RCB vs CSK Match: ಚಾಲೆಂಜ್ ಹಾಕಿ ಪೊಲೀಸರ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್
ಬೆಂಗಳೂರು, ಮೇ. 19: ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್ ಮಾಡಿದ್ದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಒಬ್ಬರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮೇ 18 ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಪಂದ್ಯ ನಡೆಯುತ್ತಿತ್ತಯ. ಈ ವೇಳೆ ಭದ್ರತೆಯನ್ನು ಉಲ್ಲಂಘಿಸಿ ಪಿಚ್‌ಗೆ ನುಗ್ಗುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ನಿತಿನ್ ಸಿಕ್ವೇರಿಯಾ ಹೇಳಿಕೊಂಡಿದ್ದರು.

ಈ ವಿಡಿಯೋ ವೈರಲ್ ಆಗಿದ್ದು, ಭದ್ರತೆಯನ್ನು ಉಲ್ಲಂಘಿಸಲು ಯತ್ನಿಸಿದ್ದಕ್ಕಾಗಿ ಕಬ್ಬನ್ ಪಾರ್ಕ್ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 50 ಸಾವಿರ (50K) ಫಾಲೋವರ್ಸ್ ಬಂದರೆ ಆರ್‌ಸಿಬಿ ಪಂದ್ಯದ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಓಡುವುದಾಗಿ ತಮ್ಮ ಫಾಲೋವರ್ಸ್‌ಗೆ ಭರವಸೆ ನೀಡಿದ್ದರು ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ನಿತಿನ್ ಸಿಕ್ವೇರಿಯಾ.
ಫಾಲೋವರ್ಸ್‌ಗಾಗಿ ಫೀಲ್ಡ್‌ಗೆ ದುಮುಕುವ ಚಾಲೆಂಜ್
50 ಸಾವಿರ ಫಾಲೋವರ್ಸ್ ಪಡೆದ ಬಳಿಕ, ನಿತಿನ್ ಸಿಕ್ವೇರಿಯಾ ಅವರು ಮೇ 18 ರಂದು ಕ್ರೀಡಾಂಗಣಕ್ಕೆ ಹೇಗೆ ಜಿಗಿಯಲಿದ್ದಾರೆ ಎಂಬುದರ ಕುರಿತು ವೀಡಿಯೊಗಳನ್ನು ಪೋಸ್ಟ್ ಮಾಡಲು ಪ್ರಾರಂಭಿಸಿದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಕ್ತವಾದ ಸ್ಟ್ಯಾಂಡ್‌ಗಳಿಗೆ ಟಿಕೆಟ್ ಪಡೆದಿದಿರುವುದಾಗಿಯೂ, ಅಲ್ಲಿಂದ ಅವರು ಸುಲಭವಾಗಿ ಫೀಲ್ಡ್‌ಗೆ ಜಿಗಿಯಬಹುದು ಎಂದು ಹೇಳಿಕೊಂಡಿದ್ದರು.

ನಿತಿನ್ ಸಿಕ್ವೇರಿಯಾ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಬೆಂಗಳೂರು ಪೊಲೀಸರು ಕ್ರೀಡಾಂಗಣದಲ್ಲಿ ಭದ್ರತಾ ಲೋಪವನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಾಯಿತು. ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ. ಟ್ವಿಟರ್ ಪೋಸ್ಟ್‌ನಲ್ಲಿ, ಬೆಂಗಳೂರು ಪೊಲೀಸರು "ಒಳ್ಳೆಯ ಪ್ರಯತ್ನ, ಸ್ನೇಹಿತರೇ! ಆದರೆ ಐಪಿಎಲ್ ಸಮಯದಲ್ಲಿ ಭದ್ರತೆಯನ್ನು ಉಲ್ಲಂಘಿಸಲು ಪ್ರಯತ್ನಿಸಿದರೆ ನೇರವಾಗಿ ಆರು ನಮ್ಮ ಕಸ್ಟಡಿಗೆ ಗ್ಯಾರಂಟಿ" ಎಂದು ವ್ಯಂಗ್ಯದ ಟ್ವೀಟ್ ಹಾಕಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ಇನ್‌ಫ್ಲುಯೆನ್ಸರ್ ಅನ್ನು ವಶಕ್ಕೆ ಪಡೆದಿದ್ದಾರೆ.
Nice try, Buddy! 🏏 But attempting to breach security during #IPL is a guaranteed six straight into our custody. Sorry, mate, you're stumped! #RCBvsCSK #WeServeWeProtect pic.twitter.com/Dj4sMXq9jt
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) May 18, 2024
ಎಂಎಸ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ತಮ್ಮ ನೆಚ್ಚಿನ ಆಟಗಾರರನ್ನು ಭೇಟಿ ಮಾಡಲು ಪಂದ್ಯದ ಸಮಯದಲ್ಲಿ ಅಭಿಮಾನಿಗಳು ಮೈದಾನಕ್ಕೆ ಜಿಗಿದ ಕೆಲವು ನಿದರ್ಶನಗಳಿವೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಎಂಎಸ್ ಧೋನಿ ಅಭಿಮಾನಿಯೊಬ್ಬರು ಪಿಚ್‌ಗೆ ನುಗ್ಗಿ ಧೋನಿ ಪಾದಗಳನ್ನು ಮುಟ್ಟಲು ಯತ್ನಿಸಿದ್ದರು.
ಇನ್ನು, ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಪಡೆಯಲು ಕಾನೂನು ಉಲ್ಲಂಘಿಸುವ ಟೀನೆಜರ್‌ಸ್ ಮೇಲೆ ನಿಗಾ ಇಟ್ಟಿದ್ದಕ್ಕಾಗಿ ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರು ಪೊಲೀಸರನ್ನು ಶ್ಲಾಘಿಸಿದ್ದಾರೆ. ಇಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮನವಿ ಮಾಡಿದ್ದಾರೆ.
ಶನಿವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಐಪಿಎಲ್‌ನಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ.
-
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್‌ಸಿಬಿ ಬಿಗ್ ಅಪ್ಡೇಟ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
IPL 2026 Kannadigas: ಐಪಿಎಲ್ 19ನೇ ಆವೃತ್ತಿಯಲ್ಲಿ ಅಬ್ಬರಿಸಲು ಸಜ್ಜಾದ ಕನ್ನಡದ ಕಲಿಗಳು -
ಆರ್‌ಸಿಬಿ ಟ್ರೋಫಿ ಗೆಲ್ಲುವ ಬಗ್ಗೆ ಭವಿಷ್ಯ ನುಡಿದ 'ಮಿಸ್ಟರ್ 360' ಎಬಿ ಡಿವಿಲಿಯರ್ಸ್: ಡ್ರೆಸ್ಸಿಂಗ್ ರೂಮ್ ಸೀಕ್ರೆಟ್ ರಿವೀಲ್ -
ಬೆಂಗಳೂರಿನಲ್ಲಿ ನಡೆಯುವ ಆರ್‌ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
ಯುಗಾದಿ ಹಬ್ಬದಂದೇ ಆರ್‌ಸಿಬಿ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ ಮನೆಗೆ ಮಹಾಲಕ್ಷ್ಮಿಯ ಆಗಮನ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ












Click it and Unblock the Notifications