ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆದ್ರೆ ಉತ್ತರ ಕರ್ನಾಟಕಕ್ಕೆ ಏನೆಲ್ಲಾ ಪ್ರಯೋಜನೆಗಳಿವೆ?
Bengaluru 2nd Airport: ಈಗಾಗಲೇ ಬೆಂಗಳೂರಿನಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತು ವಿಮಾನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆ ನಗರದ ಸಮೀಪ ಮತ್ತೊಂದು ಅಂತಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಸ್ಥಳ ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ನಡುವೆಯೇ ಇದೀಗ ತುಕೂರಿನಲ್ಲೇ ನಿರ್ಮಾಣ ಮಾಡಬೇಕು ಎನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ.
ಬೆಂಗಳೂರು ಹತ್ತಿರದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಈಗಾಗಲೇ ಜಾಗ ಗುರುತಿಸುವ ಪ್ರಕ್ರಿಯೆ ಆರಂಭ ಆಗಿದೆ. ಇದೀಗ ಮಧ್ಯ ಕರ್ನಾಟಕದ ಭಾಗ ಆಗಿರುವ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವುದರಿಂದ ಉತ್ತರ ಕರ್ನಾಟಕಕ್ಕೆ ಏನೆಲ್ಲೆ ಪ್ರಯೋಜನಾಗಳಿಗೆ ಎಂದು ವಿಪಕ್ಷ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ, ಉತ್ತರ ಕರ್ನಾಟಕದ ಅಭಿವೃದ್ಧಿಗೂ ಪೂರಕ ಆದಂತಾಗುತ್ತದೆ ಎಂದು ಬಿಜೆಪಿ ನಾಯಕರಾದ ಅರವಿಂದ ಬೆಲ್ಲದ ಅವರು ಹೇಳಿದರು. ಇನ್ನು ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ನಗರದ ಕಚೇರಿಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತುಮಕೂರಿನಿಂದ 60 ಕಿ.ಮೀ ದೂರದಲ್ಲಿ ಚಿತ್ರದುರ್ಗ ಇದೆ. ಆದ್ದರಿಂದ ಬೆಂಗಳೂರು-ಚಿತ್ರದುರ್ಗದವರೆಗೆ ಕೈಗಾರಿಕೆಗಳು ಸ್ಥಾಪನೆಯಾದರೆ ಈ ಭಾಗಕ್ಕೂ ಅನುಕೂಲ ಆಗುತ್ತದೆ ಎಂದರು.
ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕಕ್ಕೂ ಕೈಗಾರಿಕೆಗಳು ಬರುತ್ತವೆ. ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯ ಇದೆ ಎಂಬ ಮುಖ್ಯಮಂತ್ರಿ ಅವರ ಹೇಳಿಕೆಗೆ ಇದೇ ಕಾರಣಕ್ಕಾಗಿ ತುಮಕೂರಿನ ಹೆಸರು ಹೇಳಿದ್ದಾಗಿ ಸ್ಪಷ್ಟಪಡಿಸಿದರು.
ಅಂತಾರಾಷ್ಟ್ರೀಯ ಗುಣಮಟ್ಟದ ಹುಬ್ಬಳ್ಳಿಯ ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯ ಈಗಾಗಲೇ ಆರಂಭ ಆಗಿದ್ದು, ಒಂದೇ ಬಾರಿ 8 ವಿಮಾನಗಳು ನಿಲುಗಡೆ ಆಗಲಿವೆ. ಇಲ್ಲಿಯೂ ಪ್ರಯಾಣಿಕರ ಸಂಚಾರ, ಸರಕು ಸಾಗಣೆ ಹೆಚ್ಚಾದರೆ, ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಸಹ ಅಂತಾರಾಷ್ಟ್ರೀಯ ಸ್ಥಾನ ಪಡೆಯುತ್ತದೆ ಎಂದು ಹೇಳಿದರು.
ಎನ್‌ಜಿಇಎಫ್ ಅಭಿವೃದ್ಧಿಗೆ ಸರ್ಕಾರ ಅಗತ್ಯ ಅನುದಾನ ನೀಡಬೇಕು. ಹುಬ್ಬಳ್ಳಿ-ಧಾರವಾಡದಲ್ಲಿ ತ್ಯಾಜ್ಯದ ಗುಡ್ಡವನ್ನು ಕರಗಿಸಲು ಅನುಭವ ಇರುವ ಗುತ್ತಿಗೆದಾರರಿಗೆ ಟೆಂಡರ್ ನೀಡಿದ್ದು, ಶೀಘ್ರ ಕಾರ್ಯ ಆರಂಭ ಆಗಲಿದೆ ಎಂದರು. ಇನ್ನು ಹುಬ್ಬಳ್ಳಿಯಲ್ಲಿ ಈಗಿರುವ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳುಳ್ಳ ಮನವಿಯಯನ್ನು ಸಂಘದ ವತಿಯಿಂದ ಅರವಿಂದ ಬೆಲ್ಲದ ಅವರಿಗೆ ನೀಡಲಾಗಿದೆ.












Click it and Unblock the Notifications