಯಂತ ಸುದ್ದಿಯಾಗಿತ್ತು. ಬೆನ್ನಲ್ಲೆ ಬೆಂಗಳೂರು ಪೊಲೀಸರು ಅಲರ್ಟ್ ಆಗಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ ಏನು ?
ಆರೋಪಿ ಹಾಗೂ ಯುವತಿ ಸೋಷಿಯಲ್ ಮೀಡಿಯಾ ಇನ್ಸ್ಟಾಗ್ರಾಮ್‌ನಲ್ಲಿ ಪರಿಚಿತರಾಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಯು ಯುವತಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಆದರೆ ಯುವತಿ ನಿರಾಕರಿಸಿದ್ದಾರೆ. ಸೋಮವಾರ ಮಧ್ಯಾಹ್ನದ ವೇಳೆ ಮಹಿಳೆ ಆ್ಯಪ್ ಆಧಾರಿತ ಸ್ಕೂಟಿಯೊಂದರ ಬಳಿ ನಿಂತಿದ್ದು, ಆರೋಪಿಯು ಮಧ್ಯಾಹ್ನ 3.20 ರ ಸುಮಾರಿಗೆ ಕಾರಿನಲ್ಲಿ ಸ್ಥಳಕ್ಕೆ ಆಗಮಿಸಿದ್ದಾನೆ.
ಈ ಸಂದರ್ಭದಲ್ಲಿ ಆರೋಪಿಯು ಮಹಿಳೆಯ ತಲೆ ಮತ್ತು ಬೆನ್ನಿಗೆ ಪದೇ ಪದೇ ಹಲ್ಲೆ ಮಾಡಿದ್ದು, ರಸ್ತೆಯ ಉದ್ದಕ್ಕೂ ಎಳೆದಾಡಿದ್ದಾನೆ. ಈ ಘಟನೆಯನ್ನು ಕೆಲವರು ಹತ್ತಿರದಿಂದ ನೋಡಿದ್ದರೂ ಯಾರೂ ಮಧ್ಯಪ್ರವೇಶಿಸಲಿಲ್ಲ.
ನವೀನ್ ಮತ್ತು ಮಹಿಳೆ ಈ ವರ್ಷದ ಆರಂಭದಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹಿತರಾದರು. ಇಬ್ಬರೂ ಸಹ ಮೆಸೇಜ್ ಹಾಗೂ ಪೋನ್‌ನ ಮೂಲಕ ಪರಸ್ಪರ ಸಂಪರ್ಕದಲ್ಲಿದ್ದರು. ನವೀನ್ ಪದೇ ಪದೇ ಮಹಿಳೆಯೊಂದಿಗೆ ಪ್ರೀತಿಸುವಂತೆ ಒತ್ತಡ ಹೇರುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ನಡೆದ ದಿನ ನವೀನ್ ತನ್ನ ಕಾರಿನಲ್ಲಿ ಮಹಿಳೆಯ ಪೇಯಿಂಗ್ ಗೆಸ್ಟ್ (ಪಿಜೆಗೆ) ಹೋಗಿದ್ದ ಎಂದು ವರದಿಯಾಗಿದೆ. ಆಕೆ ಹೊರಗೆ ನಿಂತಿರುವುದನ್ನು ನೋಡಿ, ಆಕೆಯನ್ನು ಬೆದರಿಸಿ ಸಾರ್ವಜನಿಕರ ಮುಂದೆಯೇ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಅದೇ ದಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದರಲ್ಲಿ ಬಿಎನ್‌ಎಸ್-2023 ರ ಸೆಕ್ಷನ್ 74, 75, 76, 78, 79, ಮತ್ತು 351(2) ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದರು. ಪ್ರಕರಣದಲ್ಲಿ ಪೊಲೀಸರು ತ್ವರಿತವಾಗಿ ಕಾರ್ಯಪ್ರವೃತ್ತರಾಗಿದ್ದು, 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
A disturbing incident of alleged sexual harassment has been reported from #Bengaluru, highlighting the risks linked to online friendships.
— Hate Detector 🔍 (@HateDetectors) December 24, 2025
The case falls under the jurisdiction of the Jnanabharathi Police Station and occurred near #UllalMainRoad, close to #Jnanajyothinagar.… https://t.co/j8GqW1VlIn pic.twitter.com/kRIhSOK1It
ವಿಡಿಯೋ ವೈರಲ್
ಇನ್ನು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ "Hate Detector" / @HateDetectors ಎನ್ನುವ ಖಾತೆಯಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು. ವಿಡಿಯೋ ವೈರಲ್ ಆಗುತ್ತಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್












Click it and Unblock the Notifications