RCB vs LSG: ನಾಳೆ ಆರ್‌ಸಿಬಿ ಮ್ಯಾಚ್ ನೋಡಲು ಹೋಗುವ ಮುನ್ನ ಒಮ್ಮೆ ಗಮನಿಸಿ
ಬೆಂಗಳೂರು, ಏಪ್ರಿಲ್. 01: ಮಂಗಳವಾರ (ಏಪ್ರಿಲ್ 02) ರಂದು ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ 2024 ರ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ ತಂಡವನ್ನು ಎದುರಿಸಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.
ಇದರ ಬೆನ್ನಲ್ಲೇ ನಾಳಿನ ಪಂದ್ಯ ನೋಡಲು ಬರುವವರು ಮತ್ತು ವಾಹನ ಸವಾರರಿಗಾಗಿ ಬೆಂಗಳೂರು ಸಂಚಾರಿ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಎಲ್ಲೇಲ್ಲಿ ವಾಹನಗಳನ್ನು ನಿಲುಗಡೆ ಮಾಡಬಾರದು, ಎಲ್ಲಿ ವಾಹನ ಪಾರ್ಕಿಂಗ್ ಸೌಲಭ್ಯವಿದೆ ಎಂಬ ಬಗ್ಗೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

"ದಿನಾಂಕ: 02.04.2024 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮದ್ಯಾಹ್ನ 03:00 ಗಂಟೆಯಿಂದ ರಾತ್ರಿ 11:00 ಗಂಟೆಯವರೆಗೆ ರಸ್ತೆ ಬಳಕೆದಾರರ ಅನುಕೂಲಕ್ಕಾಗಿ ಈ ಕೆಳಕಂಡಂತೆ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ" ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ
* ಕ್ಲೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ.
* ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ. ಮ್ಯೂಸಿಯಂ ರಸ್ತೆ
* ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ
* ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆ.
ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು
* ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ
* ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ
* ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್
* ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ)












Click it and Unblock the Notifications