ಗುಪ್ತಚರ ಇಲಾಖೆ ವರದಿ : ಬೆಂಗಳೂರಿನಲ್ಲಿ ಹೈ ಅಲರ್ಟ್
Recommended Video
ಬೆಂಗಳೂರು, ಆಗಸ್ಟ್ 16 : ಕೇಂದ್ರ ಗುಪ್ತಚರ ಇಲಾಖೆ ವರದಿ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ದೇಶದ ನಾಲ್ಕು ನಗರಗಳ ಮೇಲೆ ದಾಳಿ ನಡೆಯಬಹುದು ಎಂದು ವರದಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ನಗರಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ವರದಿ ನೀಡಿದೆ. ಈ ಹಿನ್ನಲೆಯಲ್ಲಿ ಶುಕ್ರವಾರ ಸಂಜೆಯಿಂದಲೇ ಭದ್ರತೆ ಹೆಚ್ಚಳ ಮಾಡಲಾಗಿದೆ.
ಕೇಂದ್ರ ಗೃಹ ಇಲಾಖೆ ಬೆಂಗಳೂರು ನಗರ ಪೊಲೀಸರಿಗೆ ಗುಪ್ತಚರ ಇಲಾಖೆ ವರದಿ ಅನ್ವಯ ಕ್ರಮ ಕೈಗೊಳ್ಳಲು ಸೂಚನೆ ನೀಡಿತ್ತು. ಆದ್ದರಿಂದ, ತಕ್ಷಣದಿಂದಲೇ ನಗರದಲ್ಲಿ ಭದ್ರತೆ ಹೆಚ್ಚಳ ಮಾಡಲು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ನಗರದ ಪ್ರಮುಖ ಪ್ರದೇಶಗಳಾದ ಮೆಟ್ರೋ ನಿಲ್ದಾಣ, ಮಾಲ್, ವಿಧಾನಸೌಧ, ಹೈಕೋರ್ಟ್, ಬಸ್ ನಿಲ್ದಾಣ, ವಿಕಾಸಸೌಧ ಸೇರಿದಂತೆ ಜನನಿಬೀಡ ಮತ್ತು ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಹಲವು ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಬೇಕು. ಜಂಟಿ ಆಯುಕ್ತರ ನೇತೃತ್ವದಲ್ಲಿ ಪೊಲೀಸರ ತಂಡ ಸನ್ನದ್ಧವಾಗಿರಬೇಕು ಎಂದು ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ.











Click it and Unblock the Notifications