ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯುವ ಬರಹಗಾರರ ಚೊಚ್ಚಲ ಕೃತಿ : ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By Prasad
|
Google Oneindia Kannada News

ಬೆಂಗಳೂರು, ಜೂನ್ 17 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು 18ರಿಂದ 35 ವರ್ಷದವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ ಅಥವಾ ಅಧಿಕೃತ ಜನ್ಮ ದಾಖಲಾತಿ ಪ್ರಮಾಣಪತ್ರದ ಪ್ರತಿಯನ್ನು ಸಲ್ಲಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯ ಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ, ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. [ಮನಮೋಹನ್ ಸಿಂಗ್ 'ಪಿಎಂ' ಆದ ಕಥೆ ತೆರೆಗೆ]

Invite to young Kannada creative writers

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೇ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು.

ಪ್ರಾಧಿಕಾರಕ್ಕೆ ಸಲ್ಲಸಲ್ಪಡುವ ಅರ್ಜಿಗಳನ್ನು ಅಥವಾ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಹಸ್ತಪ್ರತಿಯ ಅಥವಾ ಡಿ.ಟಿ.ಪಿ ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂನ್ 30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಇವರಿಗೆ ಸಲ್ಲಿಸಬಹುದಾಗಿದೆ. [ಕೊಡಗಿನ ಶಾಂತಿ ಅಪ್ಪಣ್ಣ ಕಥಾಸಂಕಲನಕ್ಕೆ ಬಹುಮಾನ]

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ : 080-22484516 ಅಥವಾ 22017704 ಇವರನ್ನು ಸಂಪರ್ಕಿಸಬಹುದು.

English summary
Kannada book authority has invited young Kannada writers to send their creative write ups for publication. June 30 is the last date to send their articles. But, the write ups should be free from any controversies or personal attacks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X