ಭವಿಷ್ಯದಲ್ಲಿ ಪುರುಷರನ್ನು ಒಳಗೊಂಡ ಮಹಿಳಾ ದಿನಾಚರಣೆ ಆಗಬೇಕು: ಸಿಎಂ ಬೊಮ್ಮಾಯಿ ಹೀಗೆ ಹೇಳಿದ್ದೇಕೆ?

ಜನ್ಮಪೂರ್ವದಿಂದಲೂ ತಾಯಿಯೊಂದಿಗೆ ಸಂಬಂಧ ಹೊಂದಿರುವ ಪುರಷರನ್ನು ಒಳಗೊಂಡು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಗಬೇಕು ಎಂದು ಈ ಬಗ್ಗೆ ವಿವರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಬೆಂಗಳೂರು, ಮಾರ್ಚ್ 08: ಜನ್ಮಪೂರ್ವದಿಂದಲೂ ತಾಯಿಯೊಂದಿಗೆ ಪವಿತ್ರ ಸಂಬಂಧ ಹೊಂದಿರುವ ಪುರಷರನ್ನು ಒಳಗೊಂಡು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ 'ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ' ಕಾರ್ಯಕ್ರಮ ಉದ್ಘಾಟಿಸಿ ಮತ್ತು 'ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ' ಮಾಡಿ ಅವರು ಮಾತನಾಡಿದರು.

International Womens day must be celebrated with men says CM Basavaraj Bommai

ಪುರಷನು ತಾನು ಹುಟ್ಟು ಮೊದಲಿಂದಲೂ ತಾಯಿಯೊಂದಿಗೆ ಪವಿತ್ರ ಸಂಬಂಧ ಹೊಂದಿರುತ್ತಾನೆ. ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುವುದು ಪುರುಷನೇ ಆಗಿದ್ದಾನೆ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ, ಹೀಗಾಗಿ ಗಂಡು ಮಕ್ಕಳಿಗೆ ಮಹಿಳೆಯರ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಗತ್ತಿನ ಎಲ್ಲಾ ದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ನಮ್ಮದು ಪುರುಷ ಪ್ರಧಾನ ಸಮಾಜ ಆದರೆ, ಮೊದಲಿಂದ ನೋಡಿದರೆ, ಮಹಿಳೆ ಸಾಕಷ್ಟು ಸಾಧನೆ ಮಾಡಿದ್ದಾಳೆ. ನಮ್ಮ ಪುರಾಣಗಳಲ್ಲಿ ಮಹಿಳೆಯರು ಸಾಕಷ್ಟು ಮಹತ್ವ ಪಡೆದಿದ್ದಾರೆ. ಸ್ವಾತಂತ್ರ್ಯ. ಹೋರಾಟದಲ್ಲಿ ಕಿತ್ತೂರು ಚೆನ್ನಮ್ಮ ಕಹಳೆ ಊದಿದರು. ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ‌. ಗ್ರಾಮೀಣ ಆರ್ಥಿಕತೆಯಲ್ಲಿ ಮಹಿಳೆಯರ ಪಾಲುದಾರಿಗೆ ಹೆಚ್ಚು ಎಂದು ಮಹಿಳೆಯರ ಪಾತ್ರ, ಶೌರ್ಯ ಸಾಧನೆಯನ್ನು ಮುಖ್ಯಮಂತ್ರಿಗಳು ಬಣ್ಣಿಸಿದರು.

ಮಹಿಳೆಯರು ಸಮಸ್ಯೆಯ ಜೊತೆಗೆ ಬದುಕುತ್ತಿದ್ದಾರೆ. ಹೀಗಾಗಿ ಈ ವರ್ಷ ಬಜೆಟ್ ನಲ್ಲಿ ಹೊಲದಲ್ಲಿ ಕೆಲಸ ಮಾಡುವ ಎಲ್ಲ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ನೀಡಲು ತಿರ್ಮಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತರು ಎಲ್ಲ ಮಕ್ಕಳ ತಾಯಿಯಾಗಿ‌ ಕೆಲಸ ಮಾಡುತ್ತಿದ್ದಾರೆ. ಅವರ ಸಹನೆ ಮೆಚ್ಚುವಂತದ್ದು, ಅವರಿಗೆ ಕಳೆದ ವರ್ಷ 1000 ರೂ. ಈ ವರ್ಷ ಒಂದು ಸಾವಿರ. ರೂ. ಹೆಚ್ಚಳ ಮಾಡಲಾಗಿದೆ. ಉದ್ಯೋಗ, ಶಿಕ್ಷಣ ಮತ್ತು ಸಬಲೀಕರಣ ಎಂಬ ಮೂರು ಮಂತ್ರ ಅಳವಡಿಸಿಕೊಂಡು ಶಿಕ್ಷಣದ ಮೇಲೆ ಬಂಡವಾಳ ಹೂಡಿಕೆ ಮಾಡಲಾಗಿದೆ. ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಕೊಡಲು‌ ತಿರ್ಮಾನಿಸಲಾಗಿದೆ ಎಂದರು.

International Womens day must be celebrated with men says CM Basavaraj Bommai

ಸ್ತ್ರೀ ಸಾಮರ್ಥ್ಯ ಯೋಜನೆಯಡಿ ನೆರವು

ಸ್ತ್ರೀ ಸಾಮರ್ಥ್ಯ ಯೋಜನೆ ಅಡಿ 5 ಲಕ್ಷ ರೂ. ನೀಡಲಾಗುತ್ತಿದೆ. ಆರೂವರೆ ಕೊಟೆ ಜನಸಂಖ್ಯೆ ಇದೆ‌.‌ 13 ಕೋಟಿ ಕೈಗಳು ಕೆಲಸ ಮಾಡಿದರೆ ಇನ್ನೂ ಹೆಚ್ಚು ಅಭಿವೃದ್ದಿ ಸಾಧಿಸಲು ಸಾಧ್ಯ. ಸ್ತ್ರೀ ಶಕ್ತಿ ಯಿಂದ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬ ನಂಬಿಕೆ ನಮ್ಮ ಸರ್ಕಾರದ್ದು. ಮಹಿಳೆಯ ಸುರಕ್ಷತೆಗೆ ಸರ್ಕಾರ ವ್ಯವಸ್ಥೆ ಕಲ್ಪಿಸಿದೆ. ಸುರಕ್ಷಿತ ನಗರ ಯೋಜನೆ ಗೆ ಚಾಲನೆ ನೀಡಲಾಗಿದೆ. ಏಳು ಸಾವಿರ ಕ್ಯಾಮೆರಾ ಅಳವಡಿಸಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. 400 ವಾಹನಗಳನ್ನು ಒದಗಿಸಲಾಗಿದೆ. ಈ ಯೋಜನೆಯನ್ನು ತಾಲ್ಲೂಕು ಕೇಂದ್ರ ಹಾಗೂ ಎಲ್ಲಾ ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

ಹಣ ಉಳಿತಾಯ ಪ್ರವೃತ್ತಿಯಿಂದ ಆರ್ಥಿಕತೆ ಸದೃಢ

ಮಹಿಳೆಯರು ಹಣ ಉಳಿತಾಯ ಮಾಡುವ ಪ್ರವೃತ್ತಿಯಿಂದ ನಮ್ಮ ಆರ್ಥಿಕತೆ ಇನ್ನೂ ಸದೃಢವಾಗಿದೆ. ಅಮೇರಿಕಾದ ಬ್ಯಾಂಕುಗಳು ದಿವಳಿಯಾದರೂ ನಮ್ಮ ಮಹಿಳೆಯರ ಉಳಿತಾಯ ಸಂಸ್ಕೃತಿ ಆರ್ಥಿಕತೆಗೆ ಕೊಡುಗೆಯಾಗಿದೆ. ಯಾರದೇ ಮನೆಯಲ್ಲಿ ಹುಟ್ಟಿದರೂ ನಾವು ಬೆಳೆದು ಇತರರಿಗೆ ನೆರವಾಗುವ ಕೆಲಸ ಮಾಡಬೇಕು. ಇದರಿಂದ ಸಮಾಜಕ್ಕೆ ಅನುಕೂಲವಾಗಲಿದೆ. ಐಟಿ ಬಿಟಿ, ಬ್ಯಾಂಕಿಂಗ್ ಕ್ಷೇತ್ರ, ಸೇರಿದಂತೆ ಎಲ್ಲಾ ರಂಗದಲ್ಲಿಯೂ ಮುಂದಿರುವ ಮಹಿಳೆಯರು ವಿಮಾನ, ಬಸ್, ಟ್ರಕ್, ಟ್ರ್ಯಾಕ್ಟರ್ ಎಲ್ಲವನ್ನೂ ಓಡಿಸುತ್ತಾರೆ. ಕನ್ನಡದ ಮಹಿಳೆಯರು ಅಂತಾರಾಷ್ಟ್ರೀಯ ‌ಮಟ್ಟದಲ್ಲಿ ಹೆಸರು ಮಾಡಬೇಕು ಎಂದು ಬೊಮ್ಮಾಯಿ ಆಶಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲು ಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ.ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ; ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ:ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+